ಯುಪಿಎಸ್ ಸಿ ಪರೀಕ್ಷೆ ಅಧಿಸೂಚನೆ, ಜೂ. 18ರಂದು ಪರೀಕ್ಷೆ
ಕೇಂದ್ರೀಯ ಲೋಕಸೇವಾ ಆಯೋಗ (ಯುಪಿಎಸ್ ಸಿ) ಹಾಗೂ ಭಾರತೀಯ ಅರಣ್ಯ ಸೇವೆ(ಐಎಫ್ ಎಸ್) ಪರೀಕ್ಷೆಗಳಿಗೆ ಅಧಿಸೂಚನೆ ಪ್ರಕಟಗೊಂಡಿದೆ.
ನವದೆಹಲಿ, ಫೆಬ್ರವರಿ. 23: 2017ನೇ ಸಾಲಿನ ನಾಗರಿಕ ಸೇವೆ(ಐಸಿಎಸ್) ಹಾಗೂ ಭಾರತೀಯ ಅರಣ್ಯ ಸೇವೆ (ಐಎಫ್ ಎಸ್) ಪರೀಕ್ಷೆಗಳಿಗೆ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ)ಅಧಿಸೂಚನೆ ಹೊರಡಿಸಿದೆ.
ಒಟ್ಟು 20 ವಿಭಾಗಗಳ 980 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆ ದಿನವಾಗಿದ್ದು ಪ್ರಿಲಿಮಿನರಿ ಪರೀಕ್ಷೆ ಜೂ.18ರಂದು ನಡೆಯಲಿದೆ.

ಐಎಎಸ್, ಐಪಿಎಸ್, ಐಎಫ್ಎಸ್ ಸಹಿತ ಒಟ್ಟು 20 ವಿಭಾಗಗಳ ಆಡಳಿತಾತ್ಮಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 3ಹಂತಗಳಲ್ಲಿ ನಾಗರಿಕ ಸೇವಾ ಪರೀಕ್ಷೆ ನಡೆಸಲಾಗುತ್ತಿದೆ.
ಪೂರ್ವಭಾವಿ, ಮುಖ್ಯ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳ ರ್ಯಾಂಕ್ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ.












Click it and Unblock the Notifications