• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅನ್‌ ಲಾಕ್ ಮಾರ್ಗಸೂಚಿ 4.0; ಇನ್ನು ಮುಂದೆ ಲಾಕ್ ಡೌನ್ ಇಲ್ಲ

|

ಬೆಂಗಳೂರು, ಆಗಸ್ಟ್ 30 : ಕೇಂದ್ರ ಗೃಹ ಇಲಾಖೆ 4.0 ಅನ್ ಲಾಕ್ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 1 ರಿಂದ 30ರ ತನಕ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. ಹಲವು ವಿನಾಯಿತಿಗಳನ್ನು ನೀಡಲಾಗಿದೆ.

ಚೀನಾ ಗಡಿಯಲ್ಲಿರುವ ಭಾರತದ 'ಟಿಬೆಟ್' ಸೇನೆ ಬಗ್ಗೆ ನಿಮಗೆಷ್ಟು ಗೊತ್ತು?

ಸೆಪ್ಟೆಂಬರ್ 7ರಿಂದ ಮೆಟ್ರೋ ರೈಲಿನ ಸಂಚಾರ ಆರಂಭಿಸಲು ಗೃಹ ಇಲಾಖೆ ಒಪ್ಪಿಗೆ ನೀಡಿದೆ. ಧಾರ್ಮಿಕ, ರಾಜಕೀಯ ಹಾಗೂ ಇತರೆ ಸಭೆ-ಸಮಾರಂಭಗಳನ್ನು ಸೆಪ್ಟೆಂಬರ್ 21ರಿಂದ ನಡೆಸಬಹುದು. ಆದರೆ, 100 ಜನರು ಮಾತ್ರ ಭಾಗವಹಿಸಲು ಅವಕಾಶ.

ಅನ್‌ಲಾಕ್‌ 4 ಮಾರ್ಗಸೂಚಿ: ಶಾಲೆ, ಚಿತ್ರಮಂದಿರ ತೆರೆಯಲು ಒಪ್ಪಿಗೆ ಇಲ್ಲ

ಅನ್ ಲಾಕ್ 4.0 ಮಾರ್ಗಸೂಚಿಯಲ್ಲಿ ಲಾಕ್ ಡೌನ್ ಕುರಿತು ಸೂಚನೆ ನೀಡಲಾಗಿದೆ. ರಾಜ್ಯಗಳು ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಗೊಳಿಸುವಂತಿಲ್ಲ ಎಂದು ಸೂಚಿಸಲಾಗಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಕೋವಿಡ್-19: ದೇಶೀಯ ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡುವ ಮೊದಲು ರಾಜ್ಯಗಳು ಕೇಂದ್ರ ಸರ್ಕಾರದ ಒಪ್ಪಿಗೆಯನ್ನು ಪಡೆಯಬೇಕಾಗುತ್ತದೆ. ಅಂತರರಾಜ್ಯ ಸಂಚಾರಕ್ಕೆ ಇದ್ದ ನಿರ್ಬಂಧವನ್ನು 3ನೇ ಹಂತದ ಅನ್ ಲಾಕ್ ಘೋಷಣೆ ವೇಳೆಯೇ ಸರ್ಕಾರ ತೆರವು ಮಾಡಿತ್ತು.

ಕೋವಿಡ್; ಬೆಂಗಳೂರಲ್ಲಿ ಶೀಟ್‌ ಹಾಕಿ ಮನೆ, ರಸ್ತೆ ಸೀಲ್ ಡೌನ್ ಇಲ್ಲ

ಅನ್ ಲಾಕ್ ಮಾರ್ಗಸೂಚಿಯಲ್ಲಿ ಮೆಟ್ರೋ ರೈಲಿನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮೆಟ್ರೋ ಸಂಚಾರದ ವೇಳೆ ಪಾಲಿಸಬೇಕಾದ ನಿಯಮಗಳ ಕುರಿತು ಕೇಂದ್ರವೇ ಮಾರ್ಗಸೂಚಿಯನ್ನು ನೀಡಲಿದೆ.

ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಯಾವುದೇ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದರು. ಈಗ ರಾಜ್ಯಗಳಿಗೆ ಲಾಕ್ ಡೌನ್ ಮಾಡುವ ಅಧಿಕಾರವನ್ನೇ ನೀಡಿಲ್ಲ.

English summary
Union home ministry in the unlock 4.0 guidelines said that states will not be allowed to impose localised lockdowns in non-containment zones without consulting the central government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X