ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.21: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್

By Mahesh
|
Google Oneindia Kannada News

ಬೆಂಗಳೂರು, ಅ.21: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

4.15: ಸುಮಾರು 16 ವರ್ಷಗಳ ನಂತರ ಸರ್ದಾರ್ ಸಿಂಗ್ ಅವರ ಹಾಕಿ ತಂಡ ಏಷ್ಯಾಡ್ ನಲ್ಲಿ ಚಿನ್ನದ ಪದಕ ಗೆಲ್ಲಲು ಕಾರಣರಾಗಿದ್ದ ಕೋಚ್ ಟೆರಿ ವಾಲ್ಷ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಭಾವನೆ ವಿಚಾರದಲ್ಲಿ ಮನಸ್ತಾಪ ಉಂಟಾಗಿದ್ದರಿಂದ ಟೆರಿ ಹೊರ ನಡೆದಿದ್ದಾರೆ ಎನ್ನಲಾಗಿದೆ.

Terry Walsh

12.30: ಹರ್ಯಾಣದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸಲಾಗಿದೆ. ಆರೆಸ್ಸೆಸ್ ಮುಖಂಡ ಪ್ರಥಮ ಬಾರಿಗೆ ಶಾಸಕರಾಗಿರುವ ಖಟ್ಟರ್ ಅವರನ್ನು ಸಿಎಂ ಸ್ಥಾನಕ್ಕೆ ಆಯ್ಕೆ ಮಾಡುವುದು ಬಹುತೇಕ ಖಚಿತವಾಗಿದೆ. ವೀಕ್ಷಕರಾಗಿ ಆಗಮಿಸಿರುವ ಎಂ ವೆಂಕಯ್ಯ ನಾಯ್ಡು ಅವರು ಹರ್ಯಾಣ ಸಿಎಂ ಆಯ್ಕೆಯನ್ನು ಘೋಷಿಸಲಿದ್ದಾರೆ.
Haryana Assembly Election

10.45: ಮಹಾರಾಷ್ಟ್ರದಲ್ಲಿ ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರು ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಮೈತ್ರಿ ವಿಷಯ ಮಾತುಕತೆ ನಡೆಸಲು ಬಿಜೆಪಿ ಹಾಗೂ ಶಿವಸೇನಾ ಹಿಂದು ಮುಂದು ನೋಡುತ್ತಿದೆ.

10.30: ದೀಪಾವಳಿ ಹಬ್ಬದ ನಂತರ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಆಯ್ಕೆ ಮಾಡಲಾಗುವುದು ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

Updates India, International News in Brief Oct 21

10.15: ಕೇಂದ್ರ ಸಚಿವ ಎಂ ವೆಂಕಯ್ಯ ನಾಯ್ಡು ಹಾಗೂ ಜೆಪಿ ನಡ್ಡಾ ಅವರ ಮುಂಬೈ ಭೇಟಿ ರದ್ದಾಗಿದೆ.

9.30:ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಮೃತಪಟ್ಟವರಿಗೆ ತಲಾ 3 ಲಕ್ಷ ರು ಪರಿಹಾರ ಘೋಷಿಸಲಾಗಿದೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

9.15: ಆಂಧ್ರಪ್ರದೇಶದ ಪಟಾಕಿ ಗೋದಾಮಿನ ದುರಂತದಲ್ಲಿ ಇನ್ನೂ 6 ಮಂದಿ ಸಾವನ್ನಪ್ಪಿರುವ ಸುದ್ದಿ ಬಂದಿದೆ.

9.೦೦:
ಫ್ಯಾಷನ್ ವಿನ್ಯಾಸಗಾರ ಆಸ್ಕರ್ ಡೆಲಾ ರೆಂಟಾ(82) ಸಾವನ್ನಪ್ಪಿದ್ದಾರೆ.

English summary
Top News of the today : In a major jolt to hockey, Indian team's chief coach Terry Walsh today resigned, a few weeks after taking the side to Asian Games gold in Icheon and many news from across the globe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X