ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆ ಜೂನ್ ನಲ್ಲಿ

Posted By:
Subscribe to Oneindia Kannada

ನವದೆಹಲಿ, ಅಕ್ಟೋಬರ್, 27: 2017ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆ ಆಗಸ್ಟ್ ತಿಂಗಳ ಬದಲಿಗೆ ಜೂನ್ ತಿಂಗಳಿನಲ್ಲಿ ನಡೆಯಲಿದೆ.

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ನಡೆಸುವ ಐಎಎಸ್, ಐಪಿಎಸ್, ಐಎಫ್ ಎಸ್, ಸೇರಿದಂತೆ ವಿವಿಧ ನಾಗರಿಕ ಸೇವಾ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಆಗಸ್ಟ್ ತಿಂಗಳ ಬದಲಿಗೆ ಜೂನ್ ನಲ್ಲಿ ನಿರ್ಧರಿಸಲಾಗಿದ್ದು, ಯುಪಿಎಸ್ ಸಿ ಪ್ರಕಟಿಸಿರುವ ಕ್ಯಾಲೆಂಡರ್ ನಲ್ಲಿ ಜೂನ್ 18ರಂದು ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದೆ.

UPSC civil services prelims to be held on June 18, 2017

ಪರೀಕ್ಷೆ ಹಾಗೂ ಆಯ್ಕೆ ಪ್ರಕ್ರಿಯೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಮುಂಚಿತವಾಗಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಯುಪಿಎಸ್ ಸಿ ಅಧಿಕಾರಿಗಳು ತಿಳಿಸಿದ್ದಾರೆ.

2014, 2015, 2016ನೇ ವರ್ಷದಲ್ಲಿ ಪೂರ್ವಭಾವಿ ಪರೀಕ್ಷೆಗಳು ಆಗಸ್ಟ್ ತಿಂಗಳಲ್ಲಿ ನಡೆದಿದ್ದವು. 2013 ರಲ್ಲಿ ಮಾತ್ರ ಮೇ ತಿಂಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The civil services preliminary examination, to select IAS and IPS officers among others, will be held in June instead of August next year.
Please Wait while comments are loading...