ನ.25: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ

ಬೆಂಗಳೂರು, ನ.25: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

16.00 : ಸಾರ್ಕ್ ಸಮ್ಮೇಳನದ ವೇಳೆಯಲ್ಲಿ ಅಫ್ಘಾನ್ ಅಧ್ಯಕ್ಷ ಆಶ್ರಫ್ ಘನಿ, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಶ್ರೀಲಂಕಾ ಮಹೀಂದ್ರ ರಾಜಪಕ್ಸಾ ಅವರನ್ನು ಮೋದಿ ಅವರು ಭೇಟಿ ಮಾಡಲಿದ್ದಾರೆ.

15.30: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ ಆರಂಭಗೊಳ್ಳಲಿರುವ ಎರಡು ದಿನಗಳ 18ನೇ ಸಾರ್ಕ್ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನೇಪಾಳದ ರಾಜಧಾನಿ ಕಠ್ಮಂಡುವಿಗೆ ಆಗಮಿಸಿದ್ದಾರೆ.

Narendra Modi

11.10: ಟಿಎಂಸಿ ಮುಖಂಡರು ಸಂಸತ್ತಿನ ಪ್ರಶ್ನೋತ್ತರ ವೇಳೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸಂಸತ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
11.00: ಎಎಪಿಯಿಂದ ಹೊರಹಾಕಲ್ಪಟ್ಟ ಅಶ್ವಿನಿ ಉಪಾಧ್ಯಾಯ್ ಅವರು ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದ್ದು, ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆಯಿದೆ.

Updates India, International News in Brief Nov 25

10.50: ಜಮ್ಮು ಮತ್ತು ಕಾಶ್ಮೀರ್ತದಲ್ಲಿ ಮೊದಲ ಹಂತದ ಮತದಾನ ಶಾಂತಿಯುತವಾಗಿ ಸಾಗಿದೆ. ಜಮ್ಮು ಮತ್ತು ಕಾಶ್ಮೀರದ 15 ಕ್ಷೇತ್ರ ಹಾಗೂ ಜಾರ್ಖಂಡಿನ 13 ಸ್ಥಾನಗಳಿಗೆ ಮತದಾನ ನಡೆದಿದೆ.
10.00: ಆಸ್ಟ್ರೇಲಿಯಾದ ಕ್ರಿಕೆಟರ್ ಫಿಲ್ ಹ್ಯೂಸ್ ಅವರ ತಲೆಗೆ ಭಾರಿ ಪೆಟ್ಟುಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
9.45: 18ನೇ ಸಾರ್ಕ್ ಸಮ್ಮೇಳನದಲ್ಲಿ ಸರ್ವಧರ್ಮ ಸಹಿಷ್ಣುತೆ, ಶಾಂತಿ ಸೌಹಾರ್ದದ ಬಗ್ಗೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದು ಪ್ರಧಾನಿ ಸಚಿವಾಲಯ ಹೇಳಿದೆ.
9.30: ಖ್ಯಾತ ಕಥಕ್ ನೃತ್ಯಗಾರ್ತಿ ಸಿತಾರಾ ದೇವಿ ಅವರು ಮುಂಬೈನಲ್ಲಿ ನಿಧನರಾಗಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+