ಮುಲಾಯಂ ಸಿಂಗ್ ಯಾದವ್ ವಿಧಿವಶ; ಉತ್ತರ ಪ್ರದೇಶದಲ್ಲಿ 3 ದಿನ ಶೋಕಾಚರಣೆ

ಲಕ್ನೋ, ಅಕ್ಟೋಬರ್ 10: ಸಮಾಜವಾದಿ ಪಕ್ಷದ ಸರ್ವೋಚ್ಛ ನಾಯಕ ಮುಲಾಯಂ ಸಿಂಗ್ ಯಾದವ್ ವಿಧಿವಶರಾದ ಹಿನ್ನೆಲೆ ಉತ್ತರ ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಲಾಗಿದೆ.

ರಾಜ್ಯ ಕಂಡ ಶ್ರೇಷ್ಠ ನಾಯಕನ ಅಗಲಿಕೆ ಹಿನ್ನೆಲೆ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದ್ದು, ಮುಲಾಯಂ ಸಿಂಗ್ ಯಾದವ್ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

Uttar Pradesh govt announces three-day state mourning on the demise of Mulayam Singh Yadav

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಯಾದವ್(82) ಸೋಮವಾರ ಬೆಳಗ್ಗೆ ಉತ್ತರ ಪ್ರದೇಶ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರು ಪತ್ನಿ ಸಾಧನಾ ಯಾದವ್ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರಿಗೆ ರಾಜ್ಯ ಮತ್ತು ರಾಷ್ಟ್ರದ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ:

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.

ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ವಿಧಾನಸಭಾ ಸ್ಪೀಕರ್ ಸತೀಶ್ ಮಹಾನಾ, ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮತ್ತು ಬಿಜೆಪಿಯ ಹಿರಿಯ ನಾಯಕರು ಯಾದವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

"ಎಸ್‌ಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅವರ ನಿಧನದ ಸುದ್ದಿ ದುಃಖ ತಂದಿದೆ. ನಾಯಕನ ಕುಟುಂಬ ಸದಸ್ಯರಿಗೆ ಮತ್ತು ಹಿತೈಷಿಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ದೇವರು ಅವರಿಗೆ ದುಃಖವನ್ನು ಎದುರಿಸುವ ಶಕ್ತಿಯನ್ನು ನೀಡಲಿ" ಎಂದು ಮಾಯಾವತಿ ಟ್ವೀಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+