UPSC Result Announced: ಯುಪಿಎಸ್ ಫಲಿತಾಂಶ ಪ್ರಕಟ- ಟಾಪರ್ ಶಕ್ತಿ ದುಬೆ ಯಾರು?
ಕೇಂದ್ರ ಲೋಕ ಸೇವಾ ಆಯೋಗ (UPSC) ಇಂದು ನಾಗರಿಕ ಸೇವಾ ಪರೀಕ್ಷೆಯ (CSE) ಅಂತಿಮ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಯಲ್ಲಿ ಮಹಿಳೆಯರೇ ಮೇಲುಗೈ ಸಾಧಿಸಿದ್ದಾರೆ. ಪ್ರಯಾಗ್‌ರಾಜ್‌ನ ಶಕ್ತಿ ದುಬೆ, ಇಡೀ ದೇಶದಲ್ಲೇ ಪ್ರಥಮ ಸ್ಥಾನ ಪಡೆದು ಅಖಿಲ ಭಾರತ ಮಟ್ಟದಲ್ಲಿ 1ನೇ ರ‍್ಯಾಂಕ್ ಗಳಿಸಿ ಸಾಧನೆಯ ಛಲ ಹೊಂದಿದ ವಿದ್ಯಾರ್ಥಿಗಳಿ ಶಕ್ತಿ ತುಂಬಿದ್ದಾರೆ. ಹಾಗಾದರೆ ಶಕ್ತಿ ದುಬೆ ಯಾರು? ಎಲ್ಲಿಯವರು? ಇವರ ಶಿಕ್ಷಣವೇನು? ಎಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ....
ಕೇಂದ್ರ ಲೋಕ ಸೇವಾ ಆಯೋಗ (UPSC) ಇಂದು (ಏಪ್ರಿಲ್ 22) ನಾಗರಿಕ ಸೇವೆಗಳ ಪರೀಕ್ಷೆ 2024ರ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ಯುಪಿಎಸ್‌ಸಿ ಸಿಎಸ್‌ಇ 2024ರ ಟಾಪರ್ ಶಕ್ತಿ ದುಬೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದಾರೆ. ಇವರ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ.

ಶಕ್ತಿ ದುಬೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಿವಾಸಿ. ಇವರ ತಮ್ಮ ಶಾಲಾ ಶಿಕ್ಷಣವನ್ನು ಪ್ರಯಾಗರಾಜ್‌ನಲ್ಲಿ ಮುಗಿಸಿದರು. ನಂತರ ಅಲಹಾಬಾದ್ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. 2018 ರಲ್ಲಿ ಬಿಎಚ್‌ಯುನಿಂದ ಬಯೋಕೆಮಿಸ್ಟ್ರಿಯಲ್ಲಿ ಪಿಜಿ ಮಾಡಿದ ಶಕ್ತಿ ದುಬೆ 2018ರಿಂದ ಯುಪಿಎಸ್‌ಸಿಗೆ ತಯಾರಿ ನಡೆಸುತ್ತಿದ್ದರು. ಇದೀಗ ಅವರ ಕಠಿಣ ಶ್ರಮಕ್ಕೆ ಫಲ ಸಿಕ್ಕಿದೆ. ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿ ಶಕ್ತಿ ದುಬೆ ಎಲ್ಲರ ಮನೆ ಮಾತಾಗಿದ್ದಾರೆ.
ಚಾಹಲ್ ಅಕಾಡೆಮಿ ನಡೆಸಿದ ಮತ್ತು ಅದರ ಯೂಟ್ಯೂಬ್ ಚಾನೆಲ್‌ನಲ್ಲಿ ಆಯೋಜಿಸಲಾದ ಅಣಕು ಸಂದರ್ಶನದಲ್ಲಿ ಮಾತನಾಡಿದ ದುಬೆ, 'ನಾಗರಿಕ ಸೇವೆಗಳನ್ನು ಸೇರುವ ನಿರ್ಧಾರಕ್ಕೆ ತಮ್ಮ ಕುಟುಂಬದ ಹಿನ್ನೆಲೆ ಕಾರಣ' ಎಂದು ಹೇಳಿದರು. 'ನನ್ನ ತಂದೆ ಪೊಲೀಸ್ ಸೇವೆಯಲ್ಲಿದ್ದಾರೆ ಮತ್ತು ಅವರು ಕೆಲಸ ಮಾಡುವುದನ್ನು ನಾನು ನೋಡಿದ್ದೇನೆ. ಆರಂಭದಲ್ಲಿ ನಾನು ಅದನ್ನು ಕೇವಲ ಒಂದು ಕೆಲಸ ಎಂದು ಭಾವಿಸಿದ್ದೆ. ಆದರೆ ನಂತರ ನಾನು ಬಿಎಚ್‌ಯು ಹಾಸ್ಟೆಲ್‌ನಲ್ಲಿದ್ದಾಗ ಅದರ ಕಷ್ಟವನ್ನು ನಾನು ಅರಿತುಕೊಂಡೆ. ಒಂದು ಸಣ್ಣ ಶಕ್ತಿಯು ಯಾರಿಗಾದರೂ ಹೇಗೆ ಬದಲಾವಣೆಯನ್ನು ತರುತ್ತದೆ ಮತ್ತು ಸಾರ್ವಜನಿಕ ಸೇವೆಯು ಜನರಿಗೆ ಹೇಗೆ ಪ್ರಯೋಜನವನ್ನು ನೀಡುತ್ತದೆ ಎಂಬುದನ್ನು ನಾನು ಅರಿತುಕೊಂಡೆ. ಆದ್ದರಿಂದ ನಾನು ಸರ್ಕಾರಿ ಸೇವೆಯತ್ತ ಆಕರ್ಷಿತಳಾದೆ' ಎಂದಿದ್ದಾರೆ ಶಕ್ತಿ.
