ಜೂ.2: ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್
ಬೆಂಗಳೂರು, ಜೂ.2: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
10.55: ತೆಲಂಗಾಣದ ನೂತನ ಮುಖ್ಯಮಂತ್ರಿ ಕೆ ಚಂದ್ರಶೇಖರರಾವ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ ಅವರು ಅಭಿವೃದ್ಧಿಯ ಪಯಣ ನಿಮ್ಮದಾಗಲಿ ಎಂದು ಟ್ವೀಟ್ ಮಾಡಿದ್ದಾರೆ.
10.45 : ಗೃಹಸಚಿವ ರಾಜನಾಥ್ ಸಿಂಗ್ ಅವರು ಕೂಡಾ ಕೆ. ಚಂದ್ರಶೇಖರರಾವ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

10.30 : ಇಎಸ್ಎಲ್ ನರಸಿಂಹನ್ ಅವರು ತೆಲಂಗಾಣದ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಂದ್ರಶೇಖರ್ ಅವರು ತೆಲಂಗಾಣದ ಪ್ರಮುಖ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
India gets a new state! We welcome Telangana as our 29th state. Telangana will add strength to our development journey in the coming years.
— Narendra Modi (@narendramodi) June 2, 2014 10.15: ಕೆಸಿಆರ್ ಪುತ್ರ ಕೆಟಿ ರಾಮರಾವ್ ಅವರು ಕೆಸಿಆರ್ ಸಂಪುಟ ಸೇರ್ಪಡೆಗೊಂಡಿದ್ದಾರೆ.
10.00 : ಬಿಜೆಪಿ ನಾಯಕ ಮಾಜಿ ಸಚಿವ ತಪನ್ ಸಿಕ್ದರ್ ಅವರು ನಿಧನರಾಗಿದ್ದಾರೆ.
Congratulations to Shri K. Chandrashekhar Rao on taking oath as the first Chief Minister of new Telangana state. My good wishes to him.
— Rajnath Singh (@BJPRajnathSingh) June 2, 2014 9.45 : ಉತ್ತರಪ್ರದೇಶದಲ್ಲಿ ಹದಗೆಟ್ಟ ಕಾನೂನು ಮತ್ತು ಸುವ್ಯವಸ್ಥೆ ಸರಿಪಡಿಸುವಂತೆ ಸಿಎಂ ಅಖಿಲೇಶ್ ಯಾದವ್ ಅವರ ಕಚೇರಿಗೆ ಬಿಜೆಪಿ ಮುತ್ತಿಗೆ ಹಾಕಲಿದೆ.
9.30 : ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಪ್ರಧಾನಿ ಮೋದಿ ಅವರನ್ನು ಸೋಮವಾರ ಭೇಟಿ ಮಾಡಲಿದ್ದಾರೆ.
9.15: ಬುಡಕಟ್ಟು ಜನಾಂಗದ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.












Click it and Unblock the Notifications