Lok sabha elections 2024: ವಾರಣಾಸಿಯಲ್ಲಿ ಮೋದಿ ವಿರುದ್ದ ಇವರೇ ನಮ್ಮ ಅಭ್ಯರ್ಥಿಯಾಗಲಿ: ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ
ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು ವಾರಣಾಸಿಯಿಂದ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಲು ಉತ್ಸುಕವಾಗಿದೆ ಮತ್ತು ಶೀಘ್ರದಲ್ಲೇ ಈ ಬಗ್ಗೆ ಉನ್ನತ ನಾಯಕತ್ವಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಿದೆ ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ಅಜಯ್ ರೈ ಭಾನುವಾರ ಹೇಳಿದ್ದಾರೆ.
ಅಜಯ್ ರೈ ಅವರು ವಾರಣಾಸಿಯಲ್ಲಿ ಕಳೆದ ಮೂರು ಬಾರಿ ಕಾಂಗ್ರೆಸ್‌ನಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. 2009ರಲ್ಲಿ ಮುರಳಿ ಮನೋಹರ್ ಜೋಶಿ ವಿರುದ್ಧ ಸೋತರೆ, 2014 ಮತ್ತು 2019 ರಲ್ಲಿ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದಾರೆ.

"ಪ್ರಿಯಾಂಕಾ ಗಾಂಧಿ ಅವರು ವಾರಣಾಸಿಯಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ನಾವು ಬಯಸುತ್ತೇವೆ. ಇದಕ್ಕಾಗಿ ನಾವು ಶೀಘ್ರದಲ್ಲೇ ಪಕ್ಷದ ನಾಯಕತ್ವಕ್ಕೆ ಪ್ರಸ್ತಾವನೆಯನ್ನು ಕಳುಹಿಸುತ್ತೇವೆ" ಎಂದು ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ರೈ ಅವರು ಪಿಟಿಐಗೆ ತಿಳಿಸಿರುವುದಾಗಿ ವರದಿಯಾಗಿದೆ.
"ಪ್ರಿಯಾಂಕಾ ಗಾಂಧಿ ಅವರು ಬಯಸಿದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಬಹುದು, ಮತ್ತು ನಾವು ಅವರನ್ನು ಚುನಾವಣೆಯಲ್ಲಿ ಗೆಲ್ಲುವಂತೆ ಮಾಡುತ್ತೇವೆ, ಆದರೆ ಅವರು ವಾರಣಾಸಿಯಿಂದ ಸ್ಪರ್ಧಿಸಬೇಕೆಂದು ನಾವು ಬಯಸುತ್ತೇವೆ" ಎಂದು ಅವರು ಹೇಳಿದ್ದಾರೆ.
ಮೋದಿ ವಿರುದ್ಧ ಸ್ಪರ್ಧಿಸ್ತಾರ ಪ್ರಿಯಾಂಕ?
ವಾರಣಾಸಿ ಪ್ರಧಾನಿ ನರೇಂದ್ರ ಮೋದಿಯವರ ಲೋಕಸಭಾ ಚುನಾವಣಾ ಕ್ಷೇತ್ರವಾಗಿದೆ. 2019ರಲ್ಲಿ ಸತತ ಎರಡನೇ ಬಾರಿಗೆ ವಾರಣಾಸಿಯಿಂದ ಮೋದಿ ಆಯ್ಕೆಯಾಗಿದ್ದು, 2024ರಲ್ಲಿಯೂ ಇದೇ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಹೆಚ್ಚಿದೆ.
ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿಯನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ಯಾವ ಸಂದೇಶವನ್ನು ಕಳುಹಿಸಲು ಬಯಸುತ್ತದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ರೈ, "ಮೋದಿ ವಿರುದ್ಧ ಕಾಂಗ್ರೆಸ್ ಪ್ರಬಲವಾಗಿದೆ" ಎನ್ನುವ ಸಂದೇಶ ನೀಡಲು ಯತ್ನಿಸುತ್ತಿರುವುದಾಗಿ ಹೇಳಿದರು.
