ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಧಾಮಿ ಭರವಸೆ
ರಾಜ್ಯದ ಮುಖ್ಯಮಂತ್ರಿ ಆಗಿ ಎರಡನೇ ಬಾರಿ ಪುಷ್ಕರ್ ಸಿಂಗ್ ಧಾಮಿ ಅವರನ್ನೇ ಮುಂದುವರಿಸುವುದಕ್ಕೆ ಬಿಜೆಪಿ ನಿರ್ಧರಿಸಿತು. ಸೋಮವಾರ ಕೇಂದ್ರದ ನಾಯಕರು ಈ ನಿರ್ಧಾರ ಘೋಷಿಸಿದ್ದು, ಮಾರ್ಚ್ 23ರ ಬುಧವಾರ ರಾಜ್ಯದ ಮುಖ್ಯಮಂತ್ರಿ ಆಗಿ ಧಾಮಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಉತ್ತರಾಖಂಡದ ಬಿಜೆಪಿ ಶಾಸಕಾಂಗ ಪಕ್ಷದ ಮುಖ್ಯಸ್ಥರಾಗಿ ಆಯ್ಕೆ ಆಗುತ್ತಿದ್ದಂತೆ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. "ರಾಜ್ಯದಲ್ಲಿ ಚುನಾವಣೆಗೂ ಮುನ್ನ ಬಿಜೆಪಿ ನೀಡಿದ ಆಶ್ವಾಸನೆಗಳನ್ನು ಸಾಕಾರಗೊಳಿಸುವುದಕ್ಕೆ ನಾವು ಬದ್ಧವಾಗಿದ್ದೇವೆ. ನಾವು ನೀಡಿರುವ ಆಶ್ವಾಸನೆಗಳಲ್ಲಿ ಏಕರೂಪ ನಾಗರಿಕ ಸಂಹಿತೆಯೂ ಪ್ರಮುಖವಾಗಿದೆ. ಅದನ್ನು ನಾವು ರಾಜ್ಯದಲ್ಲಿ ಜಾರಿಗೊಳಿಸುತ್ತೇವೆ," ಎಂದರು.
ಉನ್ನತ ಸಮಿತಿ ರಚನೆಯ ಭರವಸೆ ನೀಡಿದ್ದ ಧಾಮಿ:
ಉತ್ತರಾಖಂಡದ ವಿಧಾನಸಭಾ ಚುನಾವಣೆಯ ಪ್ರಚಾರ ಅಂತ್ಯಗೊಳ್ಳುವ ಸ್ವಲ್ಪ ಸಮಯದ ಮೊದಲು, ಸಂಹಿತೆಯ ಕರಡು ತಯಾರಿಸಲು ಕಾನೂನು ತಜ್ಞರು, ಹಿರಿಯ ನಾಗರಿಕರು ಮತ್ತು ಬುದ್ಧಿಜೀವಿಗಳನ್ನು ಒಳಗೊಂಡ ಉನ್ನತ ಸಮಿತಿಯನ್ನು ರಚಿಸುವುದಾಗಿ ಧಾಮಿ ಭರವಸೆ ನೀಡಿದ್ದರು.

