ರಸ್ತೆಯಲ್ಲಿ ನಮಾಜ್: ಉತ್ತರ ಪ್ರದೇಶದಲ್ಲಿ 2,000 ಜನರ ವಿರುದ್ಧ ಪ್ರಕರಣ ದಾಖಲು
ಲಕ್ನೋ, ಏಪ್ರಿಲ್. 28 : ಕಳೆದ ವಾರ ಈದ್ ಸಂದರ್ಭದಲ್ಲಿ ಅನುಮತಿಯಿಲ್ಲದೆ ಕಾನ್ಪುರದ ಈದ್ಗಾದ ಹೊರಗೆ ರಸ್ತೆಯೊಂದರಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರು 1,700 ರಿಂದ 2,000 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಏಪ್ರಿಲ್ 26 ರ ಬುಧವಾರ ಬಜಾರಿಯಾ, ಬಾಬು ಪೂರ್ವಾ ಮತ್ತು ಜಜ್ಮೌ ಎಂಬ ಮೂರು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕವಾಗಿ ಸಲ್ಲಿಸಿದ ದೂರಿನ ಮೇರೆಗೆ ಪೊಲೀಸರು ಮೂರು ಪ್ರಥಮ ಮಾಹಿತಿ ವರದಿಗಳ (ಎಫ್‌ಐಆರ್)ಗಳನ್ನು ದಾಖಲಿಸಿದ್ದಾರೆ. ಆದರೆ, ಪ್ರಕರಣ ಸಂಬಂಧ ಯಾರ ಬಂಧನವೂ ಆಗಿಲ್ಲ.

ಪ್ರಾರ್ಥನೆ ಮಾಡುತ್ತಿರುವವ ವಿಡಿಯೋವನ್ನು ಪೊಲೀಸರು ಚಿತ್ರೀಕರಿಸಿದ್ದುಮ ಅದರ ಮಾಹಿತಿ ಆಧಾರದಲ್ಲಿ ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ನಮಾಜ್ ಮಾಡುತ್ತಿದ್ದವರ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 186 (ಕರ್ತವ್ಯವನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು), 188 (ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅವಿಧೇಯತೆ ತೋರಿವುದು), 283 (ಸಾರ್ವಜನಿಕರಿಗೆ ಅಪಾಯ ಉಂಟುಮಾಡುವುದು), 341 ಮತ್ತು 353 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯ ಮೊಹಮ್ಮದ್ ಸುಲೇಮಾನ್ ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮದ ಆಧಾರದ ಮೇಲೆ ವ್ಯಕ್ತಿಗಳನ್ನು ಗುರಿಯಾಗಿಸಲಾಗುತ್ತಿದೆ. ಅನೇಕ ಜನರು ಈದ್ಗಾದ ಹೊರಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂಬ ಪೊಲೀಸರ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಆವರಣದಲ್ಲಿ ಸ್ಥಳಾವಕಾಶ ಇಲ್ಲದ ಕಾರಣ ಕೆಲವರು ಮಾತ್ರ ಹೊರಗಡೆಯೇ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಜಾಜ್ಮೌದಲ್ಲಿ 200 ಮಂದಿಯ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಅದೇ ಪೊಲೀಸ್ ಠಾಣೆಯಲ್ಲಿ "ಸುಮಾರು 300" ವಿರುದ್ಧ ಎಫ್‌ಐಆರ್ ಎಂದು ಪಿಟಿಐ ವರದಿ ಮಾಡಿದೆ. ಬಾಬುಪುರ ಪೊಲೀಸ್ ಠಾಣೆಯಲ್ಲಿ, "50 ಕ್ಕೂ ಹೆಚ್ಚು ಜನರ ಮೇಲೆ ಆರೋಪ ಹೊರಿಸಲಾಗಿದೆ" ಎಂದು ಪಿಟಿಐ ಹೇಳಿದೆ. ಟೈಮ್ಸ್ ಆಫ್ ಇಂಡಿಯಾ "40 ರಿಂದ 50" ಎಂದು ವರದಿ ಮಾಡಿದೆ.
ಬಜಾರಿಯಾ ಪೊಲೀಸ್ ಠಾಣೆಯಲ್ಲಿ, ಈದ್ಗಾ ನಿರ್ವಹಣಾ ಸಮಿತಿಯ ಕೆಲವು ಸದಸ್ಯರು ಸೇರಿದಂತೆ 1,000 ರಿಂದ 1,500 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇಲ್ಲಿ, ಹಿರಿಯ ಸಬ್ ಇನ್ಸ್‌ಪೆಕ್ಟರ್ (ಎಸ್‌ಎಸ್‌ಐ) ಓಂವೀರ್ ಸಿಂಗ್ ಅವರು ದೂರು ದಾಖಲಿಸಿದ್ದಾರೆ.












Click it and Unblock the Notifications