ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 10ಕ್ಕೆ UPSC ಪೂರ್ವಭಾವಿ ಪರೀಕ್ಷೆ 2021,ಇಲ್ಲಿವೆ ಮಾರ್ಗಸೂಚಿ

|
Google Oneindia Kannada News

ನವದೆಹಲಿ, ಅಕ್ಟೋಬರ್ 08: ಕೇಂದ್ರ ಲೋಕಸೇವಾ ಆಯೋಗ (UPSC) ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಅಕ್ಟೋಬರ್ 10 ರಂದು ನಡೆಸುತ್ತಿದೆ. ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಗಳು 3 ಹಂತಗಳಲ್ಲಿ ನಡೆಯಲಿವೆ. ಈ ಸೇವೆಗಳಿಗೆ ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಐಎಎಸ್, ಐಪಿಎಸ್, ಐಎಫ್​​ಎಸ್​ ಮುಂತಾದ ಹುದ್ದೆಗಳಿಗೆ ಈ ಪರೀಕ್ಷೆಯ ಮೂಲಕವೇ ನೇಮಕಾತಿ ನಡೆಯುತ್ತದೆ.

ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2021 ಮುಂದೂಡಿಕೆಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2021 ಮುಂದೂಡಿಕೆ

ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು, ವೈಯಕ್ತಿಕವಾಗಿ ಅರೋಗ್ಯ ಕಾಪಾಡಿಕೊಳ್ಳುವುದು ಸೇರಿದಂತೆ ಸೂಚಿಸಲಾದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಯುಪಿಎಸ್​ಸಿ ತಿಳಿಸಿದೆ.

UPSC Civil Services Prelims 2021 On October 10, Check Guidelines In Kannada

ಇದಲ್ಲದೇ, ಪಾರದರ್ಶಕ ಬಾಟಲಿನಲ್ಲಿ ಸ್ಯಾನಿಟೈಸರ್​ ಅನ್ನು ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಹೋಗಲು ಅವಕಾಶ ಕೊಡಲಾಗಿದೆ. ಈ ಬಾರಿ ಲಡಾಖ್​ನ ಲೇಹ್​ನಲ್ಲಿ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ.

ಪರಿಶೀಲನೆ ಸಮಯದಲ್ಲಿ ಅಭ್ಯರ್ಥಿಗಳು ಮಾಸ್ಕ್ ತೆಗೆಯಬೇಕೆಂದು ಅಧಿಕಾರಿಗಳು ಸೂಚಿಸಿದರೆ ತೆಗೆದು ಸಹಕರಿಸಬೇಕು ಎಂದು ಸೂಚಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಲಾಗಿದೆ.

ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು, ಅಕ್ಟೋಬರ್ 10ರಂದು ನಡೆಸಲಾಗುವುದು ಎಂದು ಆಯೋಗ ತಿಳಿಸಿತ್ತು. ಕೋವಿಡ್ ಕಾರಣದಿಂದ ಕಳೆದ ವರ್ಷ ಕೂಡಾ ಸತತವಾಗಿ ನಾಲ್ಕು ಬಾರಿ ಪರೀಕ್ಷೆ ರದ್ದು ಪಡಿಸಿ, ಮುಂದೂಡಲಾಗಿತ್ತು.

ಐಎಎಸ್, ಐಎಫ್ಎಸ್ ಹಾಗೂ ಐಪಿಎಸ್ ನೇಮಕಾತಿಗಾಗಿ ವಾರ್ಷಿಕವಾಗಿ ನಾಗರಿಕ ಸೇವಾ ಪರೀಕ್ಷೆ ನಡೆಸಲಾಗುತ್ತದೆ. ಸದ್ಯ ಕಳೆದ ಅವಧಿಯ ಮುಖ್ಯ ಪರೀಕ್ಷೆ ಮುಕ್ತಾಯವಾಗಿದೆ. ಆದರೆ, ಸಂದರ್ಶನ ಪ್ರಕ್ರಿಯೆ ಆರಂಭಕ್ಕೆ ಕೋವಿಡ್ ಮತ್ತೊಮ್ಮೆ ಅಡ್ಡಿಪಡಿಸಿತ್ತು. ಯುಪಿಎಸ್‌ಸಿ ಇತರೆ ಪರೀಕ್ಷೆಗಳನ್ನು ಮುಂದೂಡಿತ್ತು.

ದೇಶದಲ್ಲಿನ ಮಾರಕ ಕೊರೋನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ ಪ್ರಸ್ತುತ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.1ಕ್ಕಿಂತ ಕಡಿಮೆ ಅಂದರೆ ಶೇ.0.71 ಇದು 2020ರ ಮಾರ್ಚ್ ತಿಂಗಳಲ್ಲಿ ದಾಖಲಾದ ಪ್ರಮಾಣಕ್ಕಿಂತ ಕಡಿಮೆ ಎನ್ನಲಾಗಿದೆ.

ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2, 40, 221ಕ್ಕೆ ಕುಸಿದಿದ್ದು, ಇದು ಕಳೆದ 205 ದಿನಗಳಲ್ಲೇ ಕಡಿಮೆ ಎನ್ನಲಾಗಿದೆ. ಇನ್ನು ಚೇತರಿಕೆ ಪ್ರಮಾಣ ಶೇ.97.96ಕ್ಕೆ ಏರಿಕೆಯಾಗಿದ್ದು, ಇದು 2020 ಮಾರ್ಚ್ ತಿಂಗಳ ಬಳಿಕ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24, 963 ಸೋಂಕಿತರು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಚೇತರಿಕೆ ಪ್ರಮಾಣ 3, 32, 25, 221ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಮಾರಕ ಕೊರೊನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ ಪ್ರಸ್ತುತ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.1ಕ್ಕಿಂತ ಕಡಿಮೆ ಅಂದರೆ ಶೇ.0.71 ಇದು 2020ರ ಮಾರ್ಚ್ ತಿಂಗಳಲ್ಲಿ ದಾಖಲಾದ ಪ್ರಮಾಣಕ್ಕಿಂತ ಕಡಿಮೆ ಎನ್ನಲಾಗಿದೆ.

ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2, 40, 221ಕ್ಕೆ ಕುಸಿದಿದ್ದು, ಇದು ಕಳೆದ 205 ದಿನಗಳಲ್ಲೇ ಕಡಿಮೆ ಎನ್ನಲಾಗಿದೆ. ಇನ್ನು ಚೇತರಿಕೆ ಪ್ರಮಾಣ ಶೇ.97.96ಕ್ಕೆ ಏರಿಕೆಯಾಗಿದ್ದು, ಇದು 2020 ಮಾರ್ಚ್ ತಿಂಗಳ ಬಳಿಕ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24, 963 ಸೋಂಕಿತರು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಚೇತರಿಕೆ ಪ್ರಮಾಣ 3, 32, 25, 221ಕ್ಕೆ ಏರಿಕೆಯಾಗಿದೆ.

English summary
The Union Public Service Commission (UPSC) will conduct the preliminary phase of the civil services exam 2021 on October 10. The candidates who are preparing for the examination must note that the commission has released the guidelines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X