ಸುಪ್ರೀಂ ಕೋರ್ಟ್ ವಕೀಲೆಯ ಹತ್ಯೆ: ಸ್ಟೋರ್ ರೂಂನಲ್ಲಿ ಅಡಗಿ ಕುಳಿತ ಪತಿ!

ಲಕ್ನೋ ಸೆಪ್ಟೆಂಬರ್ 11: ಸುಪ್ರೀಂ ಕೋರ್ಟ್ ವಕೀಲರೊಬ್ಬರನ್ನು ಹತ್ಯೆ ಮಾಡಿದ ಭೀಕರ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. 24 ಗಂಟೆಗಳ ಕಾಲ ಬಂಗಲೆಯ ಸ್ಟೋರ್ ರೂಂನಲ್ಲಿ ಅಡಗಿ ಕುಳಿತಿದ್ದ ಆಕೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲರಾಗಿದ್ದ ಅವರ ಪತ್ನಿಯನ್ನು ಕೊಂದ 62 ವರ್ಷದ ಮಾಜಿ ಭಾರತೀಯ ಕಂದಾಯ ಸೇವೆ ಅಧಿಕಾರಿಯನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿ ನಿತಿನ್ ಸಿನ್ಹಾ ಭಾನುವಾರ ಅಪರಾಧ ಎಸಗಿದ ನಂತರ ಬಂಗಲೆಯ ಸ್ಟೋರ್ ರೂಂನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು 61 ವರ್ಷದ ರೇಣು ಸಿನ್ಹಾ ಎಂದು ಗುರುತಿಸಲಾಗಿದೆ. ರೇಣು ಸಿನ್ಹಾ ಅವರ ಸಹೋದರನ ಫೋನ್ ಕರೆಗಳಿಗೆ ಎರಡು ದಿನಗಳಿಂದ ಪ್ರತಿಕ್ರಿಯಿಸದೇ ಇದ್ದಾಗ ಘಟನೆ ಬೆಳಕಿಗೆ ಬಂದಿದೆ. ಇದರಿಂದ ಆತಂಕಗೊಂಡ ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.

murder-of-supreme-court-lawyer

ಪೊಲೀಸರು ರೇಣು ಸಿನ್ಹಾ ಅವರು ವಾಸವಿದ್ದ ಬಂಗಲೆಯೊಳಗೆ ಬಲವಂತವಾಗಿ ಪ್ರವೇಶಿಸಿದ ನಂತರ ಬಾತ್ರೂಮ್ನಲ್ಲಿ ರೇಣು ಶವ ಪತ್ತೆ ಆಗಿದೆ. ಘಟನೆಯ ನಂತರ ನಾಪತ್ತೆಯಾಗಿದ್ದ ಆಕೆಯ ಪತಿ ನಾಪತ್ತೆಯಾಗಿದ್ದರು. ರೇಣು ಸಿನ್ಹಾ ಅವರ ಸಹೋದರ ಅಜಯ್ ಮೇಲೆ ಕೊಲೆ ಆರೋಪ ಹೋರಿಸಿದ್ದರು. 'ಅವರ ಫೋನ್ ಆಫ್ ಆಗಿದ್ದರಿಂದ ಸಂಪರ್ಕಕ್ಕೆ ಸಿಗಲಿಲ್ಲ. ದಂಪತಿಗಳು ಆಗಾಗ್ಗೆ ಜಗಳವಾಡುತ್ತಿದ್ದರು' ಎಂದು ಸಹೋದರ ಬಹಿರಂಗಪಡಿಸಿದ್ದಾನೆ.

ಇದರ ಬೆನ್ನಲ್ಲೇ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದು, ಬಂಗಲೆಯ ಸ್ಟೋರ್ ರೂಂನಲ್ಲಿ ಪತ್ತೆಯಾಗಿದ್ದಾರೆ. ನಿತಿನ್ ಸಿನ್ಹಾ ಬಂಗಲೆಗೆ ಬೀಗ ಜಡಿದು ಟೆರೇಸ್‌ನಲ್ಲಿರುವ ಖಾಲಿ ರೂಂ್‌ನಲ್ಲಿ ಆಶ್ರಯ ಪಡೆದಿದ್ದರು ಎನ್ನಲಾಗಿದೆ. ನಂತರ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.

ವಿಚಾರಣೆ ವೇಳೆ, ನಿತಿನ್ ಸಿನ್ಹಾ ಅವರು ತಮ್ಮ ಬಂಗಲೆಯನ್ನು 4 ಕೋಟಿ ರೂಪಾಯಿಗೆ ಮಾರಾಟ ಮಾಡಲು ಯೋಜಿಸಿದ್ದರು. ಮುಂಗಡವನ್ನೂ ತೆಗೆದುಕೊಂಡಿದ್ದರು. ಆದರೆ ಅವರ ಪತ್ನಿ ಮಾರಾಟಕ್ಕೆ ವಿರುದ್ಧವಾಗಿದ್ದರು. ಮೃತ ವಕೀಲರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು. ಆದರೆ ಇತ್ತೀಚೆಗಷ್ಟೇ ಒಂದು ತಿಂಗಳ ಹಿಂದೆ ಕ್ಯಾನ್ಸರ್ ಮುಕ್ತರಾಗಿದ್ದರು.

ಪ್ರಾಥಮಿಕ ತನಿಖೆಯಲ್ಲಿ ರೇಣು ಅತಿಯಾದ ರಕ್ತ ಸೋರಿಕೆಯಿಂದ ಸಾವನ್ನಪ್ಪಿರಬಹುದು ಎಂದು ತಿಳಿದುಬಂದಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರ ಸಾವಿಗೆ ನಿಖರ ಕಾರಣ ದೃಢಪಡಲಿದೆ. ಪೊಲೀಸರು ಅಪರಾಧ ನಡೆದ ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಿದ್ದಾರೆ ಮತ್ತು ಪ್ರಸ್ತುತ ತನಿಖೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+