ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿ: ಆಸ್ಪತ್ರೆಗೆ ಮಹಿಳೆ ಆಹ್ವಾನಿಸಿ ವೈದ್ಯ, ಮೂವರಿಂದ ಮಹಿಳೆ ಮೇಲೆ ಅತ್ಯಾಚಾರ

|
Google Oneindia Kannada News

ಬಸ್ತಿ (ಉತ್ತರ ಪ್ರದೇಶ) ಅಕ್ಟೋಬರ್ 4: ಉತ್ತರ ಪ್ರದೇಶದ ಬಸ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಬಸ್ತಿ ಸದರ್ ಕೊಟ್ವಾಲಿ ಪ್ರದೇಶದ ಆಸ್ಪತ್ರೆಯ ವೈದ್ಯರು, ಸಾಮಾಜಿಕ ಮಾಧ್ಯಮದಲ್ಲಿ ತನ್ನೊಂದಿಗೆ ಸ್ನೇಹ ಬೆಳೆಸಿದರು ಮತ್ತು ಅವರನ್ನು ಭೇಟಿ ಮಾಡಲು ಕೇಳಿದರು ಎಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

"ಆಕೆ ಆಸ್ಪತ್ರೆಗೆ ಭೇಟಿ ನೀಡಿದಾಗ, ವೈದ್ಯರು ಅವಳನ್ನು ತನ್ನ ಹಾಸ್ಟೆಲ್ ಕೋಣೆಗೆ ಕರೆದೊಯ್ದರು, ಅಲ್ಲಿ ಅವರು ಮತ್ತು ವೈದ್ಯರಾದ ಅವರು ಹಾಗೂ ಇಬ್ಬರು ಸಹೋದ್ಯೋಗಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ" ಎಂದು ದೂರುದಾರರನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.

ಯುಪಿ ಅಪ್ರಾಪ್ತೆಯ ಬೆತ್ತಲೆ ದೇಹ ಪತ್ತೆ: ಕುಟುಂಬದಿಂದ ಅತ್ಯಾಚಾರ, ಕೊಲೆ ಆರೋಪ ಯುಪಿ ಅಪ್ರಾಪ್ತೆಯ ಬೆತ್ತಲೆ ದೇಹ ಪತ್ತೆ: ಕುಟುಂಬದಿಂದ ಅತ್ಯಾಚಾರ, ಕೊಲೆ ಆರೋಪ

ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿರುವ ಮಹಿಳೆ ಬಸ್ತಿಯಿಂದ ಲಕ್ನೋಗೆ ಆಗಮಿಸಿ ಸೆಪ್ಟೆಂಬರ್ 27 ರಂದು ಪೊಲೀಸರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಆಸ್ಪತ್ರೆ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

UP: Woman raped by 3 including doctor: Police

ಈ ಘಟನೆ ಬೆಳಕಿಗೆ ಬರುವ ಕೊಂಚ ಸಮಯದ ಹಿಂದೆ ಅಪ್ರಾಪ್ತ ಬಾಲಕಿ ಬೆತ್ತಲೆ ಶವ ಪತ್ತೆಯಾಗಿದ್ದು, ಕುಟುಂಬಸ್ಥರು ಅತ್ಯಾಚಾರದ ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ಔರೈಯಾದಲ್ಲಿನ ದಿಬಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಗಿ ಹೊಲವೊಂದರಲ್ಲಿ ಸೋಮವಾರ 17 ವರ್ಷದ ಬಾಲಕಿಯ ಬೆತ್ತಲೆ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮನೆಯವರು ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

UP: Woman raped by 3 including doctor: Police

ಆಕೆಯ ಸಾವು ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ತನ್ನ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ವಿಡಿಯೋವನ್ನು ಅಪ್‌ಲೋಡ್ ಮಾಡಿದೆ. ಪೊಲೀಸರು ಶವದೊಂದಿಗೆ ಓಡಿಹೋಗುತ್ತಿದ್ದಾರೆ ಎಂದು ಹೇಳಿದೆ. ಆದರೆ ಅಧಿಕಾರಿಗಳು ಆರೋಪವನ್ನು ನಿರಾಕರಿಸಿದ್ದಾರೆ. ಬಾಲಕಿಯ ಕುಟುಂಬಸ್ಥರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಬೆಳಗ್ಗೆ ಮಲ ವಿಸರ್ಜನೆಗೆಂದು ಹೊರ ಹೋಗಿದ್ದ ಆಕೆ ಎಷ್ಟೋ ಹೊತ್ತಾದರೂ ಮನೆಗೆ ಬಾರದೇ ಇದ್ದುದರಿಂದ ಆಕೆಗಾಗಿ ಹುಡುಕಾಟ ನಡೆಸಿದ್ದು, ಗದ್ದೆಯಲ್ಲಿ ಶವ ಪತ್ತೆಯಾಗಿದೆ.

English summary
A doctor has been arrested for allegedly raping a woman in Basti in Uttar Pradesh, police said today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X