ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಜ.16ಕ್ಕೆ ಸಿದ್ಧ

|
Google Oneindia Kannada News

ಉತ್ತರಾಖಂಡ, ಜ.13: ಉತ್ತರಾಖಂಡ ವಿಧಾನಸಭಾ ಚುನಾವಣೆ ತನ್ನ ಅಭ್ಯರ್ಥಿಗಳ ಬಗ್ಗೆ ತಲೆಕೆಡಿಸಿಕೊಂಡಿರುವ ಬಿಜೆಪಿ ಜ.14 ಮತ್ತು 15ರಂದು ಎರಡು ದಿನ ನಿರಂತರ ಸಭೆ ನಡೆಸಿ ಅಭ್ಯರ್ಥಿಗಳ ತಲಾಶ್ ನಡೆಸಲಿದೆ.

ಭಾರತೀಯ ಜನತಾ ಪಕ್ಷದ ಉತ್ತರಾಖಂಡ ಚುನಾವಣಾ ಸಮಿತಿ ಸದಸ್ಯರು ಎರಡು ದಿನಗಳ ಉತ್ತರಾಖಂಡ ಪ್ರವಾಸ ಮಾಡಲಿದ್ದಾರೆ. ಸ್ಥಳೀಯ ನಾಯಕರ ಜೊತೆ ನಿರಂತರ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಲಿದ್ದಾರೆ.

ಉತ್ತರಾಖಂಡಕ್ಕೆ ಭೇಟಿ ನೀಡಲಿರುವ ಬಿಜೆಪಿ ಪಕ್ಷದ ಚುನಾವಣಾ ಸಮಿತಿ ಸದಸ್ಯರು ಜ.14ರಂದು ಸಭೆ ನಡೆಸಿ ಕ್ಷೇತ್ರವಾರು ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಿದ್ದಾರೆ. ಜ.15ರಂದು ಪಟ್ಟಿಯ ಪರಾಮರ್ಶೆ ನಡೆಸಲಾಗುತ್ತದೆ. ಉತ್ತರಾಖಂಡ ಚುನಾವಣೆ ಸಂಬಂಧ ನೇಮಿಸಲಾಗಿರುವ ಬಿಜೆಪಿ ರಾಷ್ಟ್ರೀಯ ಉಸ್ತುವಾರಿಗಳು ಜ.16ರಂದು ನವದೆಹಲಿಯಲ್ಲಿ ಸಭೆ ನಡೆಸಲಿದ್ದು, ಅಲ್ಲಿ ಉತ್ತರಾಖಂಡದ 70 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ದಗೊಳ್ಳುತ್ತದೆ ಎಂದು ಮೂಲಗಳು ತಿಳಿಸಿವೆ.

Uttarakhand Assembly Election: BJP Candidate finalise by Jan 16

ಬಿಜೆಪಿ ಉತ್ತರಾಖಂಡ ಚುನಾವಣೆಗಾಗಿ ಇದುವರೆಗೂ ಚುನಾವಣಾ ಸಮಿತಿಯನ್ನು ನೇಮಿಸಿಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಸಮಿತಿಯಲ್ಲಿ ಯಾರು ಇರಬೇಕು ಎಂಬ ಪಟ್ಟಿಯನ್ನು ಈಗಾಗಲೇ ಬಿಜೆಪಿ ಹಿರಿಯ ನಾಯಕರಿಗೆ ಕಳುಹಿಸಲಾಗಿದ್ದು, ಅವರ ಒಪ್ಪಿಗೆಗಾಗಿ ಕಾಯಲಾಗುತ್ತಿದೆ. ಒಂದು ಅಥವಾ ಎರಡು ದಿನಗಳಲ್ಲಿ ಸಮಿತಿ ನೇಮಕ ಆಗಿ ಅವರು ಉತ್ತರಾಖಂಡಕ್ಕೆ ತೆರಳುತ್ತಾರೆ ಎಂದು ಮೂಲಗಳು ತಿಳಿಸಿವೆ.

70 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಪ್ರತಿ ಕ್ಷೇತ್ರಕ್ಕೂ ಇಬ್ಬರು ಮೂವರು ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಚುನಾವಣಾ ಸಮಿತಿಯು ಆಕಾಂಕ್ಷಿಗಳ ಪಟ್ಟಿಯನ್ನಷ್ಟೇ ಸಿದ್ಧಪಡಿಸುತ್ತದೆ. ಜ.16ರಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಷಾ ಅವರ ನೇತೃತ್ವದಲ್ಲಿ ನಡೆಯುವ ಪಕ್ಷದ ಕೋರ್ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಅಂತಿಮ ಪಟ್ಟಿಗೆ ಅನುಮೋದನೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಈಗಾಗಲೇ ರಾಜ್ಯದ ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿ ಚುನಾವಣಾ ಸಂಬಂಧಿತ ಪಕ್ಷದ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವರ್ಚುವಲ್ ಸಭೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಪಕ್ಷ ಸೂಚಿಸಿದೆ. ಆದರೆ, ಇಲ್ಲಿ ಹೆಚ್ಚಿನ ಗುಡ್ಡಗಾಡು ಪ್ರದೇಶ ಇರುವುದರಿಂದ ವರ್ಚುವಲ್ ಸಭೆಗಳು ಹೆಚ್ಚಿನ ಉಪಯೋಗ ಆಗುವುದಿಲ್ಲ ಎಂಬುದನ್ನು ಪಕ್ಷದ ಗಮನಕ್ಕೆ ತರಲು ಸ್ಥಳೀಯ ಮುಖಂಡರು ನಿರ್ಧರಿಸಿದ್ದಾರೆ.

ಫೆ.14ರಂದು ಮತದಾನ
ಉತ್ತರಾಖಂಡದಲ್ಲಿ ಜನವರಿ 21ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 21ರಿಂದ ಜ.28ರವರೆಗೆ ಅವಕಾಶವಿರುತ್ತದೆ. ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿದೆ.

Recommended Video

mekedatu padayatra ಕೊನೆಗೊಳಿಸಿದ್ದಕ್ಕೆ ಕಾರಣ ತಿಳಿಸಿದ Siddaramaiah | Oneindia Kannada

ಉತ್ತರಾಖಂಡ ರಾಜ್ಯದ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಉತ್ತರಾಖಂಡ ಅಭ್ಯರ್ಥಿಗಳ ವೆಚ್ಚದ ಮಿತಿ 40 ಲಕ್ಷ ರೂ. ಇರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

English summary
Bharatiya Janata Party's Uttarakhand Election Committee will visit Uttarakhand for two days. He will hold regular meetings with local leaders and prepare a list of candidates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X