ಉತ್ತರಾಖಂಡ್; ಸಿಎಂ ಸೇರಿ ಎಲ್ಲಾ ಸಚಿವರಿಗೆ ಹೋಂ ಕ್ವಾರಂಟೈನ್

ನವದೆಹಲಿ, ಮೇ 31 : ಉತ್ತರಾಖಂಡ್ ರಾಜ್ಯದಲ್ಲಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಸಂಪುಟದ ಎಲ್ಲಾ ಸಚಿವರನ್ನು ಹೋಂ ಕ್ವಾರಂಟೈನ್‌ಗೆ ಹಾಕಲಾಗಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಮೇ 29ರ ಶುಕ್ರವಾರ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ಸಂಪುಟ ದರ್ಜೆ ಸಚಿವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಭಾನುವಾರ ಖಚಿತವಾಗಿದೆ.

ಸಂಪುಟ ದರ್ಜೆ ಸಚಿವರು, ಅವರ ಕುಟುಂಬ ಸದಸ್ಯರು, ಕಚೇರಿ ಸಿಬ್ಬಂದಿ ಸೇರಿದಂತೆ 22 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಭಾನುವಾರ ಖಚಿತವಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ಪಾಲ್ ಕುಮಾರ್ ಸಿಂಗ್ ಹೇಳಿದ್ದಾರೆ.

Uttarakhand CM And Other Cabinet Ministers Placed Under Home Quarantine

ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಸೇರಿದಂತೆ ಎಲ್ಲಾ ಸಚಿವರನ್ನು ಹೋಂ ಕ್ವಾರಂಟೈನ್‌ನಲ್ಲಿಡಲಾಗಿದೆ. ಕೋವಿಡ್ - 19 ಸೋಂಕು ದೃಢವಾದ ಸಚಿವರನ್ನು ಋಷಿಕೇಶದಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಉತ್ತರಾಖಂಡ್ ರಾಜ್ಯದಲ್ಲಿ ಭಾನುವಾರ ಒಟ್ಟು 158 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 907. ಇದುವರೆಗೂ ರಾಜ್ಯದಲ್ಲಿ 5 ಜನರು ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+