ಉತ್ತರ ಪ್ರದೇಶದಲ್ಲಿ ವಿದ್ಯಾರ್ಥಿಗಳ ಮೇಲೆ ಹರಿದ ಬಸ್: 6 ಮಂದಿ ಸಾವು

ಕನೌಜ್, ಜೂನ್ 11: ಉತ್ತರ ಪ್ರದೇಶದ ‌ಆಗ್ರಾ ಲಕ್ನೋ ಹೆದ್ದಾರಿಯಲ್ಲಿ ಇಂದು(ಜೂನ್ 11) ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ವಿದ್ಯಾರ್ಥಿಗಳು ಮೃತರಾಗಿದ್ದಾರೆ.

ಇಲ್ಲಿನ ಕನೌಜ್ ಬಳಿಯ ಆಗ್ರಾ-ಲಕ್ನೋ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳಿದ್ದ ಬಸ್ ಇಂಧನ ತುಂಬಿಸಿಕೊಳ್ಳುವುದಕ್ಕಾಗಿ ನಿಂತಿತ್ತು. ಈ ಸಂದರ್ಭದಲ್ಲಿ ಬಸ್ಸಿನಿಂದ ಕೆಳಗಿಳಿದು ನಿಂತಿದ್ದ 9 ವಿದ್ಯಾರ್ಥಿಗಳ ಮೇಲೆ ವೇಗವಾಗಿ ಬರುತ್ತಿದ್ದ ಬಸ್ಸೊಂದು ಹರಿದ ಪರಿಣಾಮ 6 ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, 3 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

Uttar Pradesh: Six students killed after being run over by bus

ಗಾಯಗೊಂದಿರುವ ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ. ಘಟನೆಯ ನಂತರ ವಿದ್ಯಾರ್ಥಿಗಳ ಮೇಲೆ ಬಸ್ಸು ಹರಿಸಿದ ಚಾಲಕ ನಾಪತ್ತೆಯಾಗಿದ್ದಾನೆಂದು ವರದಿಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+