ಸೆ.11: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಸೆ.11: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
13.50: ಸುಮಾರು ಏಳುನೂರು ಕಿ.ಮೀ. ವ್ಯಾಪ್ತಿಯವರೆಗೆ ಒಂದು ಟನ್ ತೂಕದ ಅಣುಶಕ್ತಿಸ್ಫೋಟಕಗಳನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯವಿರುವ ಅಗ್ನಿ-1 ಕ್ಷಿಪಣಿಯನ್ನು ಭುವನೇಶ್ವರದಿಂದ 170ಕಿ.ಮೀ. ದೂರವಿರುವ ವೀಲರ್ ದ್ವೀಪದ ಕ್ಷಿಪಣಿ ಉಡಾವಣಾ ನೆಲೆಯಿಂದ ಗುರುವಾರ ಯಶಸ್ವಿಯಾಗಿ ಉಡಾಯಿಸಲಾಯಿತು.

11.35: ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಗುರುವಾರ ಬೆಳಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಪ್ರಯಾಣಿಕರ ಲಗೇಜ್‌ಗಳ ಶೋಧ ನಡೆಸುತ್ತಿದ್ದು, ನಿಲ್ದಾಣದಾದ್ಯಂತ ಶ್ವಾನ ದಳದಿಂದ ಪರಿಶೀಲನೆ ಮಾಡಲಾಗುತ್ತಿದೆ.
11.30: ಪಾಕಿಸ್ತಾನ ಐಎಎಸ್ಐ ಏಜೆಂಟ್ ಆಗಿದ್ದ ಶ್ರೀಲಂಕಾ ಮೂಲದ ವ್ಯಕ್ತಿಯೊಬ್ಬನನ್ನು ಎನ್ ಐಎ ತಂಡ ಬಂಧಿಸಿದೆ.

11.25:ಬಿಜೆಪಿ ಮುಖಂಡ ಯೋಗಿ ಆದಿತ್ಯಾನಂದ್ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಸಭೆ, ಸಮಾರಂಭ, ಭಾಷಣ ಮಾಡದಂತೆ ಕೋರ್ಟ್ ಆದೇಶ ನೀಡಿತ್ತು.ಆದೇಶ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸಲಾಗಿದೆ.
11.10: ಬ್ಲೇಡ್ ರನ್ನರ್ ಆಸ್ಕರ್ ಪಿಸ್ಟೋರಿಸ್ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕೊಲೆ ಆರೋಪ ಎದುರಿಸುತ್ತಿರುವ ಆಸ್ಕರ್ ಅವರ ವಿರುದ್ಧದ ಪ್ರಕರಣದ ತೀರ್ಪು ಹೊರಬೀಳಲಿದೆ.
11.00: ಪೇಯಸ್, ಸಾನಿಯಾ ಮಿರ್ಜಾ, ಬೋಪಣ್ಣ ಅವರು ಏಷ್ಯನ್ ಗೇಮ್ಸ್ ನಲ್ಲಿ ಆಡುತ್ತಿಲ್ಲ.












Click it and Unblock the Notifications