ಅ.8: ದೇಶ, ವಿದೇಶ ಸುದ್ದಿಗಳ ಹೆಡ್ ಲೈನ್ಸ್

ಬೆಂಗಳೂರು, ಅ.8: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

15.45: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಪಾದರಕ್ಷೆ ಧರಿಸಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಕೆಲ ಮಾಧ್ಯಮಗಳು ವಿನಾಕಾರಣ ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿವೆ. ಇಂಥ ಮಾಧ್ಯಮ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಲು ಚಿಂತಿಸುತ್ತಿದ್ದೇನೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.[ಏನಿದು ವಿವಾರ ಇಲ್ಲಿ ಓದಿ]

14.05: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯ ಕೊಚ್ಚಿಯಲ್ಲಿ ನಡೆಯಲಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಧೋನಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.[ಸ್ಕೋರ್ ಕಾರ್ಡ್ ಇಲ್ಲಿ ನೋಡಿ]
13.45: ಜಯಲಲಿತಾ ಅವರ ಬಿಡುಗಡೆಗಾಗಿ ಆಗ್ರಹಿಸಿ ಡ್ಯಾನ್ಸರ್ ಮಾಯಾ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಅದರೆ, ಚೆನ್ನೈ ಪೊಲೀಸರು ಮಯಾ ಆತ್ಮಹತ್ಯೆ ಯತ್ನವನ್ನು ವಿಫಲಗೊಳಿಸಿದ್ದಾರೆ.12.45: ಪ್ರಧಾನಿ ನರೇಂದ್ರ ಮೋದಿ ಅವರು ಹರ್ಯಾಣದ ರೋಹ್ಟಕ್ ನಲ್ಲಿ ಚುನಾವಣಾ ಪ್ರಚಾರ ನಿರತರಾಗಿದ್ದಾರೆ.
11.30: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಗುಂಡಿನ ಚಕಮಕಿ ಮುಂದುವರೆದಿದ್ದು 2 ಸಾವನ್ನಪ್ಪಿದ್ದರೆ 6 ಜನರಿಗೆ ಗಾಯಗಳಾಗಿವೆ.

11.00: ಆಂಧ್ರಪ್ರದೇಶ, ಒಡಿಶಾ ಕಡಲ ತೀರದಲ್ಲಿರುವ ಜನರಿಗೆ ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಫೈಲಿನ್ ನಂತೆ ಹಡ್ಪಡ್ ಚಂಡಮಾರುತದ ಭೀತಿ ಅಂಡಮಾನ್ ನಿಕೋಬಾರ್ ದ್ವೀಪದಲ್ಲೂ ಆವರಿಸಿದೆ.

10.20: ಮತದಾರರಿಗೆ ಆಮಿಷ ಒಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳುವ ಪ್ರಮೇಯವೇ ಇಲ್ಲ. ನಾನು ಯಾವ ಅನರ್ಥಕಾರಿ ಹೇಳಿಕೆಯನ್ನು ನೀಡಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಚುನಾವಣೆ ಬಂದಿದೆ, ನಿಮಗೆ ಮುಂದಿನ ದಿನಗಳಲ್ಲಿ ಲಕ್ಷ್ಮೀ ದರ್ಶನವಾಗಲಿದೆ, ರಾಜಕೀಯ ಪಕ್ಷಗಳು ನೀಡುವ ಉಡುಗೊರೆ ಮತ್ತಿತರ ಪ್ಯಾಕೇಜ್‌ಗಳನ್ನು ಸ್ವೀಕರಿಸಿ' ಎಂದು ನೀಡಿದ್ದ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. [ವಿವರ ಇಲ್ಲಿದೆ]

Updates India, International News in Brief Oct 8

10.10: ರಿಸಾರ್ಟ್ ದ್ವೀಪ ಬಾಲಿಗೆ 20 ಇಂಡೋನೇಷ್ಯನ್ನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ನಾಪತ್ತೆಯಾಗಿದೆ. ದ್ವೀಪದಲ್ಲಿ ನಡೆಯಬೇಕಿದ್ದ ಮದುವೆಯಲ್ಲಿ ಭಾಗವಹಿಸುವುದಕ್ಕಾಗಿ ತೆರಳುತ್ತಿದ್ದರು.
10.00: ಯಾಹೂ ಇಂಡಿಯಾ ತನ್ನ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರದಿಂದ ಸುಮಾರು 600 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲು ನಿರ್ಧರಿಸಿದೆ.
9.40: ಇನ್ಫೋಸಿಸ್ ನ ಹಿರಿಯ ಅಧಿಕಾರಿ, ಸಹ ಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಅವರು ಅಕ್ಟೋಬರ್ 10 ರಂದು ನಿವೃತ್ತಿ ಹೊಂದಲಿದ್ದಾರೆ.
9.30: ಕಾಶ್ಮೀರದ ಗಡಿಭಾಗದಲ್ಲಿ ಪಾಕಿಸ್ತಾನದ ಉಗ್ರರ ದಾಳಿಗೆ ಬಿಎಸ್ಎಫ್ ಯೋಧರು ತಕ್ಕ ಉತ್ತರ ನೀಡುತ್ತಿದ್ದಾರೆ. ಗುಂಡಿನ ಚಕಮಕಿ ಮುಂದುವರೆದಿದೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+