ರಾಹುಲ್ ಗಾಂಧಿ ವಯನಾಡಿನಲ್ಲಿ ಉಳಿದಿದ್ದರೆ ಇದು ಕೂಡ ಆಗಿನ ಅಮೇಥಿಯಂತೆಯೇ ಆಗಲಿದೆ: ಸ್ಮೃತಿ ಇರಾನಿ
ತಿರುವನಂತಪುರಂ, ಮೇ. 23: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್‌ನಲ್ಲಿ ಉಳಿದರೆ ಉತ್ತರ ಪ್ರದೇಶದ ಅಮೇಠಿ ಸಂಸದರಾಗಿದ್ದಾಗ ಆದ ಗತಿಯೇ ಆಗಲಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಕಾಲ ಶಿಕ್ಷೆ ವಿಧಿಸುವ ಮೊದಲು ರಾಹುಲ್ ಗಾಂಧಿ ಅವರು ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಈ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮನವಿಯ ತೀರ್ಪನ್ನು ಗುಜರಾತ್ ಹೈಕೋರ್ಟ್ ಕಾಯ್ದಿರಿಸಿದೆ.

ತಿರುವನಂತಪುರಂನಲ್ಲಿ ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ಕೇರಳ ಘಟಕವು ಆಯೋಜಿಸಿದ್ದ ರಾಜ್ಯ ಮಟ್ಟದ ಮಹಿಳಾ ಕಾರ್ಮಿಕ ಸಮಾವೇಶವನ್ನು ಉದ್ಘಾಟಿಸಿದ ನಂತರ, ಮಾತನಾಡಿದ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯನ್ನು ಅಮೇಠಿಯಿಂದ ಕಳುಹಿಸಿದ ಅದೃಷ್ಟವನ್ನು ನಾನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.
"ಅದಕ್ಕೆ ಕಾರಣ ಅವರು ಅಮೇಥಿ ಸಂಸದರಾಗಿದ್ದಾಗ ಅಲ್ಲಿನ ಶೇ 80ರಷ್ಟು ಜನರಿಗೆ ವಿದ್ಯುತ್ ಸಂಪರ್ಕ ಇರಲಿಲ್ಲ, ಜಿಲ್ಲಾಧಿಕಾರಿ ಕಚೇರಿ, ಅಗ್ನಿಶಾಮಕ ಠಾಣೆ, ವೈದ್ಯಕೀಯ ಕಾಲೇಜು, ಕೇಂದ್ರೀಯ ವಿದ್ಯಾಲಯ, ಸೈನಿಕ ಶಾಲೆ ಇರಲಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರ ಅಥವಾ ಎಕ್ಸ್ ರೇ ಯಂತ್ರ ಇರಲಿಲ್ಲ. ಅವರು ಹೋದ ನಂತರ, ಈ ಎಲ್ಲಾ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳು ಅಲ್ಲಿ ಸಿಕ್ಕಿವೆ" ಎಂದಿದ್ದಾರೆ.

ಮುಂದುವರಿದು, " ಹೀಗಾಗಿ ಅವರು ವಯನಾಡಿನಲ್ಲಿ ಉಳಿದುಕೊಂಡರೆ, ಅಮೇಥಿಯಂತೆಯೇ ಅದು ಕೂಡ ಅನುಭವಿಸುತ್ತದೆ. ಆದ್ದರಿಂದ, ಅವರನ್ನು ಇಲ್ಲಿ ಉಳಿಸಿಕೊಳ್ಳುವುದಿಲ್ಲ ಎಂದು ನೀವು ಖಚಿತಪಡಿಸಿಕೊಳ್ಳಬೇಕು" ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹೇಳಿದ್ದಾರೆ. ತಾವು ದೆಹಲಿ ಅಥವಾ ಅಮೇಠಿಯಲ್ಲಿದ್ದರೂ, ವಯನಾಡಿನ ಬಗ್ಗೆ ಹೆಚ್ಚು ಚಿಂತಿಸುತ್ತಾರೆ. ಆದ್ದರಿಂದ ಇಲ್ಲಿನ 250 ಅಂಗನವಾಡಿಗಳನ್ನು 'ಸಕ್ಷಮ್' (ಸಮರ್ಥ) ಅಂಗನವಾಡಿಗಳಾಗಿ ಪರಿವರ್ತಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಸಕ್ಷಮ್ ಅಂಗನವಾಡಿಯು ಕೇಂದ್ರ ಪ್ರಾಯೋಜಿತ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಅಂಗನವಾಡಿಗಳಿಗೆ ಆರು ಸೇವೆಗಳ ಪ್ಯಾಕೇಜ್ ಅನ್ನು ಒದಗಿಸುತ್ತವೆ. ಅವುಗಳೆಂದರೆ ಪೂರಕ ಪೋಷಣೆ, ಪೂರ್ವ ಶಾಲಾ ಅನೌಪಚಾರಿಕ ಶಿಕ್ಷಣ, ಪೋಷಣೆ ಮತ್ತು ಆರೋಗ್ಯ ಶಿಕ್ಷಣ, ರೋಗನಿರೋಧಕ, ಆರೋಗ್ಯ ತಪಾಸಣೆ ಮತ್ತು ಹಲವು ಸೇವೆಗಳನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಒದಗಿಸಲಾಗುತ್ತದೆ.

ರಾಜ್ಯದಲ್ಲಿ ಮಹಿಳಾ ಸುರಕ್ಷತೆಯ ಕೊರತೆಯಿದೆ ಎಂಬ ಆರೋಪದ ಕುರಿತು ಇತ್ತೀಚೆಗೆ ರಾಜ್ಯದ ತಾಲೂಕು ಆಸ್ಪತ್ರೆಯಲ್ಲಿ ಯುವ ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ ಹೇಳಿದ ಸ್ಮೃತಿ ಇರಾನಿ, ರಾಜ್ಯದಲ್ಲಿ ಇಂತಹ ಘಟನೆ ನಡೆದಿರುವುದು ಅಚ್ಚರಿ ತಂದಿದೆ ಎಂದರು.
ಇಲ್ಲಿ ಪೊಲೀಸ್ ಅಧಿಕಾರಿಗಳು, ಸೈಬರ್ ಕ್ರೈಮ್ ಸಂತ್ರಸ್ತರಿಗೆ ಸಹಾಯ ಮಾಡಲು ಸಿಬ್ಬಂದಿ ತರಬೇತಿ, ಫೊರೆನ್ಸಿಕ್ ಕಿಟ್‌ಗಳನ್ನು ವಿತರಿಸುವುದು ಮತ್ತು ಹೆಚ್ಚಿನ ತ್ವರಿತ ನ್ಯಾಯಾಲಯಗಳ ಸ್ಥಾಪನೆಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ನೀಡುತ್ತಿದೆ. ಇದರ ಹೊರತಾಗಿಯೂ ಕೇರಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ಆಡಳಿತದ ಕಡೆಯಿಂದ ಉದ್ದೇಶದ ಕೊರತೆ ಎಂದಿದ್ದಾರೆ.












Click it and Unblock the Notifications