ಉತ್ತರ ಪ್ರದೇಶ: ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ತಲಗ್ರಾಮ, ಫೆಬ್ರವರಿ 13: ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಆಗ್ರಾ-ಲಕ್ನೋ ಹೆದ್ದಾರಿಯ ತಲಗ್ರಾಮ ಎಂಬಲ್ಲಿ ನಡೆದ ಕಾರ್ ವೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಅವರಲ್ಲಿದ್ದ 3 ಜನ ಮೃತರಾದ ಘಟನೆ ನಡೆದಿದೆ.

ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಓರ್ವ ದಂಪತಿ ಮತ್ತು ಅವರ ಪುಟ್ಟ ಮಗು ಘಟನೆಯಲ್ಲಿ ಮೃತವಾಗಿದೆ ಎಂದು ತಿಳಿದುಬಂದಿದೆ.

ಕುಟುಂಬವೊಂದು ಲಕ್ನೋದಿಂದ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈಗಾಗಲೇ ಕಾರಿನಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲಿಸರು ವಿಚಾರಣೆ ನಡೆಸುತ್ತಿದ್ದಾರೆ.

UP: 3 killed, 2 injured ain an accident in Agra- Lucknow Expressway
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+