ಸೆ.26: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್
ಬೆಂಗಳೂರು, ಸೆ.26: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
4.45:ಏಷ್ಯನ್ ಗೇಮ್ಸ್: 50 ಮೀ ಬ್ರೇಸ್ಟ್ ಸ್ಟ್ರೋಕ್ ಈಜು ಸ್ಪರ್ಧೆಯಲ್ಲಿ ಭಾರತದ ಸಂದೀಪ್ ಸೆಜ್ವಾಲ್ ಕಂಚಿನ ಪದಕ ಗೆದ್ದಿದ್ದಾರೆ.
13.00: ನವದೆಹಲಿಯ ಹರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪ್ಲೇ ಹೋಮ್ ಶಾಲೆಯೊಂದರಲ್ಲಿ 3 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಪೋಷಕರು ಹಾಗೂ ಸಾರ್ವಜನಿಕರ ತೀವ್ರ ಪ್ರತಿಭಟನೆ ನಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

12.45: ಇರಾಕಿನ ಇಸ್ಲಾಮಿಕ್ ರಾಜ್ಯದ ಉಗ್ರರ ಮೇಲೆ ಪೂರ್ಣಪ್ರಮಾಣದ ದಾಳಿಗಿಳಿಯಲು ಸಜ್ಜಾಗಿರುವ ಅಮೆರಿಕಕ್ಕೆ ಬೆಂಬಲ ನೀಡುವುದರ ಬಗ್ಗೆ ಇಂಗ್ಲೆಂಡ್ ಶುಕ್ರವಾರ ತನ್ನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
12.30: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ 8 ಸ್ಥಾನಕ್ಕಾಗಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಮೈತ್ರಿ ಸಾಧಿಸಿಕೊಂಡಿವೆ.

12.10: ಬಂಗಾಳಕೊಲ್ಲಿಯನ್ನು ಕೇಂದ್ರವಾಗಿಸಿಕೊಂಡಿದ್ದ ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ ಸಂಭವಿಸಿದೆ. ರಿಕ್ಚರ್ ಮಾಪಕದಲ್ಲಿ 5.4 ಪ್ರಮಾಣದಷ್ಟುತ್ತು.
12.00: ನ್ಯೂಯಾರ್ಕಿನಲ್ಲಿ ನವರಾತ್ರಿ ಗರ್ಬಾ ನೃತ್ಯ ಆರಂಭಗೊಂಡಿದೆ.
11.40: ಏಷ್ಯನ್ ಗೇಮ್ಸ್ : ಪುರುಷರ 25 ಮೀ. ಏರ್ ಪಿಸ್ತೂಲ್ ಟೀಂ ಇವೆಂಟ್ ನಲ್ಲಿ ಭಾರತ ರಜತ ಪದಕ ಗೆದ್ದಿದೆ.
11.30: ಪ್ರಧಾನಿ ನರೇಂದ್ರ ಮೋದಿ ಅವರಿಗೆ ನ್ಯೂಯಾರ್ಕಿನ ಕೋರ್ಟಿನಿಂದ ಸಮನ್ಸ್ ಜಾರಿಯಾಗಿದೆ.
11.20: ತಮಿಳುನಾಡಿನ ಸಿಎಂ ಜಯಲಲಿತಾ ಅವರು ಅಕ್ರಮ ಆಸ್ತಿ ಪ್ರಕರಣದ ತೀರ್ಪನ್ನು ಬೆಂಗಳೂರಿನ ನ್ಯಾಯಾಲಯದ ಬದಲಿಗೆ ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
11.10:ಅಮೆರಿಕದ Louisianaದ ಸದರನ್ ಯುನಿವರ್ಸಿಟಿ ಸಿಸ್ಟಮ್ಸ್ ನಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ.












Click it and Unblock the Notifications