UP: ಯುಪಿ ಭೋಲೆ ಬಾಬಾರ ಸತ್ಸಂಗದಲ್ಲಿ ಕಾಲ್ತುಳಿತ: 107 ಮಂದಿ ಸಾವು!
ಲಕ್ನೋ ಜುಲೈ 2: ಭೋಲೆ ಬಾಬಾರ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿದ್ದು 107 ಮಂದಿ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದೆ.
ಹತ್ರಾಸ್‌ನ ಸಿಕಂದರಾವ್ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ರೈ ಗ್ರಾಮದಲ್ಲಿ ಆಯೋಜಿಸಿದ್ದ ಭೋಲೆ ಬಾಬಾರವರ ಸತ್ಸಂಗವನ್ನು ಆಯೋಜಿಸಲಾಗಿತ್ತು. ಈ ವೇಳೆ ನಿರೀಕ್ಷೆ ಮೀರಿದ ಜನ ಭಾಗವಹಿಸಿದ್ದರು. ಗುಂಪಿನಲ್ಲಿ ಏಕಾಏಕಿ ಜನ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ಈ ವೇಳೆ ಕೆಲವರು ಗಾಬರಿಗೊಂಡು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದರಿಂದ ಕಾಲ್ತುಳಿತಕ್ಕೆ 107 ಮಂದಿ ಬಲಿಯಾಗಿದ್ದಾರೆ.

ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಅಲ್ಲದೆ ಈ ದುರ್ಘಟನೆಯಲ್ಲಿ 100ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಇವರಲ್ಲೂ ಮಹಿಳೆಯರು ಮತ್ತು ಮಕ್ಕಳು ಸಂಖ್ಯೆ ಹೆಚ್ಚಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ನಂತರ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
VIDEO | Injured persons brought to a hospital for treatment in UP's Hathras following a stampede-like situation at a 'satsang' in the city.
— Press Trust of India (@PTI_News) July 2, 2024
(Disclaimer: Video contains disturbing visuals. Viewer discretion is advised.)
(Full video available on PTI Videos -… pic.twitter.com/b6GEbaC3Ze
ವರದಿಯ ಪ್ರಕಾರ ಕಾಲ್ತುಳಿತಕ್ಕೆ ಕಾರಣ ಇನ್ನೂ ಬಹಿರಂಗವಾಗಿಲ್ಲ. ಆದರೆ ಭದ್ರತಾ ಸಿಬ್ಬಂದಿ ಭಕ್ತರನ್ನು ಒಂದೇ ಕಡೆ ನಿಲ್ಲಿಸಿದ್ದರಿಂದ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಇದರಿಂದ ಹಲವರು ಸ್ಥಳದಲ್ಲೇ ಪ್ರಜ್ಞಾಹೀನರಾಗಿದ್ದಾರೆ. ಪ್ರಸ್ತುತ ಈ ಘಟನೆಯನ್ನು ಆಡಳಿತವು ತನಿಖೆ ನಡೆಸುತ್ತಿದೆ. ಡಿಎಂ ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಾರೆ.
ಆಮ್ಲಜನಕ ಕಾರಣದಿಂದಾಗಿ ದುರ್ಘಟನೆ
ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ನೆರೆದಿದ್ದರು. ಕಾರ್ಯಕ್ರಮದ ಆಯೋಜಕರು ಕಾರ್ಯಕ್ರಮಕ್ಕೆ ಅನುಮತಿ ಕೋರಿದ್ದರು. ಆದರೆ ಭಕ್ತರ ಸಂಖ್ಯೆ ಕುರಿತು ಆಡಳಿತ ಮಂಡಳಿಗೆ ನೀಡಿದ ಮಾಹಿತಿಗಿಂತ ಹೆಚ್ಚಿನ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಆಡಳಿತದ ನಿರ್ಲಕ್ಷ್ಯ
ಸತ್ಸಂಗದಲ್ಲಿ ಭಾಗವಹಿಸಿದ ಇಷ್ಟೊಂದು ಸಂಖ್ಯೆ ನೋಡಿದರೆ ಆಡಳಿತದ ನಿರ್ಲಕ್ಷ್ಯ ಬೆಳಕಿಗೆ ಬರುತ್ತಿದೆ. ಆಡಳಿತವು ಈ ಕಾರ್ಯಕ್ರಮಕ್ಕೆ ಸರಿಯಾಗಿ ತಯಾರಿ ನಡೆಸಿರಲಿಲ್ಲ. ಅನಿಯಂತ್ರಿತ ಜನಸಂದಣಿ ಮತ್ತು ಆಮ್ಲಜನಕ ಕೊರತೆ ಕಾರಣ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.
#WATCH | Uttar Pradesh: Etah SSP Rajesh Kumar Singh says, "... A religious event was going on in Mughalgarhi village of Hathras district when the stampede occurred. So far 27 dead bodies have been received in the Etah Hospital, including 23 women, 3 children, and 1 man. The… https://t.co/Ih37mRehAY pic.twitter.com/xJa3AN4Yo4
— ANI (@ANI) July 2, 2024
ಪ್ರತ್ಯಕ್ಷದರ್ಶಿಗಳು ವಿವರಿಸಿದ್ದು ಹೀಗೆ...
ಪ್ರತ್ಯಕ್ಷದರ್ಶಿ ಮಹಿಳೆಯೊಬ್ಬರು ಘಟನೆಯನ್ನು ಸಂಪೂರ್ಣವಾಗಿ ವಿವರಿಸಿದ್ದಾರೆ. ಸತ್ಸಂಗ ಮುಗಿದ ಮೇಲೆ ಹೊರಡಲು ಶುರು ಮಾಡಿದೆವು. ಅಲ್ಲಿ ಭಾರೀ ಜನಸಂದಣಿ ಇತ್ತು. ಆಗ ಇದ್ದಕ್ಕಿದ್ದಂತೆ ಗುಂಪಿನಲ್ಲಿ ಕಾಲ್ತುಳಿತ ಉಂಟಾಯಿತು. ಅನೇಕ ಜನರು ಪ್ರಜ್ಞೆತಪ್ಪಿ ಬಿದ್ದರು. ಅನೇಕ ಜನರು ಸ್ಥಳದಲ್ಲಿ ಪ್ರಾಣ ಕಳೆದುಕೊಂಡರು. ನನ್ನ ಜೊತೆ ಬಂದಿದ್ದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ನನಗೂ ನಾನು ಬದುಕುವುದು ಖಚಿತವಿರಲಿಲ್ಲ. ಹೇಗೋ ತಪ್ಪಿಸಿಕೊಂಡು ಹೊರಬಂದೆ ಎಂದು ಅವರು ನೋವಿನಿಂದ ಹೇಳಿಕೊಂಡಿದ್ದಾರೆ.
ಯುಪಿ ಸಿಎಂ ಸಂತಾಪ
"ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಹತ್ರಾಸ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವಂತೆ ಅವರು ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ" ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರ ಕಚೇರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications