ಜೂ.5: ದೇಶ, ವಿದೇಶಗಳ ಹೆಡ್ ಲೈನ್ ನ್ಯೂಸ್

ಬೆಂಗಳೂರು, ಜೂ.5: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಆಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

10.45: ಕರ್ತವ್ಯ ನಿರತ ಸರ್ಕಾರಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇರೆಗೆ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಹಿರಿಯ ಬಿಜೆಪಿ ನಾಯಕ ಯಶವಂತ್ ಸಿನ್ಹ ಅವರು ಜಾಮೀನು ಅರ್ಜಿ ಸಲ್ಲಿಸಲು ನಿರಾಕರಿಸಿದ್ದಾರೆ. ಹಜಾರಿಭಾಗ್ ನ್ಯಾಯಾಲಯ ಯಶವಂತ್ ಸಿನ್ಹ ಅವರನ್ನು ಬಂಧಿಸಿ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಬೇಕೆಂದು ಆದೇಶ ಮಾಡಿತ್ತು.
10.30 : ಪ್ರಧಾನಿ ನರೇಂದ್ರ ಮೋದಿ ಸೇರಿ ಹೊಸ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

News in brief on June 5

10.15: ಹೆರಾತ್ ನಿಂದ ತಮಿಳುನಾಡು ಮೂಲದ ಪ್ರೇಮ್ ಕುಮಾರ್(47) ಅಪಹರಣವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫ್ಘಾನಿಸ್ತಾನ ಪೊಲೀಸರು ಒಬ್ಬ ಶಂಕಿತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
10.05 : ಸುಮಿತ್ರಾ ಮಹಾಜನ್ ಅವರು 16ನೇ ಲೋಕಸಭೆ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
9.50: ಅಮೇಥಿಯಲ್ಲಿ ಮತ್ತೊಬ್ಬ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ. 25 ವರ್ಷದ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
9.30 : 24 ವರ್ಷ ವಯಸ್ಸಿನ ಪುಣೆಯ ಟೆಕ್ಕಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಹಿಂದೂ ನಾಯಕರ ಬಗ್ಗೆ ಅವಹೇಳನ ಚಿತ್ರ ಪ್ರಕಟಿಸಿದ ಕಾರಣಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಹೊಡೆದು ಸಾಯಿಸಿದ್ದಾರೆ ಎಂದು ವರದಿಯಾಗಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+