ಯಮುನಾ ಹೆದ್ದಾರಿ ಸೂಟ್‌ಕೇಸ್‌ನೊಳಗೆ ಪತ್ತೆ ಆಯ್ತು ಮಹಿಳೆ ಮೃತದೇಹ!
ಮಥುರಾ, ನವೆಂಬರ್ 21: ಕ್ರೈಂ ಲೋಕದಲ್ಲಿ ದಿನಕ್ಕೊಂದು ರೋಚಕ ಘಟನೆಗಳು ನಡೆಯುತ್ತವೆ. ಅಂಥದ್ದೇ ಒಂದು ಘಟನೆಯು ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇ ಬಳಿ ನಡೆದು ಹೋಗಿದೆ.
ಟ್ರಾಲಿ ಲಗೇಜ್‌ನಲ್ಲಿ ಪ್ಲಾಸ್ಟಿಕ್‌ನಲ್ಲಿ ಸುತ್ತಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೊಲೆಯಾದ ಮಹಿಳೆಗೆ ಇಪ್ಪತ್ತರ ಆಸುಪಾಸಿನ ವಯಸ್ಸು ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಮುಖದಲ್ಲಿ ರಕ್ತದ ಕಲೆಗಳಿದ್ದು, ಆಕೆಯ ದೇಹದಲ್ಲಿ ಗಾಯದ ಗುರುತುಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹಂತಕರು ಆಕೆಯನ್ನು ಬೇರೆ ಯಾವುದೋ ಸ್ಥಳದಲ್ಲಿ ಹತ್ಯೆ ಮಾಡಿದ್ದಾರೆ. ನಂತರ ಕೊಂದ ಶವವನ್ನು ರಾತ್ರಿಯಲ್ಲಿ ಹೆಚ್ಚು ಟ್ರಾಫಿಕ್ ಕಾಣದ ಎಕ್ಸ್‌ಪ್ರೆಸ್‌ವೇ ಬಳಿ ಎಸೆದು ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸರಿಗೆ ಮಾಹಿತಿ ನೀಡಿದ ಕಾರ್ಮಿಕರು: ಮಥುರಾದ ಬಳಿಯಿರುವ ಯಮುನಾ ಎಕ್ಸ್‌ಪ್ರೆಸ್‌ವೇ ಬಳಿ ಅಪರಿಚಿತ ಸೂಟ್‌ಕೇಸ್ ಅನ್ನು ನೋಡಿದ ಕಾರ್ಮಿಕರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸೂಟ್‌ಕೇಸ್ ಬಗ್ಗೆ ಅನುಮಾನಗೊಂಡು ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ಮಹಿಳೆಯ ಮೃತದೇಹ ಇರುವುದು ಪತ್ತೆಯಾಗಿದೆ.
ಸೂಟ್‌ಕೇಸ್ ಪತ್ತೆಯಾದ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿ ಮಹಾವನ್ ಅಲೋಕ್ ಸಿಂಗ್, ವಿಧಿವಿಜ್ಞಾನ ತಂಡವು ಸಾಕ್ಷ್ಯ ಮತ್ತು ಸಂಭವನೀಯ ಸುಳಿವುಗಳನ್ನು ಸಂಗ್ರಹಿಸಿದೆ ಎಂದು ಹೇಳಿದ್ದಾರೆ. ಇದರ ಮಧ್ಯೆ ಮಹಿಳೆಯ ಮೃತದೇಹವನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications