ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ: ಅರ್ಹ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ನವದೆಹಲಿ, ಜೂನ್ 22: 2022ರ ನಾಗರಿಕ ಸೇವಾ (ಪ್ರಾಥಮಿಕ) ಪರೀಕ್ಷೆಯಲ್ಲಿ 13,000ಕ್ಕೂ ಹೆಚ್ಚು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಬುಧವಾರ ಫಲಿತಾಂಶ ಪ್ರಕಟಿಸಿದೆ.
ನಾಗರಿಕ ಸೇವೆಗಳ ಪರೀಕ್ಷೆಯನ್ನು ಆಯೋಗವು ವಾರ್ಷಿಕವಾಗಿ ಮೂರು ಹಂತಗಳಲ್ಲಿ ನಡೆಸುತ್ತದೆ. ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭಾರತೀಯ ಆಡಳಿತ ಸೇವೆ (IAS), ಭಾರತೀಯ ವಿದೇಶಾಂಗ ಸೇವೆ (IFS) ಮತ್ತು ಭಾರತೀಯ ಪೊಲೀಸ್ ಸೇವೆ (IPS) ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಜೂನ್ 5, 2022 ರಂದು ಪೂರ್ವಭಾವಿ ಪರೀಕ್ಷೆಯ ಆಯೋಜಿಸಲಾಗಿತ್ತು. ಸುಮಾರು 11.52 ಲಕ್ಷ ಜನರು ಪರೀಕ್ಷೆಗೆ ಬರೆದಿದ್ದರು ಮತ್ತು 13,090 ಅಭ್ಯರ್ಥಿಗಳು ಮುಖ್ಯ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯುಪಿಎಸ್‌ಸಿ (UPSC) ತನ್ನ ವೆಬ್‌ಸೈಟ್ www.upsc.gov.in ಪರೀಕ್ಷೆಯಲ್ಲಿ ಉತ್ತೀರ್ಣವಾಗಿರುವ ಅಭ್ಯರ್ಥಿಗಳ ರೋಲ್ ಸಂಖ್ಯೆಯನ್ನು ನಮೂದಿಸುವ ವಿವರವಾದ ಪಟ್ಟಿಯನ್ನು ಅಪ್‌ಲೋಡ್ ಮಾಡಿದೆ. ಆರಂಭದಲ್ಲಿ, 2022 ರ ನಾಗರಿಕ ಸೇವಾ ಪರೀಕ್ಷೆಯ ಮೂಲಕ ಒಟ್ಟು 861 ಹುದ್ದೆಗಳನ್ನು ಭರ್ತಿ ಮಾಡಲು ಕೋರಲಾಗಿತ್ತು, ಈಗ ಅದನ್ನು 1,022 ಕ್ಕೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಖ್ಯ ಪರೀಕ್ಷೆಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು
ಎಲ್ಲಾ ಯಶಸ್ವಿ ಅಭ್ಯರ್ಥಿಗಳು ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ 2022 ಗಾಗಿ ವಿವರವಾದ ಅರ್ಜಿ ನಮೂನೆ-I (DAF-I) ನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಕೇಳಲಾಗಿದೆ ಎಂದು ಯುಪಿಎಸ್‌ಸಿ (UPSC) ತಿಳಿಸಿದೆ.

DAF-I ಅನ್ನು ಭರ್ತಿ ಮಾಡಲು ಮತ್ತು ಅದರ ಸಲ್ಲಿಕೆಗೆ ದಿನಾಂಕಗಳು ಮತ್ತು ಪ್ರಮುಖ ಸೂಚನೆಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಸರಿಯಾದ ಸಮಯದಲ್ಲಿ ಪ್ರಕಟಿಸಲಾಗುವುದು ಎಂದು ಅದು ಹೇಳಿದೆ.
2022 ರ ನಾಗರಿಕ ಸೇವಾ ಪ್ರಾಥಮಿಕ ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಕೀ ಉತ್ತರಗಳನ್ನು ಆಯೋಗದ ವೆಬ್‌ಸೈಟ್‌ನಲ್ಲಿ 2022 ರ ನಾಗರಿಕ ಸೇವಾ ಪರೀಕ್ಷೆಯ ಸಂಪೂರ್ಣ ಪ್ರಕ್ರಿಯೆ ಮುಗಿದ ನಂತರ, ಅಂದರೆ ಅಂತಿಮ ಫಲಿತಾಂಶದ ಘೋಷಣೆಯ ನಂತರವೇ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಅಭ್ಯರ್ಥಿಗಳಿಗೆ ತಿಳಿಸಲಾಗಿದೆ.
ಆಯೋಗವು ನವದೆಹಲಿಯ ಷಹಜಹಾನ್ ರಸ್ತೆಯಲ್ಲಿರುವ ಧೋಲ್‌ಪುರ್ ಹೌಸ್‌ನಲ್ಲಿರುವ ಪರೀಕ್ಷಾ ಸಭಾಂಗಣದ ಕಟ್ಟಡದ ಬಳಿ ಸೌಲಭ್ಯ ಕೌಂಟರ್ ಹೊಂದಿದೆ. ಅಭ್ಯರ್ಥಿಗಳು ತಮ್ಮ ಪೂರ್ವಭಾವಿ ಪರೀಕ್ಷೆಯ ಫಲಿತಾಂಶದ ಕುರಿತು ಯಾವುದೇ ಮಾಹಿತಿ, ಸ್ಪಷ್ಟೀಕರಣವನ್ನು ಎಲ್ಲಾ ಕೆಲಸದ ದಿನಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ವೈಯಕ್ತಿಕವಾಗಿ ಅಥವಾ ದೂರವಾಣಿ ಸಂಖ್ಯೆ 011-23385271, 011-23098543 ಅಥವಾ 011-23381125 ಮೂಲಕ ಫೆಸಿಲಿಟೇಶನ್ ಕೌಂಟರ್‌ನಿಂದ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications