ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ 2021; ಫಲಿತಾಂಶ ಪ್ರಕಟ

|
Google Oneindia Kannada News

ನವದೆಹಲಿ, ಅಕ್ಟೋಬರ್ 29; ಕೇಂದ್ರ ಲೋಕಸೇವಾ ಆಯೋಗ 2021ನೇ ಸಾಲಿನ ಪೂರ್ವಭಾವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ. ಮುಖ್ಯ ಪರೀಕ್ಷೆಗಳು 2022ರ ಜನವರಿ 7 ರಿಂದ 16ರ ತನಕ ನಡೆಯಲಿವೆ.

ಶುಕ್ರವಾರ ಯುಪಿಎಸ್2021ನೇ ಸಾಲಿನ ಪೂರ್ವಭಾವಿ ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಅಕ್ಟೋಬರ್ 10ರಂದು ದೇಶದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆದವರು ಫಲಿತಾಂಶ ವೀಕ್ಷಿಸಬಹುದು.

ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿ

upsc.gov.in. ವೆಬ್‌ಸೈಟ್‌ನಲ್ಲಿ ಫಲಿತಾಂಶ ಪಿಡಿಎಫ್ ಮಾದರಿಯಲ್ಲಿ ಲಭ್ಯವಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು 2022ರಲ್ಲಿ ನಡೆಯುವ ಮುಖ್ಯ ಪರೀಕ್ಷೆ ಬರೆಯಲು ಅರ್ಹರು.

ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 150 ಹುದ್ದೆಗಳಿಗೆ ಅರ್ಜಿ ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 150 ಹುದ್ದೆಗಳಿಗೆ ಅರ್ಜಿ

 UPSC Civil Services Prelims Result 2021 Announced

ಈ ಪರೀಕ್ಷೆಗಳ ಮೂಲಕ ಕೇಂದ್ರ ಲೋಕಸೇವಾ ಆಯೋಗ 712 ವಿವಿಧ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಇವುಗಳಲ್ಲಿ 22 ಹುದ್ದೆಗಳು ಅಂಗವಿಕಲರಿಗೆ ಮೀಸಲಾಗಿವೆ.

ಪ್ರಸಕ್ತ ವರ್ಷದಲ್ಲೇ 1 ಲಕ್ಷಕ್ಕೂ ಅಧಿಕ ಫ್ರೆಶರ್ಸ್ ನೇಮಕಾತಿ! ಪ್ರಸಕ್ತ ವರ್ಷದಲ್ಲೇ 1 ಲಕ್ಷಕ್ಕೂ ಅಧಿಕ ಫ್ರೆಶರ್ಸ್ ನೇಮಕಾತಿ!

ಕೇಂದ್ರ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರೆಂದು ಘೋಷಣೆ ಮಾಡಿವರ ಮಾತ್ರ ಮುಖ್ಯ ಪರೀಕ್ಷೆಯನ್ನು ಬರೆಯಲು ಅರ್ಹರು. ಮುಖ್ಯ ಪರೀಕ್ಷೆ ಬರೆಯಬೇಕಾದರೆ ಅಭ್ಯರ್ಥಿಗಳು ಅರ್ಜಿ ನಂಬರ್ -1ರಲ್ಲಿ ವಿವರಗಳನ್ನು ಭರ್ತಿ ಮಾಡಬೇಕಿದೆ.

ಫಲಿತಾಂಶ ನೋಡುವುದು ಹೇಗೆ?

* ಮೊದಲು upsc.gov.in. ವೆಬ್‌ಸೈಟ್‌ಗೆ ಭೇಟಿ ನೀಡಿ

* ವೆಬ್‌ಸೈಟ್‌ ಓಪನ್ ಆದ ಬಳಿಕ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಕ್ಲಿಕ್ ಮಾಡಿ

* ಪಿಡಿಎಫ್ ಮಾದರಿಯ ಫೈಲ್ ತೆರೆದುಕೊಳ್ಳುತ್ತದೆ

* ಈ ಪುಟದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳ ರಿಜಿಸ್ಟರ್ ನಂಬರ್ ಇರುತ್ತದೆ

* ಇದರಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಚೆಕ್ ಮಾಡಿಕೊಳ್ಳಬಹುದು

1:15ರ ಅನುಪಾತ; ಒಟ್ಟು 712 ಹುದ್ದೆಗಳನ್ನು ಭರ್ತಿ ಮಾಡಲು ಯುಪಿಎಸ್‌ಸಿ ಪರೀಕ್ಷೆ ನಡೆಸುತ್ತಿದೆ. ಯುಪಿಎಸ್‌ಸಿ ಮುಖ್ಯ ಪರೀಕ್ಷೆಗೆ ಅಭ್ಯರ್ಥಿಗಳನ್ನು 1:15 ಅನುಪಾತದಲ್ಲಿ ಆಯ್ಕೆ ಮಾಡಲಾಗುತ್ತದೆ. ಮುಖ್ಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಮಾತ್ರ ಬಿಡುಗಡೆಯಾಗುತ್ತದೆ.

English summary
The Union Public Service Commission on Friday declared the result of the civil service prelims 2021 exam. Main exam will be held on 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X