ಉನ್ನಾವೋದಲ್ಲಿ ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್
ಉನ್ನಾವೋ, ಜುಲೈ 06: ಆಘಾತಕಾರಿ ವಿಷಯವೊಂದರಲ್ಲಿ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದ ಘಟನೆಯ ವಿಡಿಯೋವೊಂದು ವೈರಲ್ ಆಗಿದೆ.
ಮೂವರು ಪುರುಷರು ಮಹಿಳೆಯೊಬ್ಬರನ್ನು ಅರಣ್ಯಕ್ಕೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆಬೀಸಿದ್ದಾರೆ.
ಉತ್ತರ ಪ್ರದೇಶದ ಉನ್ನಾವೋ ದಲ್ಲಿ ಮಹಿಳೆಯನ್ನು ಮನೆಯಿಂದ ಅಪಹರಿಸಿ, ಸಮೀಪದ ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಲು ಪ್ರಯತ್ನಿಸಿದ ವಿಡಿಯೋ ಇದಾಗಿದ್ದು, ಈ ವಿಡಿಯೋವನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಉನ್ನಾವೋನಲ್ಲಿ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆನ್ಗಾರ್ ಎಂಬುವವರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ದಾಖಲಾಗಿತ್ತು.
ಇಡೀ ದೇಶದ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಪಾರದರ್ಶಕ ತನಿಖೆ ನಡೆಯಬೇಕೆಂಬ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಈ ಪ್ರಕರಣವನ್ನು ಸಿಬಿಐ ಗೆ ವಹಿಸಿತ್ತು. ಇದೀಗ ಇದೇ ಉನ್ನಾವೋವಿನಲ್ಲಿ ಮತ್ತೊಮ್ಮೆ ಸಮಾಜವೇ ತಲೆತಗ್ಗಿಸಬೇಕಾದ ಘಟನೆ ನಡೆದಿದೆ.












Click it and Unblock the Notifications