ಉತ್ತರ ಪ್ರದೇಶದ ಕ್ರೀಡಾ ಪಟುಗಳಿಗೆ 500 ಸರ್ಕಾರಿ ಉದ್ಯೋಗ: ಸಿಎಂ ಯೋಗಿ ಆದಿತ್ಯನಾಥ್ ಮಹತ್ವದ ಘೋಷಣೆ

ಉತ್ತರಪ್ರದೇಶದಲ್ಲಿ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಿಎಂ ಯೋಗಿ ಆದಿತ್ಯನಾಥ್ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.

ಲಕ್ನೋ ಮಾರ್ಚ್ 22: ಉತ್ತರ ಪ್ರದೇಶದಲ್ಲಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಯೋಗಿ ಆದಿತ್ಯನಾಥ್ ಸರ್ಕಾರ ಈ ತಿಂಗಳಿಗೆ ಎರಡನೇ ವರ್ಷಗಳನ್ನು ಪೂರೈಸುತ್ತಿದೆ. ಈ ಕ್ರಮದಲ್ಲಿ ಸಿಎಂ ಯೋಗಿ ಕೂಡ ದೊಡ್ಡ ಮಟ್ಟದ ಸಂಭ್ರಮಾಚರಣೆ ಹಮ್ಮಿಕೊಂಡಿದ್ದಾರೆ. ಇದನ್ನು ಗುರುತಿಸಲು ಹಲವು ಮಹತ್ವದ ನಿರ್ಧಾರಗಳನ್ನೂ ತೆಗೆದುಕೊಳ್ಳುತ್ತಿದ್ದಾರೆ. ಈ ಬಾರಿ ಯೋಗಿ ಆದಿತ್ಯನಾಥ್ ಕ್ರೀಡಾ ಉದ್ಯಮಕ್ಕೆ ಹಲವು ಗುಡ್‌ ನ್ಯೂಸ್ ನೀಡಲು ನಿರ್ಧರಿಸಿದ್ದಾರೆ.

ಪ್ರತಿ ಪಂಚಾಯಿತಿಯಲ್ಲಿ ಕ್ರೀಡಾ ಮೈದಾನ, ಜಿಲ್ಲೆಗಳಲ್ಲಿ ಕ್ರೀಡಾಂಗಣ ಮತ್ತು ಬ್ಲಾಕ್‌ಗಳಲ್ಲಿ ಮಿನಿ ಕ್ರೀಡಾಂಗಣಗಳನ್ನು ಸ್ಥಾಪಿಸಲು ಈಗಾಗಲೇ ನಿರ್ಧರಿಸಿರುವ ಯೋಗಿ ಆದಿತ್ಯನಾಥ್, ಇದೀಗ ಕ್ರೀಡಾ ಪಟುಗಳಿಗೂ ವರದಾನ ಘೋಷಿಸಿದ್ದಾರೆ. ರಾಜ್ಯದ 500ಕ್ಕೂ ಹೆಚ್ಚು ಪ್ರತಿಭಾವಂತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡಲು ಸಿಎಂ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ.

Uttar Pradesh: 500 government jobs for sportspersons - Yogi Adityanaths important announcement

ಇವರಿಗೆ ಪೊಲೀಸ್ ಇಲಾಖೆ ಹಾಗೂ ಇತರೆ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಐದು ದಿನಗಳ ಕಾಲ ರಾಜ್ಯದಲ್ಲಿ ನಡೆಯುತ್ತಿರುವ 71ನೇ ಅಖಿಲ ಭಾರತ ಪೊಲೀಸ್ ಅಥ್ಲೆಟಿಕ್ಸ್ ಕ್ಲಸ್ಟರ್ ಚಾಂಪಿಯನ್‌ಶಿಪ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಈ ವಿಷಯ ಪ್ರಕಟಿಸಿದ್ದಾರೆ.

