ಯುಪಿ ಪೊಲೀಸರಿಗೆ ಕೋಳಿ ಹಿಡಿಯುವ ಕಾಯಕ!
ಲಖ್ನೌ, ಜೂ. 29: ಉತ್ತರ ಪ್ರದೇಶ ಪೊಲೀಸರಿಗೆ ಕಳ್ಳರನ್ನು ಹಿಡಿಯುವುದಕ್ಕಿಂತ, ಕಳುವಾದ ಪ್ರಾಣಿಗಳನ್ನು ಹುಡಿಕುವುದರಲ್ಲೇ ಡ್ಯೂಟಿ ಮುಗಿದು ಹೋಗುತ್ತಿದೆ. ಹಿಂದೊಮ್ಮೆ ಸಚಿವ ಅಜಂ ಖಾನ್ ಅವರ ಕಳುವಾದ ಎಮ್ಮೆಗಳನ್ನು ಪತ್ತೆಹಚ್ಚಿ ಮೆಚ್ಚುಗೆ ಗಳಿಸಿಕೊಂಡಿದ್ದ ಪೊಲೀಸರಿಗೀಗ ಕೋಳಿ ಹಿಡಿಯುವ ಕಾಯಕ!
ಕಳುವಾದ ಕೋಳಿಗಳನ್ನು ತಕ್ಷಣ ಪತ್ತೆ ಹಚ್ಚುವಂತೆ ಖುದ್ದು ರಾಜ್ಯಪಾಲರೇ ಆದೇಶ ನೀಡಿದ್ದಾರೆ. ರಾಜ್ಯಪಾಲ ರಾಮ್ ನಾಯಕ್ ನೀಡಿರುವ ಆದೇಶ ಪೊಲೀಸರು ಟೋಪಿ ತೆಗೆದು ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಕೇವಲ ಕೋಳಿ ಪತ್ತೆ ಹಚ್ಚಿದರೆ ಸಾಲದು ಕೋಳಿ ಕಳ್ಳರನ್ನು ಹಿಡಿಯಬೇಕು ಎಂದು ರಾಜ್ಯಪಾಲರು ಸ್ಪಷ್ಟವಾಗಿ ತಿಳಿಸಿದ್ದಾರೆ.[ಪೊಲೀಸರ ನಿದ್ದೆಗೆಡಿಸಿದ ಎಮ್ಮೆಗೆ ಡಿಎನ್ ಎ ಟೆಸ್ಟ್!]

ರಾಂಪುರ ನಿವಾಸಿಯಾದ ಫರ್ ಉಲ್ಲಾ ಖಾನ್ ಎಂಬುವರ ಮನೆಯಿಂದ ಕಳೆದ ಮಾರ್ಚ್‌ನಲ್ಲಿ ನೂರಾರು ಕೋಳಿಗಳನ್ನುಅಪಹರಿಸಲಾಗಿತ್ತು. ಖಾನ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರೂ ಪ್ರಯೋಜನವಾಗಿರಲಿಲ್ಲ. ಇದೊಂದು ಕೋಳಿ ದೂರು ಎಂದು ಪೊಲೀಸರು ಚಿಕನ್ ತಿಂದು ಗಡದ್ದಾಗಿ ಮಲಗಿದ್ದರು. ಪೊಲೀಸರ ನಿದ್ರೆಗೆ ಬೇಸತ್ತ ಖಾನ್ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಅದರ ಪರಿಣಾಮವೇ ಗವರ್ನರ್ ಕೋಳಿ ಹುಡುಕಾಟ ಆದೇಶ.[ನಿವೃತ್ತಿಯ ನಂತರ ಸೇನಾ ನಾಯಿಗಳನ್ನೇನು ಮಾಡುತ್ತಾರೆ?]
24 ಗಂಟೆಗಳಲ್ಲಿ ಸಚಿವರ ಎಮ್ಮೆ ಹುಡುಕಿದ ಪೊಲೀಸರಿಗೆ ಕೋಳಿ ಹುಡುಕುವುದು ಯಾವ ಲೆಕ್ಕ ಎಂದು ಜನ ಭಾವಿಸಬಹುದು. ಆದರೆ ಕೋಳಿಗಳು ಕಳೆದು ಎರಡು ತಿಂಗಳೇ ಆಗಿದೆ. ಅವು ಯಾರ ಹೊಟ್ಟೆ ಸೇರಿದೆಯೋ ಎಂದು ಪೊಲೀಸರು ಗುಸುಗುಸು ಮಾತಾಡುಕೊಂಡಿದ್ದು ರಾಜ್ಯಪಾಲರ ಕಿವಿಗೆ ಬಿದ್ದಿಲ್ಲ!
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications