ನ.18: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ
ಬೆಂಗಳೂರು, ನ.18: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
11.15: ಸ್ವಯಂಘೋಷಿತ ದೇವಮಾನವ ರಾಮಪಾಲ್ ಬಂಧನಕ್ಕೆ ಮಹಿಳಾ ಭಕ್ತಾದಿಗಳು ಅಡ್ಡಿಪಡಿಸಿದ್ದಾರೆ. ಗುರುಗಳನ್ನು ಬಂಧಿಸಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾರೆ.

11.10: ಬುರ್ದ್ವಾನ್ ಸ್ಪೋಟ ಪ್ರಕರಣಕ್ಕೆ ಮ್ಯಾನ್ಮಾರ್ ಸಂಪರ್ಕ ಇರುವುದು ಪತ್ತೆಯಾಗಿದೆ. ಮ್ಯಾನ್ಮಾರ್ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
10.30: ಚೀನಾದ ಶಾನ್ಡೊಂಗ್ ಪ್ರದೇಶದಲ್ಲಿ ವಾಣಿಜ್ಯ ಘಟಕದಲ್ಲಿ ಭಾರಿ ಬೆಂಕಿ ಹೊತ್ತಿಕೊಂಡು 18 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ












Click it and Unblock the Notifications