ಯುಪಿಎಸ್‌ಸಿ; ಆಗಸ್ಟ್ 2ರಿಂದ ಸಂದರ್ಶನ ಪ್ರಕ್ರಿಯೆ ಆರಂಭ

ನವದೆಹಲಿ, ಜೂನ್ 10: ಕೇಂದ್ರ ಲೋಕಸೇವಾ ಆಯೋಗ UPSC -2020ನೇ ಸಾಲಿನ ಕೇಂದ್ರ ಆಡಳಿತಾತ್ಮಕ ಸೇವೆ ಹುದ್ದೆಗಳ ಸಂದರ್ಶನ ನಡೆಸಲು ನಿರ್ಧರಿಸಿದ್ದು, ವೇಳಾಪಟ್ಟಿ ಬಿಡುಗಡೆಗೊಳಿಸಿದೆ.

ಕೇಂದ್ರ ಆಡಳಿತಾತ್ಮಕ ಸೇವೆಯು ಐಎಎಸ್, ಐಪಿಎಸ್ ಹಾಗೂ ಐಎಫ್‌ಎಸ್ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಮೂರು ಹಂತಗಳಲ್ಲಿ ಪರೀಕ್ಷೆ ನಡೆಸುತ್ತದೆ. ಇದರಲ್ಲಿ ಪ್ರಾಥಮಿಕ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ಇರುತ್ತವೆ.

ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಕಾರಣ ಕಳೆದ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಸಂದರ್ಶನವನ್ನು ಮುಂದೂಡಲಾಗಿತ್ತು.

UPSC To Resume Interview Process From August 2

ಸದ್ಯಕ್ಕೆ ದೇಶದಲ್ಲಿ ಪರಿಸ್ಥಿತಿಯ ವಿಶ್ಲೇಷಣೆ ನಡೆಸಿದ್ದು, ಆಗಸ್ಟ್ 2ರಿಂದ ಸಂದರ್ಶನ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಯುಪಿಎಸ್‌ಸಿ ಪ್ರಕಟಣೆ ತಿಳಿಸಿದೆ.

ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳು ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಶೀಘ್ರದಲ್ಲೇ ಪಟ್ಟಿ ಪ್ರಕಟಗೊಳ್ಳುವುದು ಎಂದು ತಿಳಿಸಿದೆ. ಅಭ್ಯರ್ಥಿಗಳು ಸಂದರ್ಶನ ಕರೆ ಪತ್ರವನ್ನು ಯುಪಿಎಸ್‌ಸಿ ವೆಬ್‌ಸೈಟ್ www.upsc.gov.in ಮತ್ತು www.upsconline.in ಡೌನ್‌ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ: https://www.upsc.gov.in/

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+