UP: ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದ ಯೋಗಿ ಸರ್ಕಾರ!
ಲಕ್ನೋ ನವೆಂಬರ್ 18: ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ತಕ್ಷಣವೇ ಜಾರಿಗೆ ಬರುವಂತೆ ಯುಪಿಯಲ್ಲಿ ನಿಷೇಧಿಸಲಾಗಿದೆ. ಹಲಾಲ್ ಪ್ರಮಾಣೀಕೃತ ಆಹಾರ, ಔಷಧ ಮತ್ತು ಸೌಂದರ್ಯವರ್ಧಕ ಉತ್ಪನ್ನಗಳನ್ನು ನಿಯಮಗಳಿಗೆ ವಿರುದ್ಧವಾಗಿ ಮಾಡಲಾಗುತ್ತಿದೆ. .
ಜೊತೆಗೆ ನಿಯಮಗಳಿಗೆ ವಿರುದ್ಧವಾಗಿ ಪ್ರಮಾಣ ಪತ್ರ ನೀಡುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ಮೇರೆಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಇದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದಾರೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಆಯುಕ್ತೆ ಅನಿತಾ ಸಿಂಗ್ ಅವರು ನಿಷೇಧದ ಕುರಿತು ಶನಿವಾರ ಅಧಿಸೂಚನೆ ಹೊರಡಿಸಿದ್ದಾರೆ. ಹೀಗಾಗಿ ಯಾವುದೇ ವ್ಯಕ್ತಿ ಹಲಾಲ್ ಪ್ರಮಾಣೀಕೃತ ಆಹಾರ ಪದಾರ್ಥಗಳು, ಔಷಧಿಗಳು ಮತ್ತು ಸೌಂದರ್ಯವರ್ಧಕಗಳಿಗೆ ಬಳಸುವ ಇತರ ವಸ್ತುಗಳನ್ನು ತಯಾರಿಸುವುದು, ಸಂಗ್ರಹಿಸುವುದು, ವಿತರಿಸುವುದು ಮತ್ತು ಖರೀದಿಸುವುದು ಹಾಗೂ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.
ಸಂಬಂಧಿತ ನಿಯಮಗಳಲ್ಲಿ ಸೂಚಿಸಲಾದ ನಿಬಂಧನೆಗಳ ಪ್ರಕಾರ ಔಷಧ ಮತ್ತು ಸೌಂದರ್ಯವರ್ಧಕಗಳಲ್ಲಿ ಬಳಸುವ ಇತರ ವಸ್ತುಗಳು ಮತ್ತು ಲೇಬಲ್‌ನಲ್ಲಿ ತಪ್ಪು ಮತ್ತು ತಪ್ಪುದಾರಿಗೆಳೆಯುವ ಸಂಗತಿಗಳನ್ನು ಮುದ್ರಿಸಿದರೆ, ಔಷಧಗಳು ಮತ್ತು ಸೌಂದರ್ಯವರ್ಧಕಗಳ ಕಾಯಿದೆ, 1940ರ ಸೆಕ್ಷನ್ 17 ಮತ್ತು ಸೆಕ್ಷನ್ 17C ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. ಹಲಾಲ್ ಪ್ರಮಾಣೀಕರಣಕ್ಕೆ ಸಂಬಂಧಿಸಿದ ಯಾವುದೇ ಸಂಗತಿಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಈ ವಸ್ತುಗಳ ಮೇಲೆ ನಮೂದಿಸಿದರೆ, ಅದು ಸದರಿ ಕಾಯಿದೆಯ ಅಡಿಯಲ್ಲಿ ಸುಳ್ಳುಯಾಗುತ್ತದೆ.
ಸೆಕ್ಷನ್ 27 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ
ಈ ಕಾಯಿದೆಯ ಸೆಕ್ಷನ್ 18 ರ ಅಡಿಯಲ್ಲಿ ನಕಲಿ ಔಷಧಗಳು ಮತ್ತು ಸೌಂದರ್ಯವರ್ಧಕಗಳಲ್ಲಿ ಬಳಸುವ ಇತರ ವಸ್ತುಗಳನ್ನು ತಯಾರಿಸುವುದು, ಸಂಗ್ರಹಿಸುವುದು, ವಿತರಿಸುವುದು ಮತ್ತು ಖರೀದಿಸುವುದು ಮತ್ತು ಮಾರಾಟ ಮಾಡುವುದು ಹಾಗೂ ಸೆಕ್ಷನ್ 27 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಹೀಗಾದರೆ ಅದರ ತಯಾರಿಕೆ ಮತ್ತು ಮಾರಾಟ ಇತ್ಯಾದಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೆ ದಂಡ
ನಕಲಿ ವಸ್ತುಗಳನ್ನು ಮಾರಾಟ ಮಾಡುವ ಸಂಸ್ಥೆಯ ಪರವಾನಗಿ ರದ್ದುಪಡಿಸುವುದು ಮತ್ತು ನಕಲಿ ವಸ್ತುಗಳನ್ನು ಮಾರಾಟ ಮಾಡಿದರೆ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೆ ದಂಡ ವಿಧಿಸಲು ಅವಕಾಶವಿದೆ. ಇದರ ವಿರುದ್ಧ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಶೀಘ್ರವೇ ಜಿಲ್ಲೆಗಳಲ್ಲಿ ದಾಳಿ ಅಭಿಯಾನ ಆರಂಭಿಸಲಿದೆ.
ರಫ್ತಿನ ಮೇಲೆ ನಿಷೇಧ ಹೇರಿಲ್ಲ
ಆದರೆ ಹಲಾಲ್ ಪ್ರಮಾಣೀಕೃತ ಆಹಾರ ಪದಾರ್ಥಗಳು, ಔಷಧಗಳು, ಇತರ ವೈದ್ಯಕೀಯ ವಸ್ತುಗಳು ಮತ್ತು ಸೌಂದರ್ಯವರ್ಧಕಗಳ ರಫ್ತಿಗೆ ಯಾವುದೇ ನಿರ್ಬಂಧವಿಲ್ಲ. ರಫ್ತುದಾರರು ಅದನ್ನು ಸುಲಭವಾಗಿ ರಫ್ತು ಮಾಡಬಹುದು.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications