ರೈಲಿಗೆ ಶಾಲಾ ವಾಹನ ಡಿಕ್ಕಿ, ಐದು ಮಕ್ಕಳು ಸಾವು

ಮಾವು(ಉ.ಪ್ರ), ಡಿ.4: ಚಲಿಸುತ್ತಿದ್ದ ರೈಲಿಗೆ ಶಾಲಾ ಮಕ್ಕಳ ಬಸ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಶಾಲಾ ಮಕ್ಕಳು ಅಸುನೀಗಿದ ದಾರುಣ ಘಟನೆ ಗುರುವಾರ ಬೆಳಗ್ಗೆ ಸಂಭವಿಸಿದೆ.

ಉತ್ತರಪ್ರದೇಶದ ಮಾವು ಜಿಲ್ಲೆ ಬಳಿ ಇರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಈ ದುರ್ಘಟನೆ ನಡೆದಿದೆ. ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಬಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ.

UP: 5 dead, 25 injured after school bus collides with a train in Mau

ಅಪಘಾತದಲ್ಲಿ ಐವರು ಶಾಲಾ ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.

ಅಜಂಗಢ ಹಾಗೂ ವಾರಣಾಸಿ ಪ್ಯಾಸೇಂಜರ್ ರೈಲು ವಾರಣಾಸಿಯಿಂದ ಅಜಂಗಢಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಶಾಲಾ ಬಸ್ ನಲ್ಲಿ ಒಟ್ಟು 24 ವಿದ್ಯಾರ್ಥಿಗಳಿದ್ದರು. ಈ ಪೈಕಿ 5 ಮಂದಿ ಸಾವನ್ನಪ್ಪಿದ್ದರೆ 19 ಮಂದಿಗೆ ಗಾಯಗಳಾಗಿವೆ. ಲೆವೆಲ್ ಕ್ರಾಸಿಂಗ್ ನಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ, ರೈಲು ಚಾಲಕನದ್ದೇ ತಪ್ಪು ಎಂದು ಹೇಳಿ ಸ್ಥಳೀಯರು ರೈಲಿನ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಸ್ಥಳದಲ್ಲೇ ಆಗಮಿಸಿರುವ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ತನಿಖೆ ನಡೆಸುತ್ತಿದ್ದಾರೆ.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+