ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭೆಯಲ್ಲಿ ರಫೆಲ್ ವಿಮಾನ ಖರೀದಿ ಗದ್ದಲ, ಕೋಲಾಹಲ

By Gururaj
|
Google Oneindia Kannada News

ನವದೆಹಲಿ, ಆಗಸ್ಟ್ 10 : ರಫೆಲ್ ಯುದ್ಧ ವಿಮಾನ ಖರೀದಿ ಬಗ್ಗೆ ರಾಜ್ಯಸಭೆಯಲ್ಲಿ ಭಾರೀ ಗದ್ದಲ ಉಂಟಾಗಿದೆ. ಜಂಟಿ ಸಂಸದೀಯ ಸಮಿತಿ ರಚನೆ ಮಾಡಬೇಕು ಎಂದು ವಿಪಕ್ಷಗಳು ಪಟ್ಟು ಹಿಡಿದಿವೆ. ಆದ್ದರಿಂದ, ಕಲಾಪವನ್ನು ಕೆಲಕಾಲ ಮುಂದೂಡಲಾಗಿದೆ.

ಶುಕ್ರವಾರ ಮುಂಗಾರು ಅಧಿವೇಶನದ ಕೊನೆಯ ದಿನವಾಗಿದೆ. ಶುಕ್ರವಾರ ಬೆಳಗ್ಗೆ ರಾಜ್ಯಸಭೆ ಕಲಾಪ ಆರಂಭವಾದ ತಕ್ಷಣ ಕಾಂಗ್ರೆಸ್‌ ರಫೆಲ್ ಯುದ್ಧ ವಿಮಾನ ಖರೀದಿ ಬಗ್ಗೆ ವಿಷಯವನ್ನು ಪ್ರಸ್ತಾಪಿಸಿತು. ನಂತರ ಕಲಾಪದಲ್ಲಿ ಗದ್ದಲ ಉಂಟಾಯಿತು.

ರಫೇಲ್ ಒಪ್ಪಂದಕ್ಕೆ ಆಕ್ಷೇಪ, ಕಾಂಗ್ರೆಸ್ ಕಡೆಗೆ ಬಾಣ ತಿರುಗಿಸಿದ ಸಚಿವೆರಫೇಲ್ ಒಪ್ಪಂದಕ್ಕೆ ಆಕ್ಷೇಪ, ಕಾಂಗ್ರೆಸ್ ಕಡೆಗೆ ಬಾಣ ತಿರುಗಿಸಿದ ಸಚಿವೆ

ಕಲಾಪ ಆರಂಭವಾಗುವುದಕ್ಕೂ ಮೊದಲು ಸಂಸತ್ ಭವನದ ಹೊರಗೆ ವಿರೋಧ ಪಕ್ಷಗಳು ರಫೆಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು. ಎಐಸಿಸಿ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

58 ಸಾವಿರ ಕೋಟಿಯ ರಫೇಲ್ ಡೀಲ್, ಅದರ ಸುತ್ತ- ಮುತ್ತ, ಎತ್ತ?58 ಸಾವಿರ ಕೋಟಿಯ ರಫೇಲ್ ಡೀಲ್, ಅದರ ಸುತ್ತ- ಮುತ್ತ, ಎತ್ತ?

Uproar by Opposition in Rajya Sabha over Rafale Deal issue

ಸಂಸತ್ ಭವನದ ಮುಂದಿನ ಗಾಂಧಿ ಪ್ರತಿಮೆ ಮುಂದೆ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್‌, ಸಿಪಿಐ, ಆರ್‌ಜೆಡಿ ಮತ್ತು ಎಎಪಿ ಪಕ್ಷಗಳು ಪಾಲ್ಗೊಂಡಿದ್ದವು. ಈ ಪ್ರತಿಭಟನೆ ಬಳಿಕ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ರಫೆಲ್ ಯುದ್ಧ ವಿಮಾನ ಖರೀದಿ ವಿಚಾರ ಪ್ರಸ್ತಾಪಿಸಿತು.

ರಾಫೇಲ್ ಡೀಲ್ ನಲ್ಲಿ ಗೋಲ್ ಮಾಲ್: ರಾಹುಲ್ ಗಂಭೀರ ಆರೋಪರಾಫೇಲ್ ಡೀಲ್ ನಲ್ಲಿ ಗೋಲ್ ಮಾಲ್: ರಾಹುಲ್ ಗಂಭೀರ ಆರೋಪ

ರಾಜ್ಯಸಭೆಯಲ್ಲಿ ರಫೆಲ್ ಯುದ್ಧ ವಿಮಾನ ಖರೀದಿ ಬಗ್ಗೆ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್, ಈ ಕುರಿತು ತನಿಖೆ ನಡೆಸಲು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚನೆ ಮಾಡಬೇಕು ಎಂದು ಒತ್ತಾಯಿಸಿತು. ಇದರಿಂದಾಗಿ ಬಿಜೆಪಿ ಮತ್ತು ವಿಪಕ್ಷಗಳ ಸದಸ್ಯರ ನಡುವೆ ಗದ್ದಲ ನಡೆಯಿತು. ಆದ್ದರಿಂದ, ಕಲಾಪವನ್ನು ಕೆಲಕಾಲ ಮುಂದೂಡಲಾಯಿತು.

English summary
Rajya Sabha session was adjourned after Uproar by Opposition in Rajya Sabha over Rafale Deal issue. Congress raises issue in Rajya Sabha on August 10, 2018 last day of the Monsoon Session of Parliament.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X