ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ 3 ಸಾವು, ನಾಲ್ವರು ನಾಪತ್ತೆ

|
Google Oneindia Kannada News

ಉತ್ತರಕಾಶಿ, ಜುಲೈ 19: ಉತ್ತರಾಖಂಡದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಉತ್ತರ ಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಮೇಘಸ್ಫೋಟದಿಂದ ಮೂವರು ಮೃತಪಟ್ಟಿದ್ದು, ನಾಲ್ಕು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಒಬ್ಬ ಪುರುಷ, ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಸೇರಿದಂತೆ ನಾಪತ್ತೆ ಆಗಿರುವ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಇನ್ಸ್ ಪೆಕ್ಟರ್ ಜಗದಂಬಾ ಪ್ರಸಾದ್ ತಿಳಿಸಿದ್ದಾರೆ.

ಭಾರಿ ಮಳೆಯಿಂದ ಗೋಡೆ ಕುಸಿತ, 11 ಮಂದಿ ದುರ್ಮರಣಭಾರಿ ಮಳೆಯಿಂದ ಗೋಡೆ ಕುಸಿತ, 11 ಮಂದಿ ದುರ್ಮರಣ

ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸೂಚನೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಮ್ಮು, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಶ್ಚಿಮ ಉತ್ತರ ಪ್ರದೇಶ, ವಾಯುವ್ಯ ಮಧ್ಯಪ್ರದೇಶ, ಪೂರ್ವ ರಾಜಸ್ಥಾನ, ಪಶ್ಚಿಮ ರಾಜಸ್ಥಾನ, ದಕ್ಷಿಣ ಹರಿಯಾಣ, ಪಶ್ಚಿಮ ಬಂಗಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಭಾರಿ ಮಳೆ ಬೀಳುವ ಸಾಧ್ಯತೆಯಿದೆ. ಜುಲೈ 21ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Uttarakhand Cloudburst: 3 Dead, 4 People Missing After in Uttarkashi District

ಗಂಗಾ-ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ:

ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಉತ್ತರಾಖಂಡದಲ್ಲಿ ಗಂಗಾ-ಯಮುನಾ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಡೆಹ್ರಾಡೂನ್‌ನಲ್ಲಿ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ನದಿಗಳ ಹರಿವಿನ ಮೇಲೆ ನಿರಂತರ ಜಾಗರೂಕತೆ ವಹಿಸಲಾಗಿದೆ. ಕಳೆದ ವಾರವಷ್ಟೇ ಉತ್ತರಕಾಶಿ ಜಿಲ್ಲೆಯ ದಬ್ರಾಣಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತ ಸಂಭವಿಸಿತ್ತು. ಭೂಮಿ ಕುಸಿತದಿಂದ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು.

English summary
Uttarakhand Cloudburst: 3 Dead, 4 People Missing After in Uttarkashi District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X