ವಾರಣಾಸಿ ಲೋಕಸಭಾ ಕ್ಷೇತ್ರವು 1991 ರಿಂದ ಬಿಜೆಪಿ ಭದ್ರಕೋಟೆಯಾಗಿದೆ, 2004 ರಲ್ಲಿ ಒಮ್ಮೆ ಮಾತ್ರ ಕಾಂಗ್ರೆಸ್ ಗೆದ್ದಿದೆ. 1991, 1996, 1998 ಮತ್ತು 1999 ರ ಲೋಕಸಭಾ ಚುನಾವಣೆಗಳಲ್ಲಿ ಮತ್ತು ಮಧ್ಯಂತರ ಚುನಾವಣೆಯಲ್ಲಿ ಸಹ ಈ ಸ್ಥಾನವು ಬಿಜೆಪಿಯ ಬಳಿ ಉಳಿಯಿತು.
2004ರಲ್ಲಿ ಕಾಂಗ್ರೆಸ್‌ನ ರಾಜೇಶ್ ಕುಮಾರ್ ಮಿಶ್ರಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು, ಆದರೆ 2009ರಲ್ಲಿ ಬಿಜೆಪಿ ಮತ್ತೆ ಗೆಲುವು ಸಾಧಿಸಿತ್ತು. ವಾರಾಣಸಿಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ 2014 ಮತ್ತು 2019 ರ ಚುನಾವಣೆಯಲ್ಲಿ ಮೋದಿ ವಿರುದ್ಧ ಅಜಯ್ ರೈ ಕಣಕ್ಕಿಳಿದಿದ್ದರು ಮತ್ತು 75,614 ಮತಗಳು ಮತ್ತು 1,52,548 ಮತಗಳನ್ನು ಪಡೆದರು.
ರಾಹುಲ್ ಗಾಂಧಿ ಅಮೇಥಿಯಿಂದ ಸ್ಪರ್ಧಿಸುವ ಸಾಧ್ಯತೆಯ ಕುರಿತು ಮಾತನಾಡಿದ ರೈ, ಅಮೇಥಿಯ ಜನರು ಈ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ, ಬಿಜೆಪಿ ಸಂಸದೆ ಸ್ಮೃತಿ ಇರಾನಿ ಮತ್ತು ಅವರ ಕಾರ್ಯವೈಖರಿ ಮತ್ತು ಈಡೇರದ ಭರವಸೆಗಳಿಂದ ಸಾರ್ವಜನಿಕರು ಕೋಪಗೊಂಡಿದ್ದಾರೆ. ಮತ್ತೆ ರಾಹುಲ್ ಗಾಂಧಿ ಬೇಕೆನ್ನುವ ವಾತಾವರಣ ಇದೆ ಎಂದು ಹೇಳಿದರು.
ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ಕೇರಳದ ವಯನಾಡಿನಿಂದ ಸ್ಪರ್ಧಿಸಿದ್ದರು. ಬಿಜೆಪಿ ನಾಯಕಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋಲನುಭವಿಸಿದ್ದರು.
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಶೀಘ್ರದಲ್ಲೇ ರಾಜ್ಯ ರಾಜಕೀಯದಲ್ಲಿದಲ್ಲಿ ಹೆಚ್ಚು ಸಕ್ರಿಯರಾಗುತ್ತಾರೆ ಎಂದು ರೈ ಹೇಳಿದರು. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮೂರು ದಶಕಗಳಿಗೂ ಹೆಚ್ಚು ಕಾಲ ಅಧಿಕಾರದಿಂದ ದೂರವಿತ್ತು. 1985 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆದ್ದಿತು. ಕಳೆದ ಲೋಕಸಭಾ ಚುನಾವಣೆಯಲ್ಲಿ 80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications