ಆ.5: ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್
ಬೆಂಗಳೂರು, ಆ.5: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
11.00: ಲೋಕಸಭೆ ಚುನಾವಣೆಯಲ್ಲಿ ಆಘಾತಕಾರಿ ಸೋಲಿನ ನಂತರ ಕಾಂಗ್ರೆಸ್ ಪಕ್ಷ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಉತ್ತರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ಹೆಸರು ಕೇಳಿ ಬಂದಿದೆ.
10.55: ಕೇಂದ್ರ ಸಚಿವೆ ಮನೇಕಾ ಗಾಂಧಿ ಅವರು ತಮ್ಮ ಪುತ್ರ ಸುಲ್ತಾನ್ ಪುರ ಸಂಸದ ವರುಣ್ ಗಾಂಧಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಕಾಣುವ ಬಯಕೆ ಇದೆ ಎಂದು ಸೋಮವಾರ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
10.45: ಸ್ವದೇಶಿ ಸಂಸ್ಥೆ ಮೈಕ್ರೊ ಮ್ಯಾಕ್ಸ್ 2ನೇ ತ್ರೈಮಾಸಿಕದಲ್ಲಿ ಮೊಬೈಲ್ ಮಾರುಕಟ್ಟೆಯಲ್ಲಿ ಶೇ 16.6 ಪಾಲು ಪಡೆದು ಸ್ಯಾಮ್ ಸಂಗ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದೆ.

10.30: ಬಾಂಗ್ಲಾದೇಶದಲ್ಲಿ ಮಿನಿ ಹಡಗು ಪದ್ಮಾ ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, 2 ಜನ ಸಾವನ್ನಪ್ಪಿದ್ದರೆ, 45 ಜನರನ್ನು ರಕ್ಷಿಸಲಾಗಿದೆ. ಹಡಗಿನಲ್ಲಿ 250ಕ್ಕೂ ಅಧಿಕ ಮಂದಿ ಇದ್ದರು.
10.00: ಲಂಚ ಸ್ವೀಕರಿಸಿದ ಆರೋಪ ಹೊತ್ತಿರುವ ಸಿಂಡಿಕೇಟ್ ಬ್ಯಾಂಕ್ ಚೇರ್ಮನ್ ಎಸ್.ಕೆ ಜೈನ್ ಅವರನ್ನು ಕೇಂದ್ರ ಸರ್ಕಾರ ಹುದ್ದೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದೆ.
9.30: ಚೀನಾದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 400 ದಾಟಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
9.15: ನರೇಂದ್ರ ಮೋದಿ ಅವರ ಎರಡು ದಿನಗಳ ಯಶಸ್ವಿ ನೇಪಾಳ ಪ್ರವಾಸವನ್ನು ದೇಶ ವಿದೇಶದ ಮಾಧ್ಯಮಗಳು ಹಾಡಿ ಹೊಗಳಿವೆ.


Click it and Unblock the Notifications
