ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎನ್‌ಡಿಎ ಪರೀಕ್ಷೆ: ಅವಿವಾಹಿತ ಮಹಿಳೆಯರಿಗೆ ಅನುಮತಿ ನೀಡಿದ UPSC

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 24: ದಶಕಗಳಿಂದ ಹೆಣ್ಣುಮಕ್ಕಳು ಕಂಡ ಕನಸು ಇಂದು ನನಸಾಗಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಹಾಗೂ ನೌಕಾ ಅಕಾಡೆಮಿ ಪ್ರವೇಶ ಪರೀಕ್ಷೆ ಬರೆಯಲು ಅವಿವಾಹಿತ ಮಹಿಳೆಯರಿಗೆ ಕೇಂದ್ರ ಲೋಕಸೇವಾ ಆಯೋಗ ಅನುಮತಿ ನೀಡಿದೆ.

ಚರ್ಚೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹಿಂದೆ ಸುಪ್ರೀಂಕೋರ್ಟ್‌ಗೆ ಎನ್‌ಡಿಎಯಲ್ಲಿ ಮಹಿಳೆಯರಿಗೂ ಅವಕಾಶ ನೀಡುತ್ತೇವೆ ಎಂದು ಹೇಳಿತ್ತು. ಆದರೆ ಇಂದು ವಿಚಾರಣೆ ಸಂದರ್ಭದಲ್ಲಿ ಈ ವರ್ಷದಿಂದಲ್ಲ ಮುಂದಿನ ವರ್ಷದಿಂದ ಅವಕಾಶ ಕೊಡುತ್ತೇವೆ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿತ್ತು.

 ಎನ್‌ಡಿಎ ಪ್ರವೇಶಿಸಲು ದಶಕಗಳಿಂದ ಮಹಿಳೆಯರು ಕಂಡಿದ್ದ ಕನಸು ನನಸು ಎನ್‌ಡಿಎ ಪ್ರವೇಶಿಸಲು ದಶಕಗಳಿಂದ ಮಹಿಳೆಯರು ಕಂಡಿದ್ದ ಕನಸು ನನಸು

ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಈವರ್ಷದಿಂದಲೇ ಅವಕಾಶ ನೀಡಲು ಏನು ಸಮಸ್ಯೆ, ಈ ವರ್ಷದಿಂದಲೇ ಎನ್‌ಡಿಎಯಲ್ಲಿ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ ನೀಡಿ ಎಂದು ಹೇಳಿದೆ.

UPSC Allows Unmarried Women To Apply For National Defence, Naval Academy Exam

ಮುಂದಿನ ವರ್ಷದಿಂದ ಮಹಿಳಾ ಅಭ್ಯರ್ಥಿಗಳು ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ಪರೀಕ್ಷೆ ಸಂಬಂಧ ಕುಶ್ ಕಲ್ರಾ ಎಂಬುವವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿ, ಅರ್ಜಿದಾರರ ಪರವಾಗಿ ಹಿರಿಯ ವಕೀಲ ಚಿನ್ಮಯ್ ಪ್ರದೀಪ್ ಶರ್ಮಾ ಅವರು ನ್ಯಾಯಾಲಯದಲ್ಲಿ ಹಾಜರಿದ್ದರು.

ಅರ್ಜಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಎಸ್ ಕೆ ಕೌಲ್ ನೇತೃತ್ವದ ಪೀಠ, ಮೇ 2022 ರಲ್ಲಿ ಪರೀಕ್ಷೆಗೆ ಹಾಜರಾದರೆ ಜೂನ್ 2023 ರಲ್ಲಿ ಪ್ರವೇಶಾತಿ ನಡೆಯುತ್ತದೆ. ನಾವು ಒಂದು ವರ್ಷದವರೆಗೆ ವಿಳಂಬ ಮಾಡಲು ಸಾಧ್ಯವಿಲ್ಲ. ನಾವು ಹುಡುಗಿಯರಿಗೆ ಭರವಸೆ ನೀಡಿದ್ದೇವೆ. ನಾವು ಈಗ ಆ ಭರವಸೆಯನ್ನು ನಿರಾಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೆ, ಈ ವರ್ಷವೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪರೀಕ್ಷೆ ಬರೆಯಲು ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಆದೇಶಿಸಿದೆ.

ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಶಸ್ತ್ರ ಪಡೆಗಳು ಅತ್ಯುತ್ತಮ ಪ್ರತಿಕ್ರಿಯಾ ತಂಡವಾಗಿದ್ದು, ಎನ್‌ಡಿಎಯಲ್ಲಿ ವಿಳಂಬವಿಲ್ಲದೆ ಮಹಿಳೆಯರ ಸೇರ್ಪಡೆಗೆ ಹಾದಿ ಸುಗಮಗೊಳಿಸಲು ಅಗತ್ಯವಾದ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಆಶಿಸುತ್ತೇವೆ. ಇದಕ್ಕಾಗಿ ಯುಪಿಎಸ್‌ಸಿ ಸಹಯೋಗದೊಂದಿಗೆ ರಕ್ಷಣಾ ಇಲಾಖೆಯಿಂದ ಅಗತ್ಯವಾದ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದೆ.

ಸಮಸ್ಯೆಗಳು ಅರ್ಥವಾಗುತ್ತದೆ. ಆದರೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ ನಿಮಗಿದೆ. ಫಲಿತಾಂಶಗಳನ್ನು ನೋಡಿ, ಯೋಜನೆ ಮುಂದುವರೆಸುವ ಕುರಿತು ನಿರ್ಧಾರ ಕೈಗೊಳ್ಳಬಹುದು. ಆಕಾಂಕ್ಷಿಗಳೇ ಪರೀಕ್ಷೆ ಬರೆಯಲು ಮುಂದೆ ಬರುತ್ತಿರುವಾಗ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಈ ಮನವಿಯನ್ನು ಪರಿಗಣಿಸುವುದು ಕಷ್ಟವಾಗುತ್ತದೆ,

ಸಶಸ್ತ್ರ ಸೇವೆಗಳು ಅತ್ಯಂತ ಕಷ್ಟಕರ ಸನ್ನಿವೇಶಗಳನ್ನು ನಿಭಾಯಿಸಿವೆ. ತುರ್ತುಪರಿಸ್ಥಿತಿಗಳನ್ನು ಎದುರಿಸುವುದು ಅವರ ತರಬೇತಿಯ ಒಂದು ಭಾಗವಾಗಿದೆ. ಹೀಗಾಗಿ ಈಗಾಗಲೇ ನೀಡಲಾಗಿರುವ ಆದೇಶವನ್ನು ಹಿಂಪಡೆಯುವುದು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದೀಗ ಸುಪ್ರೀಂಕೋರ್ಟ್ ಆದೇಶಕ್ಕೆ ಬೆಲೆಕೊಟ್ಟ ಯುಪಿಎಸ್‌ಸಿ ಅವಿವಾಹಿತ ಮಹಿಳೆಯರಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದೆ. ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದು, upsconline.nic.in ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಹಾಗೂ ವಿವಿರಗಳು ಲಭ್ಯವಿದ್ದು, ಅಕ್ಟೋಬರ್ 8ರ ಸಂಜೆ 6ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ನೀಡಬೇಕಾಗಿಲ್ಲ, ನವೆಂಬರ್ 14ರಂದು ಪರೀಕ್ಷೆ ನಡೆಯಲಿದೆ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ಎನ್‌ಡಿಎಗೆ ಮಹಿಳೆಯರ ಪ್ರವೇಶದ ಅಧಿಸೂಚನೆಯನ್ನು 2022ರ ಮೇ ತಿಂಗಳಲ್ಲಿ ಹೊರಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಕೋರ್ಟ್‌ಗೆ ತಿಳಿಸಿತ್ತು.

ಆದರೆ ಇದಕ್ಕೆ ಎಸ್‌ಕೆ ಕೌಲ್ ನೇತೃತ್ವದ ಪೀಠ ಒಪ್ಪಿಗೆ ನೀಡಿರಲಿಲ್ಲ, ಪ್ರಸ್ತುತ ಸಾಲಿನಿಂದಲೇ ಅನುಮತಿ ನೀಡಬೇಕು ಎಂದು ತಾಕೀತು ಮಾಡಿತ್ತು. ಇದೀಗ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

English summary
The Union Public Service Commission (UPSC) has allowed unmarried women to apply for the National Defence Academy (NDA) and naval academy exam, an official statement said on Friday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X