ಉತ್ತರ ಪ್ರದೇಶ ಮುಖ್ಯಮಂತ್ರಿ ಪಟ್ಟಕ್ಕೆ ಅಖಿಲೇಶ್ ರಾಜಿನಾಮೆ
ಲಖನೌ, ಮಾರ್ಚ್ 11: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಹೀನಾಯ ಸೋಲು ಕಂಡಿದ್ದಕ್ಕಾಗಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಶನಿವಾರ ನಡೆದ ಚುನಾವಣಾ ಮತ ಎಣಿಕೆಯಲ್ಲಿ ಬಿಜೆಪಿ ಭರ್ಜರಿ ಜಯದತ್ತ ದಾಪುಗಾಲು ಹಾಕಿದ್ದಲ್ಲದೆ, ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಸಮಾಜವಾದಿ ಪಕ್ಷವನ್ನು ಧೂಳಿಪಟ ಮಾಡಿತು.

ಒಟ್ಟು 403 ಕ್ಷೇತ್ರಗಳುಳ್ಳ ಉತ್ತರ ಪ್ರದೇಶದಲ್ಲಿ ಬೆಳಗ್ಗೆ 11 ಗಂಟೆಯ ಹೊತ್ತಿಗೆ 303 ಕ್ಷೇತ್ರಗಲ್ಲಿ ಮುನ್ನಡೆ ಸಾಧಿಸಿದ್ದ ಬಿಜೆಪಿ, ಅಭೂತಪೂರ್ವ ಗೆಲವಿನೊಂದಿಗೆ ಉತ್ತರ ಪ್ರದೇಶದಲ್ಲಿ ಸರ್ಕಾರ ರಚಿಸುವತ್ತ ಬಿಜೆಪಿ ದಾಪುಗಾಲಿಡುವುದು ಸಾಬೀತಾಗಿತ್ತು.
ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಯಾಗಿದ್ದ ಅಖಿಲೇಶ್ ಯಾದವ್ ಅವರು, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಶನಿವಾರ ರಾಜಿನಾಮೆ ಸಲ್ಲಿಸಿದ್ದಾರೆ.












Click it and Unblock the Notifications