ತನ್ನ ವೃತ್ತಿಜೀವನದ ನಿರ್ಧಾರವನ್ನು ತಮ್ಮ ಪೋಷಕರು ಕೂಡ ಬೆಂಬಲಿಸಿದರು ಎಂದು ಶಕ್ತಿ ಹೇಳಿಕೊಂಡಿದ್ದಾರೆ. ನಾಗರಿಕ ಸೇವೆಗಳನ್ನು ಆಯ್ಕೆ ಮಾಡುವ ಮೊದಲು ಶಕ್ತಿ ಪೋಷಕರೊಂದಿಗೆ ಚರ್ಚಿಸಿದರು. ಪೋಷಕರು ಶಕ್ತಿ ಅಭ್ಯಾಸದ ಪ್ರಯಾಣದ ಉದ್ದಕ್ಕೂ ನಿಂತರು ಎಂದು ಶಕ್ತಿ ಹೇಳಿದ್ದಾರೆ.
ಪರೀಕ್ಷೆ ಮತ್ತು ಸಂದರ್ಶನ ಯಾವಾಗ ನಡೆಯಿತು?
ಮುಖ್ಯ ಪರೀಕ್ಷೆಯನ್ನು ಸೆಪ್ಟೆಂಬರ್ 2024ರಲ್ಲಿ ನಡೆಸಲಾಯಿತು. ಇದರ ನಂತರ ಸಂದರ್ಶನ ಸುತ್ತು ಜನವರಿ 7ರಿಂದ ಏಪ್ರಿಲ್ 17(2025) ರವರೆಗೆ ನಡೆಯಿತು. ಇದರಲ್ಲಿ 2845 ಅಭ್ಯರ್ಥಿಗಳು ಭಾಗವಹಿಸಿದ್ದರು. ಒಟ್ಟು 1009 ಅಭ್ಯರ್ಥಿಗಳು ಉತ್ತೀರ್ಣರಾದರು. ಈ ಬಾರಿ ಒಟ್ಟು 1009 ಅಭ್ಯರ್ಥಿಗಳನ್ನು ನೇಮಕಾತಿಗಾಗಿ ಆಯ್ಕೆ ಮಾಡಲಾಗಿದೆ. ಅಂದರೆ ಇವರನ್ನು ಭಾರತದ ಪ್ರತಿಷ್ಠಿತ ಸೇವೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅವುಗಳೆಂದರೆ: ಇದು ಐಎಎಸ್ (ಭಾರತೀಯ ಆಡಳಿತ ಸೇವೆ), ಐಎಫ್‌ಎಸ್ (ಭಾರತೀಯ ವಿದೇಶಾಂಗ ಸೇವೆ), ಐಪಿಎಸ್ (ಭಾರತೀಯ ಪೊಲೀಸ್ ಸೇವೆ) ಮತ್ತು ಇತರ ಕೇಂದ್ರ ಸೇವೆಗಳಿಗೆ (ಗುಂಪು ಎ ಮತ್ತು ಬಿ) ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ಸಂಖ್ಯೆ ವರ್ಗವಾರು ಹೀಗಿದೆ- ಸಾಮಾನ್ಯ ವರ್ಗ: 335, ಆರ್ಥಿಕವಾಗಿ ದುರ್ಬಲ ವರ್ಗ (ಇಡಬ್ಲ್ಯೂಎಸ್): 109, ಇತರೆ ಹಿಂದುಳಿದ ವರ್ಗಗಳು (ಒಬಿಸಿ): 318, ಪರಿಶಿಷ್ಟ ಜಾತಿ (ಎಸ್‌ಸಿ): 160, ಪರಿಶಿಷ್ಟ ಪಂಗಡ (ಎಸ್‌ಟಿ): 87 ಇದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು UPSC upsc.gov.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ರೋಲ್ ಸಂಖ್ಯೆ ಅಥವಾ ಹೆಸರಿನ ಮೂಲಕ ಪರಿಶೀಲಿಸಬಹುದು.
-
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ












Click it and Unblock the Notifications