ಸೆ.12: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಸೆ.12: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
12.25: ನಿಥಾರಿ ಸರಣಿ ಕೊಲೆ ಪಾತಕಿ ಸುರಿಂದರ್ ಕೋಲಿ ಪುನರ್ ಪರಿಶೀಲನೆ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್ ಅಕ್ಟೋಬರ್ 29ರ ತನಕ ಆತನ ಗಲ್ಲುಶಿಕ್ಷೆ ಜಾರಿಗೊಳಿಸದಂತೆ ತಡೆಯಾಜ್ಞೆ ನೀಡಿದೆ.
12.20: ಮನಮೋಹನ್ ಸಿಂಗ್ ಅವರಿಗೆ 2ಜಿ ಹಗರಣದ ಬಗ್ಗೆ ನಾನು ಮೊದಲೆ ಎಚ್ಚರಿಕೆ ನೀಡಿದ್ದೆ ಎಂದು ಮಾಜಿ ಕೇಂದ್ರ ಸಚಿವ ಕಮಲ್ ನಾಥ್ ಹೇಳಿದ್ದಾರೆ.

12.10: ಉತ್ತರಪ್ರದೇಶ ಚುನಾವಣಾ ಆಯೋಗ ವಿಧಿಸಿದ್ದ ಎಚ್ಚರಿಕೆ ಉಲ್ಲಂಘಿಸಿದ ಆರೋಪದ ಮೇಲೆ ಬಿಜೆಪಿ ಸಂಸದ ಯೋಗಿ ಆದಿತ್ಯಾನಾಥ್ ಮೇಲೆ ಉತ್ತರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಿದ್ದಾರೆ.
11.50: ಮಾಜಿ ಸಿಎಜಿ ವಿನೋದ್ ರೈ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಆಪಾದನೆ ಮಾಡಿ, ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಅವರಿಗೆ ಮೊದಲೇ ಗೊತ್ತಿದ್ದರೂ ಕ್ರಮ ಜರುಗಿಸಿಲ್ಲ ಎಂದಿದ್ದಾರೆ.
11.40: ನಟ ಸಲ್ಮಾನ್ ಖಾನ್ ವಿರುದ್ಧ ಧಾರ್ಮಿಅಕ್ ಭಾವನೆ ಉಲ್ಲಂಘನೆ ಮಾಡಿದ ಆರೋಪ ಹೊರೆಸಿ ಪ್ರಕರಣ ದಾಖಲಿಸಲಾಗಿದೆ.[ವಿವರ ಇಲ್ಲಿ ಓದಿ]
11.15: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಮೇಘ ಸ್ಫೋಟ ಸಂಭವಿಸಿದ್ದು, ಅಲ್ಲಲ್ಲಿ ಭೂಕುಸಿತದಿಂದ 40 ಮಂದಿ ಮೃತಪಟ್ಟಿದ್ದಾರೆ.












Click it and Unblock the Notifications