Breaking: ಹಿಂದಿ ಭಾಷೆಯಲ್ಲಿ ವೈದ್ಯಕೀಯ ಶಿಕ್ಷಣ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಘೋಷಣೆ

ಲಕ್ನೋ, ಅಕ್ಟೋಬರ್ 20: ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಮುಂದಿನ ವರ್ಷದಿಂದ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಹಿಂದಿ ಭಾಷೆಯಲ್ಲಿ ಆರಂಭಿಸಲಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, 'ಯುಪಿಯಲ್ಲಿ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕೋರ್ಸ್‌ಗಳ ಪಠ್ಯಪುಸ್ತಕಗಳನ್ನು ಹಿಂದಿಯಲ್ಲಿ ಅನುವಾದಿಸಲಾಗಿದೆ. ವಿವಿಧ ವಿಷಯಗಳಿಗೆ ಸಂಬಂಧಿಸಿದ ಎಲ್ಲಾ ಪುಸ್ತಕಗಳು ಮುಂದಿನ ವರ್ಷದಿಂದ ಲಭ್ಯವಿರುತ್ತವೆ' ಎಂದು ತಿಳಿಸಿದ್ದಾರೆ.

ಕಳೆದ ತಿಂಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಹಿಂದಿಯಲ್ಲಿ ಭಾರತದ ಮೊದಲ ಎಂಬಿಬಿಎಸ್‌ ಪಠ್ಯಕ್ರಮವನ್ನು ಬಿಡುಗಡೆಗೊಳಿಸಿದ್ದರು.

Uttar Pradesh To Begin Teaching Medical Engineering Courses in Hindi Yogi Adityanath

ಈ ವೇಳೆ ಮಾತನಾಡಿದ್ದ ಚೌಹಾಣ್‌, ಶಿಕ್ಷಣವನ್ನು ಇಂಗ್ಲಿಷ್‌ನಿಂದ ಮುಕ್ತಗೊಳಿಸುವುದಾಗಿ ಹೇಳಿದ್ದರು. ಉನ್ನತ ಶಿಕ್ಷಣದಲ್ಲಿ ಹಿಂದಿ ಭಾಷೆಗೆ ಉತ್ತೇಜನ ನೀಡಲು ಈ ಕ್ರಮವನ್ನು ಕೈಗೊಂಡಿರುವುದಾಗಿಯೂ ಅವರು ತಿಳಿಸಿದ್ದರು.

ಮಧ್ಯಪ್ರದೇಶ ಸರ್ಕಾರದ ನಿರ್ಧಾರಕ್ಕೆ ಅಮಿತ್‌ ಶಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ್ದ ಶಾ, ಪ್ರಧಾನಿ ಮೋದಿಯವರ ಕನಸು ನನಸಾಗುತ್ತಿದೆ ಎಂದು ಹೇಳಿದ್ದಾರೆ.

Uttar Pradesh To Begin Teaching Medical Engineering Courses in Hindi Yogi Adityanath

ಹಿಂದಿಯಲ್ಲಿ ವೈದ್ಯಕೀಯ ಶಿಕ್ಷಣ: ಪ್ರಧಾನಿ ಮೋದಿ ಶ್ಲಾಘನೆ

ಮಧ್ಯಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣವನ್ನು ಹಿಂದಿಯಲ್ಲಿ ನೀಡುತ್ತಿರುವ ವಿಚಾರವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಇದು ದೇಶದಲ್ಲಿ ಆಗುತ್ತಿರುವ ದೊಡ್ಡ ಧನಾತ್ಮಕ ಬದಲಾವಣೆ ಎಂದು ಅವರು ಬಣ್ಣಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮೋದಿ, 'ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳಾಗುತ್ತಿವೆ. ಈ ಆರಂಭವು ದೇಶದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಲಿದೆ' ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಬದಲಾಣೆಯಿಂದ ರಾಷ್ಟ್ರದ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಮಾತೃ ಭಾಷೆಯಲ್ಲಿ ಅಧ್ಯಯನ ಮಾಡಬಹುದು. ಇದರಿಂದ ಅವರಿಗೆ ಹೆಚ್ಚು ಅವಕಾಶಗಳು ತೆರೆದುಕೊಳ್ಳಲಿವೆ' ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+