ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿ ಕೋವಿಡ್: ಸಿಎಂ ಅಧ್ಯಕ್ಷತೆಯಲ್ಲಿ ಪ್ರಮುಖ ಸಭೆ- ಪರೀಕ್ಷೆ ಹೆಚ್ಚಿಸಲು ಸಿಎಂ ಸೂಚನೆ

|
Google Oneindia Kannada News

ಲಕ್ನೋ ಡಿಸೆಂಬರ್ 22: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿನ ಪ್ರಸ್ತುತ ಕೋವಿಡ್ ಪರಿಸ್ಥಿತಿಯ ಕುರಿತು 9 ತಂಡದ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು. ಸಭೆಯಲ್ಲಿ ಜನಸಂದಣಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕುರಿತು ಜಾಗೃತಿ ಮೂಡಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಪಾಸಿಟಿವ್ ಕೇಸ್‌ನ ಜೀನೋಮ್ ಸೀಕ್ವೆನ್ಸಿಂಗ್ ಅನ್ನು ನಡೆಸಲು ಮತ್ತು ಕೋವಿಡ್ ಪರೀಕ್ಷೆಯ ವೇಗವನ್ನು ಹೆಚ್ಚಿಸಲು, ಮುನ್ನೆಚ್ಚರಿಕೆ ಪ್ರಮಾಣವನ್ನು ಹೆಚ್ಚಿಸಲು ಅವರು ಸೂಚನೆ ನೀಡಿದರು. ಜೊತೆಗೆ ಯುಪಿ ಸರ್ಕಾರ ರಾಜ್ಯಾದ್ಯಂತ ಎಚ್ಚರಿಕೆಯನ್ನು ನೀಡಿದೆ.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊರಟ್ಟಿ ಅವರದ್ದು ಪ್ರಮುಖ ಪಾತ್ರ: ಬಸವರಾಜ ಬೊಮ್ಮಾಯಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊರಟ್ಟಿ ಅವರದ್ದು ಪ್ರಮುಖ ಪಾತ್ರ: ಬಸವರಾಜ ಬೊಮ್ಮಾಯಿ

"ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯು ತನಿಖೆಯಿಂದ ಚಿಕಿತ್ಸೆಯವರೆಗೆ ವ್ಯವಸ್ಥೆಗಳನ್ನು ಪ್ರಾರಂಭಿಸಬೇಕು. ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಬೇಕು. ಸೋಂಕು ಪೀಡಿತ ದೇಶಗಳಿಂದ ಹಿಂದಿರುಗಿದ ಜನರನ್ನು ಪರೀಕ್ಷಿಸಬೇಕು" ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿವೆ.

UP Covid: Important meeting chaired by CM Yogi Adityanath

ರಾಜ್ಯದ ಎಲ್ಲಾ ಮುಖ್ಯ ವೈದ್ಯಾಧಿಕಾರಿಗಳು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಾಗರೂಕತೆ ಹೆಚ್ಚಿಸುವಂತೆ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. "ಸೋಂಕು ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ತಪಾಸಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಜೀನೋಮ್ ಸೀಕ್ವೆನ್ಸಿಂಗ್ ಅನ್ನು ಪೂರ್ಣಗೊಳಿಸಿ, ನಂತರ ರಾಜ್ಯಗಳಿಗೆ ಪ್ರವೇಶಿಸಲು ಅವಕಾಶ ನೀಡಬೇಕು, ಆಗಲೇ ಹೊಸ ಕೋವಿಡ್ ರೂಪಾಂತರಗಳನ್ನು ನಿಖರವಾಗಿ ಪತ್ತೆಹಚ್ಚಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಸರ್ಕಾರ ಅಂತರಾಷ್ಟ್ರೀಯ ಪ್ರಯಾಣಿಕರ ಯಾದೃಚ್ಛಿಕ ಮಾದರಿಯನ್ನು ಮರುಪ್ರಾರಂಭಿಸುತ್ತದೆ'' ಎಂದರು.

ಯುನೈಟೆಡ್ ಸ್ಟೇಟ್ಸ್, ಚೀನಾ, ಬ್ರೆಜಿಲ್ ಮತ್ತು ದಕ್ಷಿಣ ಕೊರಿಯಾದಲ್ಲಿ ಕೋವಿಡ್-19 ಪ್ರಕರಣಗಳ ಹಠಾತ್ ಉಲ್ಬಣವು ಭಾರತದಲ್ಲಿನ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವಾಲಯವನ್ನು ಪ್ರೇರೇಪಿಸಿದೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರವು ಅಂತರಾಷ್ಟ್ರೀಯ ಯಾದೃಚ್ಛಿಕ ಮಾದರಿಯ ಪರೀಕ್ಷೆಯನ್ನು ಪುನರಾರಂಭಿಸಿದೆ. ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಸೂಚನೆಯಂತೆ ಇಂದಿನಿಂದ ದೇಶದ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ 19 ಗಾಗಿ ಅಂತರರಾಷ್ಟ್ರೀಯ ಪ್ರಯಾಣಿಕರ ಯಾದೃಚ್ಛಿಕ ಮಾದರಿಯನ್ನು ಪ್ರಾರಂಭಿಸಲಾಗುವುದು.

English summary
Uttar Pradesh Chief Minister Yogi Adityanath on Thursday held a meeting with 9 team officials on the current Covid situation in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X