ಯುಪಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ರಕ್ತಸ್ರಾವದಿಂದ ನರಳುತ್ತಿದ್ದ ಬಾಲಕಿ ಪತ್ತೆ

ಲಕ್ನೋ, ಅಕ್ಟೋಬರ್‌ 25: ಉತ್ತರ ಪ್ರದೇಶದ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ರಕ್ತಸ್ರಾವದಿಂದ ನರಳುತ್ತಿದ್ದ ಬಾಲಕಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ಪ್ರದೇಶದ ತಿರ್ವಾ ಪ್ರದೇಶದ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ 12 ವರ್ಷದ ಬಾಲಕಿ ರಕ್ತಸ್ರಾವ ಹಾಗೂ ತೀವ್ರ ನೋವಿನಿಂದ ಬಳತ್ತಿರುವುದು ಕಂಡುಬಂದಿದೆ ಎಂಬ ಮಾಹಿತಿಯನ್ನು ಪೊಲೀಸರು ಮಂಗಳವಾರ ನೀಡಿದ್ದಾರೆ.

ಗಾಯಗೊಂಡು ನರಳುತ್ತಿದ್ದ ಬಿದ್ದಿದ್ದ ಬಾಲಕಿಯ ವಿಡಿಯೋವನ್ನು ಜನರು ರೆಕಾರ್ಡ್‌ ಮಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

Uttar Pradesh Girl found injured at govt guest house bystanders record videos

ಪೊಲೀಸರು ಆ ಬಾಲಕಿಯನ್ನು ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ.

ಬಾಲಕಿಯು ಭಾನುವಾರ ಮನೆಯಿಂದ ಹೊರ ಹೋಗಿದ್ದಳು. ಆದರೆ, ಆಕೆ ಮನೆಗೆ ಹಿಂತಿರುಗಿರಲಿಲ್ಲ. ಆ ನಂತರ ಕುಟುಂಬ ಸದಸ್ಯರು ಆಕೆಯನ್ನು ಹುಡುಕಲು ಆರಂಭಿಸಿದ್ದರು ಎಂದು ಪೊಲೀಸ್ ಅಧೀಕ್ಷಕ ಕುನ್ವರ್ ಅನುಪಮ್ ಸಿಂಗ್ ತಿಳಿಸಿದ್ದಾರೆ.

ಬಾಲಕಿಯು ರಕ್ತಸ್ರಾವದಿಂದ ಬಳಲುತ್ತ ಬಿದ್ದಿದ್ದಳು. ಆಕೆ ನೋವಿನಿಂದ ಒದ್ದಾಡುತ್ತಿದ್ದಳು. ಇದನ್ನು ನೋಡಿದ ಅತಿಥಿ ಗೃಹದ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿ ಮನೋಜ್ ಪಾಂಡೆ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆ ನಂತರ ಬಾಲಕಿಯನ್ನು ಕಾನ್ಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್‌ ಅಧಿಕಾರಗಳು ಮಾಹಿತಿ ನೀಡಿದ್ದಾರೆ.

ಅತಿಥಿ ಗೃಹದ ಸಿಸಿಟಿವಿ ಕ್ಯಾಮೆರಾದಲ್ಲಿ ಬಾಲಕಿಯು ಯುವಕರೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ

ಯುವಕನ ಗುರುತು ಪತ್ತೆ ಮಾಡಲಾಗುತ್ತಿದೆ. ಆಸ್ಪತ್ರೆಯ ವರದಿಗಳ ನಂತರವೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ದೃಢಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+