ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2021 ಮುಂದೂಡಿಕೆ

|
Google Oneindia Kannada News

ನವದೆಹಲಿ, ಮೇ 13: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸುವ 2021 ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಅಕ್ಟೋಬರ್ 10ರಂದು ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ. ಕೋವಿಡ್ ಕಾರಣದಿಂದ ಕಳೆದ ವರ್ಷ ಕೂಡಾ ಸತತವಾಗಿ ನಾಲ್ಕು ಬಾರಿ ಪರೀಕ್ಷೆ ರದ್ದು ಪಡಿಸಿ, ಮುಂದೂಡಲಾಗಿತ್ತು.

UPSC civil services preliminary exam 2021 postponed due to Covid-19

ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಮುಂದೂಡಲಾಗಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಯುಪಿಎಸ್ ಸಿ ಸಿವಿಲ್ ಸರ್ವೀಸ್ ಪರೀಕ್ಷೆ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಯುಪಿಎಸ್‌ಸಿ ಅಧಿಕೃತ ವೆಬ್ ತಾಣ (upsc.gov.in) ಕ್ಕೆ ಭೇಟಿ ನೀಡಬಹುದು.

ಐಎಎಸ್, ಐಎಫ್ಎಸ್ ಹಾಗೂ ಐಪಿಎಸ್ ನೇಮಕಾತಿಗಾಗಿ ವಾರ್ಷಿಕವಾಗಿ ನಾಗರಿಕ ಸೇವಾ ಪರೀಕ್ಷೆ ನಡೆಸಲಾಗುತ್ತದೆ. ಸದ್ಯ ಕಳೆದ ಅವಧಿಯ ಮುಖ್ಯ ಪರೀಕ್ಷೆ ಮುಕ್ತಾಯವಾಗಿದೆ. ಆದರೆ, ಸಂದರ್ಶನ ಪ್ರಕ್ರಿಯೆ ಆರಂಭಕ್ಕೆ ಕೋವಿಡ್ ಮತ್ತೊಮ್ಮೆ ಅಡ್ಡಿಪಡಿಸಿದೆ. ಯುಪಿಎಸ್‌ಸಿ ಇತರೆ ಪರೀಕ್ಷೆಗಳನ್ನು ಮುಂದೂಡಿದೆ.

English summary
UPSC civil services exam 2021 postponed to October 10 amid rise on Covid-19 cases. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X