UPI New Rules: ಆಗಸ್ಟ್ 1ರಿಂದ ಯುಪಿಐ ನಿಯಮಗಳಲ್ಲಿ ಮಹತ್ವದ ಬದಲಾವಣೆ
UPI New Rules: ಹೊಸ ತಿಂಗಳು ಬರುತ್ತಿದ್ದಂತೆ ಹಲವು ಬದಲಾವಣೆಗಳು ಆಗುತ್ತಲೇ ಇರುತ್ತವೆ. ಹಾಗೆಯೇ ಇದೀಗ ಜುಲೈ ಮುಗಿದು ಆಗಸ್ಟ್ ಎಂಟ್ರಿಗೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಮುಂಬರುವ ಆಗಸ್ಟ್ 1, 2025ರಿಂದಲೇ ಯುಪಿಐ ಬಳಕೆದಾರರಿಗೆ ಹೊಸ ನಿಯಮಗಳು ಜಾರಿ ಆಗಲಿವೆ. ಹಾಗಾದ್ರೆ ಏನೆಲ್ಲಾ ಚೇಂಜಸ್ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಆಗಸ್ಟ್ 1, 2025ರಿಂದ ಯುಪಿಐ ವಹಿವಾಟುಗಳ ವೇಗ, ಸುರಕ್ಷತೆ ಮತ್ತು ವಿಶ್ವಾಸಾರ್ಹತೆಯ ಸುಧಾರಣೆ ದೃಷ್ಟಿಯಿಂದ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಈ ನವೀಕರಣಗಳನ್ನು ಪರಿಚಯಿಸುತ್ತಿದೆ. ಗೂಗಲ್ ಪೇ, ಫೋನ್ ಪೇ ಸೇರಿದಂತೆ ಹಲವು ಅಪ್ಲಿಕೇಶನ್‌ಗಳನ್ನು ಸಕ್ರಿಯವಾಗಿ ಬಳಸುವವರ ಮೇಲೆ ನೇರ ಪರಿಣಾಮ ಬೀರಲಿವೆ.

ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI)ದ ಪ್ರಕಾರ, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಯುಪಿಐ ಕುರಿತು ತುಂಬಾ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಜನರು ಆಗಾಗಾ ಬ್ಯಾಲೆನ್ಸ್ ಚೆಕ್ ಮಾಡುತ್ತಲೇ ಇದ್ದರು ಹಾಗೂ ವಹಿವಾಟಿನ ಸ್ಥಿತಿಯನ್ನ ಕೂಡ ನೋಡುತ್ತಿದ್ದರು. ಇದರಿಂದ ಸರ್ವರ್ ಮೇಲೆ ಒತ್ತಡ ಹೆಚ್ಚಾಗಿದ್ದವು. ಇದರಿಂದ ವಹಿವಾಟುಗಳು ನಿಧಾನ ಆಗುತ್ತಿದ್ದವು ಅಥವಾ ಫೇಲ್ ಎಂದು ತೋರಿಸುತ್ತಿದ್ದವು. ಆದ್ದರಿಂದ ಈ ವ್ಯವಸ್ಥೆಯನ್ನು ಉತ್ತಮಗೊಳಿಸಲು ಹೊಸ ನಿಯಮಗಳನ್ನು ಜಾರಿ ಮಾಡಲಾಗುತ್ತಿದೆ.
ಹೊಸ ನಿಯಮಗಳು ಹೇಳೋದೇನು?
* ಹೊಸ ನಿಯಮಗಳ ಪ್ರಕಾರ ಒಂದು ದಿನದಲ್ಲಿ ಗರಿಷ್ಠ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಬಹುದು.
* ಒಂದು ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯ ಮಾಹಿತಿಯನ್ನ ದಿನಕ್ಕೆ 25 ಬಾರಿ ಮಾತ್ರ ವೀಕ್ಷಣೆ ಮಾಡಬಹುದು.
* ಆಟೋ ಪೇ ವಹಿವಾಟುಗಳಿಗೆ ನಿಗದಿತ ಸಮಯ ಸ್ಲಾಟ್‌ಗಳು ಇರುತ್ತವೆ.
* ವಹಿವಾಟಿನ ಸ್ಥಿತಿಯನ್ನು ಪರಿಶೀಲನೆ ಮಾಡುವುದಕ್ಕೂ ಮಿತಿ ಇರಲಿದ್ದು, ಪ್ರತಿ 90 ಸೆಕೆಂಡ್‌ಗಳಲ್ಲಿ ಒಂದೇ
* ವಹಿವಾಟಿನ ಸ್ಥಿತಿಯನ್ನು 3 ಬಾರಿ ಮಾತ್ರ ನೋಡಬಹುದು. ಯಾಕಂದ್ರೆ, ಪ್ರತಿ ಪರಿಶೀಲನೆ ನಡುವೆ ಕನಿಷ್ಠ 90 ಸೆಕೆಂಡುಗಳ ಅಂತರ ಇರಬೇಕಾಗುತ್ತದೆ.
