Lok Sabha Election: ಬಿಜೆಪಿ ಅಭ್ಯರ್ಥಿಗೆ 8 ಬಾರಿ ಮತ ಹಾಕಿದ ವ್ಯಕ್ತಿ ಬಂಧನ

ಉತ್ತರ ಪ್ರದೇಶದ ಮತಗಟ್ಟೆಯೊಂದರಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಒಬ್ಬನೇ ವ್ಯಕ್ತಿ ಹಲವು ಬಾರಿ ಮತಹಾಕಿರುವ ವಿಡಿಯೋ ಸದ್ಯ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ಉತ್ತರ ಪ್ರದೇಶ ಪೊಲೀಸರು ಭಾನುವಾರ ಮತದಾರನನ್ನು ಬಂಧಿಸಿದ್ದಾರೆ.

ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ವಿರೋಧ ಪಕ್ಷಗಳ ಹಲವಾರು ನಾಯಕರು ಘಟನೆಯ ವೀಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡ ನಂತರ ಆರೋಪಿ ರಾಜನ್ ಸಿಂಗ್ ಎನ್ನುವಾತನನ್ನು ವಶಕ್ಕೆ ಪಡೆಯಲಾಗಿದೆ.

UP Man Arrested After Video Shows Him Voting for BJP Candidate 8 Times

ಎರಡು ನಿಮಿಷಗಳ ಅವಧಿಯ ವೀಡಿಯೊದಲ್ಲಿ, ಮತದಾರರು ಬಿಜೆಪಿ ಅಭ್ಯರ್ಥಿ ಮುಖೇಶ್ ರಜಪೂತ್ ಅವರಿಗೆ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ (ಇವಿಎಂ) ಕನಿಷ್ಠ 8 ಬಾರಿ ಮತ ಚಲಾಯಿಸುವುದನ್ನು ಕಾಣಬಹುದು.

ರಜಪೂತ್ ಉತ್ತರ ಪ್ರದೇಶದ ಫರೂಕಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ ಎಆರ್ ಒ ಪ್ರತೀತ್ ತ್ರಿಪಾಠಿ ಅವರ ದೂರಿನ ಆಧಾರದ ಮೇಲೆ ನಯಾ ಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕ್ರಮ ತೆಗೆದುಕೊಳ್ಳಲು ಸೂಚನೆ

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 171F (ಚುನಾವಣೆಗಳಿಗೆ ಸಂಬಂಧಿಸಿದ ಅಪರಾಧ), ಐಪಿಸಿ ಸೆಕ್ಷನ್ 419 (ವ್ಯಕ್ತಿಯಿಂದ ವಂಚನೆಗೆ ಶಿಕ್ಷೆ), ಸೆಕ್ಷನ್ 128, 132, ಮತ್ತು 136 ಸೇರಿದಂತೆ ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯಿದೆ (ಮತದಾನದ ಗೌಪ್ಯತೆಯನ್ನು ಕಾಪಾಡುವುದು, ಚುನಾವಣೆಗಳಲ್ಲಿ ವಂಚನೆ ಮತ್ತು ಇತರ ಚುನಾವಣಾ ಅಪರಾಧಗಳಿಗೆ ಸಂಬಂಧಿಸಿದೆ) ಮತ್ತು ಇತರೆ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಆಯೋಗ ಕೂಡ ಈ ವಿಷಯದ ಬಗ್ಗೆ ಗಮನಹರಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಘಟನೆ ನಡೆದಾಗ ಮತಗಟ್ಟೆಯಲ್ಲಿ ಹಾಜರಿದ್ದ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸಿ ಶಿಸ್ತು ಕ್ರಮ ಜರುಗಿಸುವಂತೆ ಚುನಾವಣಾ ಸಮಿತಿ ಅಧಿಕಾರಿಗಳಿಗೆ ಸೂಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+