ಹತ್ತು ವರ್ಷಗಳ ನಂತರ ರಾಜ್ಯದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ನೇಪಾಳ ಮತ್ತು ಭೂತಾನ್‌ನೊಂದಿಗಿನ ಭಾರತದ ಗಡಿಯಲ್ಲಿ ದಕ್ಷತೆಯಿಂದ ಕೆಲಸ ಮಾಡುತ್ತಿರುವ ಸಶಸ್ತ್ರ ಸೀಮಾ ಬಾಲ್ ಕೂಡ ಈ ಕಾರ್ಯಕ್ರಮದ ಆಯೋಜಕರಲ್ಲಿ ಸೇರಿದ್ದಾರೆ ಎಂದು ಆದಿತ್ಯನಾಥ್ ಹೇಳಿದರು.

Uttar Pradesh: 500 government jobs for sportspersons - Yogi Adityanaths important announcement

32 ಜಿಲ್ಲೆಗಳ 1,300 ಕ್ರೀಡಾಪಟುಗಳ ಭಾಗವಹಿಸುವಿಕೆ ಈ ವರ್ಷದ ಚಾಂಪಿಯನ್‌ಶಿಪ್ ಅನ್ನು ಹೊಸ ಹಂತಕ್ಕೆ ಕೊಂಡೊಯ್ದಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕಳೆದ ಒಂಬತ್ತು ವರ್ಷಗಳಲ್ಲಿ ದೇಶದಲ್ಲಿ ಕ್ರೀಡಾ ಸಂಸ್ಕೃತಿ ಬೆಳೆದಿದ್ದು, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ ಕ್ರೀಡಾಪಟುಗಳ ಪಾಲ್ಗೊಳ್ಳುವಿಕೆ ಹೆಚ್ಚಿದ್ದು, ಪದಕ ಗೆಲ್ಲುತ್ತಿದ್ದಾರೆ ಎಂದರು.

ರಾಜ್ಯದ ಪ್ರತಿ ಸಂಸದೀಯ ಕ್ಷೇತ್ರದಲ್ಲಿ ಸುಮಾರು 2,000 ರಿಂದ 2,500 ಕ್ರೀಡಾಪಟುಗಳು ಸಂಸದ್ ಖೇಲ್ ಮಹೋತ್ಸವದೊಂದಿಗೆ ಕ್ರೀಡಾ ಚಟುವಟಿಕೆಗಳೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಯೋಗಿ ಬಹಿರಂಗಪಡಿಸಿದರು.

Uttar Pradesh: 500 government jobs for sportspersons - Yogi Adityanaths important announcement

'ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ ಕ್ರೀಡೆಗೆ ಉತ್ತೇಜನ ನೀಡಲು ಉತ್ತರ ಪ್ರದೇಶ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಸಾಕಷ್ಟು ಹಣವನ್ನು ಮೀಸಲಿಡಲಾಗಿದೆ. ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸಲು ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ' ಎಂದರು.

ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ

ಬಹುಮುಖ್ಯವಾಗಿ ಒಲಿಂಪಿಕ್ ಮತ್ತು ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೂ ನಗದು ಬಹುಮಾನದ ಪ್ರೋತ್ಸಾಹಧನ ಹೆಚ್ಚಿಸಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು. ಪ್ರತಿ ಸಂಸದೀಯ ಕ್ಷೇತ್ರದಿಂದ 2000 ರಿಂದ 2500 ಕ್ರೀಡಾಪಟುಗಳನ್ನು ಗುರುತಿಸಿ ತರಬೇತಿ ನೀಡಲಾಗುತ್ತಿದೆ. ಎಲ್ಲಾ 80 ಲೋಕಸಭಾ ಕ್ಷೇತ್ರಗಳನ್ನು ನೋಡಿದರೆ ಈ ಸಂಖ್ಯೆ 2 ಲಕ್ಷಕ್ಕೆ ತಲುಪಲಿದೆ ಎಂದರು.

ಒಲಂಪಿಕ್ಸ್ ನ ಸಿಂಗಲ್ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ವಿಜೇತರಿಗೆ 2 ಕೋಟಿ ರೂಪಾಯಿ, ಒಲಿಂಪಿಕ್ಸ್‌ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಯೋಗಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+