ದೇಶದಲ್ಲಿ ದಿನದಿಂದ ದಿನಕ್ಕೆ ಯುಪಿಐ ಬಳಕೆದಾರರು ಹೆಚ್ಚಾಗುತ್ತಲಿದ್ದಾರೆ. ಯುಪಿಐ ಬಗ್ಗೆ ದೂರುಗಳು ಕೇಳಿ ಬಂದಾಗ ಪ್ರತಿ ಕೆಲವು ನಿಮಿಷಗಳಿಗೊಮ್ಮೆ ಬ್ಯಾಲೆನ್ಸ್ ಅನ್ನು ಪರಿಶೀಲಿಸುವುದು ಅಥವಾ ಪಾವತಿ ಸ್ಥಿತಿಯನ್ನು ಹಲವು ಬಾರಿ ರಿಫ್ರೆಶ್ ಮಾಡುವುದು ಸೇರಿದಂತೆ ಮುಂತಾದವುಗಳಿಂದ ಸಮಸ್ಯೆ ಎದುರಾಗುತ್ತಿದೆ ಎಂದು ಹೇಳಲಾಗಿತ್ತು. ಆದ್ದರಿಂದ ಒಂದು ಈ ಮಿತಿಯನ್ನು ನಿಗದಿಪಡಿಸಲಾಗಿದೆ.
ಗ್ರಾಹಕರಿಂದ ಆಟೋ ಪೇಮೆಂಟ್ ಮೂಲಕ ಹಣ ಪಡೆಯುವ ವ್ಯಾಪಾರಿಗಳು ಅಥವಾ ಕಂಪನಿಗಳು NPCI ಹೇಳಿದ ಸಮಯಕ್ಕೆ ಸರಿಯಾಗಿ ಪಾವತಿಗಳನ್ನು ಮಾಡಲಾಗುತ್ತದೆ. ಇದರಿಂದ ಪಾವತಿ ವ್ಯವಸ್ಥೆ ಮತ್ತಷ್ಟು ಉತ್ತಮ ಆಗಲಿದೆ. ಈ ಬದಲಾವಣೆಗಳಿಂದ ಸಾಮಾನ್ಯ ಜನರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ತಿಳಿದುಬಂದಿದೆ.
ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಮೂಲಕ ಸಂಪೂರ್ಣವಾಗಿ ಉಚಿತ ಡಿಜಿಟಲ್ ವಹಿವಾಟುಗಳ ವ್ಯವಸ್ಥೆ ಶೀಘ್ರದಲ್ಲೇ ಕೊನೆಗೊಳ್ಳಬಹುದು ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಮುಂಬೈನಲ್ಲಿ ನಡೆದ ಫೈನಾನ್ಷಿಯಲ್ ಎಕ್ಸ್‌ಪ್ರೆಸ್ ಬಿಎಫ್‌ಎಸ್‌ಐ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ಯುಪಿಐ ವ್ಯವಸ್ಥೆಯು ಬಳಕೆದಾರರಿಗೆ ಉಚಿತ ಆಗಿದ್ದರೂ, ಸೇವೆಯ ಹಿಂದಿನ ಪಾವತಿ ಮೂಲಸೌಕರ್ಯವನ್ನ ನಿರ್ವಹಿಸುವ ವೆಚ್ಚವನ್ನು ಸರ್ಕಾರವು ಸಬ್ಸಿಡಿ ನೀಡುವ ಬ್ಯಾಂಕುಗಳು ಮತ್ತು ಇತರ ಪಾಲುದಾರರ ಮೂಲಕ ಭರಿಸುತ್ತದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.
ಈ ವಹಿವಾಟಿನ ಮೇಲೆ ಜಿಎಸ್‌ಟಿ ಇಲ್ಲ: ಮತ್ತೊಂದೆಡೆ 2000 ರೂಪಾಯಿಗಿಂತ ಹೆಚ್ಚು ಯಪಿಐ ವಹಿವಾಟಿನ ಮೇಲೆ ಜಿಎಸ್‌ಜಿ ವಿಧಿಸಲಾಗುತ್ತದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿದ್ದವು. ಇದು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿದ್ದಲ್ಲದೆ, ಅವರಿಗೆ ಆತಂಕ ಸೃಷ್ಟಿಸಿತ್ತು. ಈ ಕುರಿತು ರಾಜ್ಯಸಭೆ ಯಲ್ಲಿಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪಂಕಜ್ ಚೌಧರಿ 'ಇಂತಹ ಯಾವುದೇ ಟ್ಯಾಕ್ಸ್ ವಿಧಿಸುವ ಚಿಂತನೆಯಿಲ್ಲ. ಜಿಎಸ್‌ಟಿ ಕುರಿತ ನಿರ್ಧಾರಗಳು ಕೇವಲ ಜಿಎಸ್‌ಎಟಿ ಕೌನ್ಸಿಲ್ ಶಿಫಾರಸ್ಸಿನ ಮೇರೆಗೆ ಮಾತ್ರ ಸಾಧ್ಯ,' ಎಂದು ಹೇಳಿದರು.
ಹಣಕಾಸು ಸಚಿವಾಲಯದ ಅಧಿಕೃತ ಹೇಳಿಕೆಯಲ್ಲಿ ಸಹ ಇದು ಸ್ಪಷ್ಟವಾಗಿದ್ದು, '₹2000 ದಾಟಿದ ಯುಪಿಐ ವಹಿವಾಟಿಗೆ ಯಾವುದೇ ಜಿಎಸ್‌ಟಿ ವಿಧಿಸಲಾಗುತ್ತಿಲ್ಲ. ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡುವ ಮೂಲಕ ಜನರಲ್ಲಿದ್ದ ಗೊಂದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಡಿದರು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications