ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋರಖಧಾಮ: ರೈಲುಗಳ ಮುಖಾಮುಖಿ-20 ಸಾವು

By Srinath
|
Google Oneindia Kannada News

ಗೋರಖಧಾಮ, ಮೇ 26: ಗೋರಖಧಾಮ, ಮೇ 26: ಉತ್ತರ ಪ್ರದೇಶದಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು, 20 ಮಂದಿ ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಗೋರಖಧಾಮ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಗೂಡ್ಸ್ ಟ್ರೈನಿಗೆ ಮುಖಾಮುಖಿಯಾಗಿ ಈ ಅಪಘಾತ ಸಂಭವಿಸಿದೆ.

ಸಂತ ಕಬೀರ್ ನಗರ ಜಿಲ್ಲೆಯಲ್ಲಿ ಛುರೆಬ್ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿಯಿದೆ. ಈ ಮಧ್ಯೆ ಘಟನೆಯ ಬಗ್ಗೆ ಟ್ವಿಟ್ ಮಾಡಿರುವ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು, ರೈಲು ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.

ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿದ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ದೆಹಲಿಯಲ್ಲಿ ಈ ಕುರಿತಂತೆ ಮಾತನಾಡಿದ ಅವರು, ದುರಂತದಲ್ಲಿ ಸಾವನ್ನಪ್ಪಿರುವ ಕುಟುಂಬಗಳು ಮತ್ತು ಗಾಯಾಳುಗಳ ಕುಟುಂಬಗಳಿಗೆ ಸೂಕ್ತ ನೆರವು ನೀಡುವಂತೆ ರೈಲ್ವೆ ಇಲಾಖೆಗೆ ಸೂಚಿಸಿದ್ದಾರೆ. ಅವರ ಟ್ವೀಟ್ ಹೀಗಿದೆ:

ಗೋರಖಧಾಮ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಪಕ್ಕದಲ್ಲಿ ಹಾದುಹೋಗುತ್ತಿದ್ದ ಸರಕು ಸಾಗಣೆ ರೈಲಿನ ಮೇಲೆ ಬಿದ್ದು ಈ ಅನಾಹುತ ಸಂಭವಿಸಿದೆ. ಒಟ್ಟು 6 ಬೋಗಿಗಳು ಹಳಿತಪ್ಪಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನ ಚಾಲಕ ಮತ್ತು ಸಹಾಯಕ ಚಾಲಕ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ.

UP Gorakhdham Exp collides with goods train

ಇಂದು ಬೆಳಗ್ಗೆ ಸುಮಾರು 10 ಗಂಟೆ ವೇಳೆ ಸಂತ ಕುಬೇರ ನಗರದ ಛುರೆಬ್ ನಿಲ್ದಾಣಕ್ಕೆ ವೇಗವಾಗಿ ಬಂದ ಗೋರಖಪುರ ಎಕ್ಸ್‌ ಪ್ರೆಸ್ ರೈಲು ನಿಂತಿದ್ದ ಗೂಡ್ಸ್ ರೈಲೊಂದಕ್ಕೆ ರಭಸದಿಂದ ಅಪ್ಪಳಿಸಿತು. ಸ್ಥಳದಲ್ಲೇ 20ಕ್ಕೂ ಹೆಚ್ಚಿನ ನತದೃಷ್ಟ ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಹಿಳೆಯರು, ಮಕ್ಕಳೂ ಸೇರಿದ್ದಾರೆ ಎಂದು ಜಿಲ್ಲಾ ದಂಡಾಧಿಕಾರಿ ಭರತ್‌ ಲಾಲ್ ತಿಳಿಸಿದ್ದಾರೆ.

ಸಹಾಯಕ್ಕೆ ದೂರವಾಣಿ ಸಂಖ್ಯೆಗಳು ಹೀಗಿವೆ: (Lucknow): 0522-2635639, 0522 2288890
Gorakhpur helpline No: 0551 2204893

up-gorakhdham-express-collides-with-goods-train-more-than-20-dead
English summary
UP Gorakhdham Exp collides with goods train more than 20 dead. According to the initial reports, the accident took place between Sant Kabir Nagar and Khalilabad when speeding Gorakhdham express derailed and collided with a passing freight train.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X