ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ: ಅಪ್ರಾಪ್ತೆ ಮೇಲೆ 2 ವರ್ಷ ನಿರಂತರ ಅತ್ಯಾಚಾರ

|
Google Oneindia Kannada News

ಉನ್ನಾವೋ, ಮೇ 02: ಈಗಾಗಲೇ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದಿಂದಾಗಿ ಸುದ್ದಿಯಲ್ಲಿರುವ ಉತ್ತರ ಪ್ರದೇಶದ ಉನ್ನಾವೋ ನಲ್ಲಿ ಅಂಥದೇ ಮತ್ತೊಂದು ಘಟನೆ ನಡೆದಿದೆ.

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಎರಡು ವರ್ಷಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದಲ್ಲದೆ, ಈ ಕುಕೃತ್ಯವನ್ನು ವಿಡಿಯೋ ಮಾಡಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ವಿಷಯವೂ ಬಯಲಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಬಿಚ್ಚಿಟ್ಟ ಆ ಕರಾಳ ದಿನದ ನೆನಪು... ಉನ್ನಾವೋ ಅತ್ಯಾಚಾರ ಸಂತ್ರಸ್ಥೆ ಬಿಚ್ಚಿಟ್ಟ ಆ ಕರಾಳ ದಿನದ ನೆನಪು...

ಕಳೆದ ವರ್ಷ ಜೂನ್ ನಲ್ಲಿ ಉನ್ನಾವೋನಿಲ್ಲಿ 16 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನ್ಗಾರ್ ಈಗಾಗಲೇ ಸಿಬಿಐ ವಶದಲ್ಲಿದ್ದಾರೆ. ಈ ಘಟನೆ ದೇಶದಾದ್ಯಂತ ಸದ್ದು ಮಾಡಿದ ಕಾರಣ, ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ತಕ್ಷಣವೇ ಪ್ರಕರಣವನ್ನು ಸಿಬಿಐ ಗೆ ವಹಿಸಿತ್ತು.

Uttar Pradesh: Minor girl raped for 2 years

ಕಾಶ್ಮೀರದ ಕತುವಾ ಪ್ರದೇಶದಲ್ಲೂ ಎಂಟು ವರ್ಷದ ಅಪ್ರಾಪ್ತೆಯ ಮೇಲೆ ಹಲವು ದಿನಗಳ ಕಾಲ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವೂ ದೇಶದಾದ್ಯಂತ ತಲ್ಲಣ ಎಬ್ಬಿಸಿತ್ತು.

12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ನೀಡುವ ನಿರ್ಧಾರವನ್ನು ಪ್ರಕಟಿಸಿರುವ ಕೇಂದ್ರ ಸರ್ಕಾರ ಈಗಾಗಲೇ ಪೋಕ್ಸೋ( Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ತಂದಿರುವುದನ್ನು ಇಲ್ಲಿ ಸ್ಮರಿಸಬಹುದು.

English summary
A Dalit woman in Uttar Pradesh's Unnao has filed a complaint stating that her minor daughter was allegedly gang-raped two years back and that the incident was video-graphed and perpetrators have been blackmailing and sexually assaulting the girl since then.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X