ಆ.12: ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್

ಬೆಂಗಳೂರು, ಆ.12: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

1.15: ಬಿಎಸ್ಪಿ, ಎನ್ ಸಿಪಿ, ಸಿಪಿಐ ಪಕ್ಷಗಳ ರಾಷ್ಟ್ರೀಯ ಪಕ್ಷ ಮಾನ್ಯತೆ ರದ್ದುಪಡಿಸುವ ಸಾಧ್ಯತೆ ಕಂಡು ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಒಟ್ಟು ಸ್ಥಾನಗಳ ಪೈಕಿ ಶೇ 2 ರಷ್ಟು ಅಥವಾ 11 ಸ್ಥಾನಗಳನ್ನು ಮೂರು ಬೇರೆ ಬೇರೆ ರಾಜ್ಯಗಳಲ್ಲಿ ಉಳಿಸಿಕೊಳ್ಳಲು ಈ ಪಕ್ಷಗಳು ವಿಫಲವಾಗಿವೆ.

12.30: ಚೀನಾದ ನೈಋತ್ಯ ಭಾಗದಲ್ಲಿ ಭಾರಿ ಮಳೆ ಸುರಿದ ಪರಿಣಾಮ 9 ಜನ ಸಾವನ್ನಪ್ಪಿದ್ದು, 11ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 3,120 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
12.15: ನಕ್ಸಲ್ ಮುಖಂಡರ ಬಗ್ಗೆ ಮಾಹಿತಿ ನೀಡಿದವರಿಗೆ ನೀಡಲಾಗುವ ಮೊತ್ತವನ್ನು 60 ಸಾವಿರ ರು ನಿಂದ 1 ಕೋಟಿ ರು.ಗೆ ಮಹಾರಾಷ್ಟ್ರ ಸರ್ಕಾರ ಏರಿಸಿದೆ.

Mulayam Singh Yadav

10.30: ಪ್ರಧಾನಿ ನರೇಂದ್ರ ಮೋದಿ ಅವರು ಸೇನೆ ಹಾಗೂ ಐಎಎಫ್ ಯೋಧರೊಡನೆ ಕಾರ್ಗಿಲ್ ಗೆ ಬಂದಿಳಿದಿದ್ದಾರೆ.
10.15: ಮೋದಿ ಆಗಮನಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ಪಂಪೋರ್ ಪ್ರದೇಶದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ.

Updates India, International News in Brief Aug 11

9.45: ಭಾರತದಲ್ಲಿ ಇದುವರೆವಿಗೂ ಎಬೋಲಾ ಕಾಯಿಲೆ ಪಾಸಿಟಿವ್ ಎಂದು ಯಾವ ರೋಗಿಯನ್ನು ಘೋಷಿಸಿಲ್ಲ. ಹೀಗಾಗಿ ಆತಂಕ ಬೇಡ ಎಂದು ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿಕೆ.
9.30: ಮೋದಿ ಅವರು ಲೆಹ್ ಪ್ರದೇಶಕ್ಕೆ ಬಂದು ನಮ್ಮ ಅಹವಾಲು ಸ್ವೀಕರಿಸಲಿ ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+