ಏನಿದು ಏಕರೂಪ ನಾಗರಿಕ ಸಂಹಿತೆ?:
ಜನರು ಒಳಪಡುವ ಧರ್ಮ, ಜಾತಿ ಮತ್ತು ಜನಾಂಗ, ಬುಡಕಟ್ಟುಗಳ ಹೊರತಾಗಿ ಎಲ್ಲಾ ಜನರಿಗೆ ಅನ್ವಯಿಸುವ ಒಂದೇ ವರ್ಗದ ಜಾತ್ಯತೀತ ಪೌರ ಕಾನೂನುಗಳ ಮೂಲಕ ಆಡಳಿತ ನಡೆಸುತ್ತದೆ. ಈ ಕಾನೂನು ತಮ್ಮ ಧರ್ಮ ಅಥವಾ ಜಾತಿ ಅಥವಾ ಜನಾಂಗ, ಬುಡಕಟ್ಟುಗಳ ಮೇಲೆ ಆಧಾರಿತವಾಗಿ ಪ್ರತ್ಯೇಕ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ಆಡಳಿತಕ್ಕೊಳಪಡುವ ನಾಗರಿಕರ ಹಕ್ಕನ್ನು ರದ್ದುಗೊಳಿಸುತ್ತದೆ. ಅಂತಹ ಸಂಹಿತೆಗಳು ಬಹುತೇಕ ಆಧುನಿಕ ರಾಷ್ಟ್ರಗಳಲ್ಲಿ ಈಗಾಗಲೇ ಜಾರಿಯಲ್ಲಿವೆ. ನಾಗರಿಕ ನೀತಿಸಂಹಿತೆಯ ವ್ಯಾಪ್ತಿಯಲ್ಲಿ ಒಳಪಡುವ ಸಾಮಾನ್ಯ ಕ್ಷೇತ್ರಗಳೆಂದರೆ ಆಸ್ತಿಪಾಸ್ತಿಗಳ ಸ್ವಾಧೀನಪಡಿಸಿಕೊಳ್ಳುವಿಕೆ ಮತ್ತು ಆಡಳಿತ, ಮದುವೆ, ವಿಚ್ಛೇದನ ಮತ್ತು ದತ್ತುಸ್ವೀಕಾರಗಳಾಗಿವೆ.
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಕುರಿತು ಭಾರತೀಯ ಜನತಾ ಪಕ್ಷ ದಶಕಗಳಿಂದ ಆಸಕ್ತಿ ತೋರುತ್ತಾ ಬಂದಿದೆ. ಆದರೆ, ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿ ಪಕ್ಷಗಳು ಏಕರೂಪ ನಾಗರಿಕ ಸಂಹಿತೆಯ ವಿರೋಧಿ ನಿಲುವು ಹೊಂದಿವೆ.
ಕೇಂದ್ರದ ನಾಯಕರಿಗೆ ಧನ್ಯವಾದ ಹೇಳಿದ ಧಾಮಿ:
"ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಮತ್ತು ಬಿಜೆಪಿ ಗೆಲುವಿಗೆ ಕಾರಣವಾದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನ್ನಂತಹ ಸಾಮಾನ್ಯ ಕಾರ್ಯಕರ್ತ ಮತ್ತು ಸೈನಿಕನ ಮಗನ ಮೇಲೆ ವಿಶ್ವಾಸ ತೋರಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಉತ್ತರಾಖಂಡದ ಪಕ್ಷದ ಕೇಂದ್ರ ವೀಕ್ಷಕರಾಗಿದ್ದ ರಾಜನಾಥ್ ಸಿಂಗ್ ಅವರಿಗೆ ನಾನು ಧನ್ಯವಾದ ಎಂದು ಧಾಮಿ ಹೇಳಿದ್ದಾರೆ.
"ನಾವು ಪಾರದರ್ಶಕ ಸರ್ಕಾರವನ್ನು ನೀಡುತ್ತೇವೆ. ಜನರಿಗೆ ನೀಡಿದ ಆಶ್ವಾಸನೆಗಳನ್ನು ಪೂರೈಸುತ್ತೇವೆ. ಪ್ರಧಾನಿಯವರು ಉತ್ತರಾಖಂಡದ ಅಭಿವೃದ್ಧಿಗಾಗಿ ತಮ್ಮ ದೂರದೃಷ್ಟಿಯನ್ನು ನಮಗೆ ನೀಡಿದ್ದಾರೆ. ನಾವು ಅವರ ದೃಷ್ಟಿಕೋನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇವೆ. 2025ರಲ್ಲಿ ತನ್ನ ಅಸ್ತಿತ್ವದ ಬೆಳ್ಳಿ ಮಹೋತ್ಸವವನ್ನು ಆಚರಿಸುವಾಗ ಉತ್ತರಾಖಂಡವನ್ನು ಪ್ರಮುಖ ರಾಜ್ಯವನ್ನಾಗಿ ಮಾಡುತ್ತೇವೆ," ಎಂದು ಧಾಮಿ ಹೇಳಿದರು.
ಉತ್ತರಾಖಂಡ ವಿಧಾನಸಭೆ ಚುನಾವಣೆ ಫಲಿತಾಂಶ:
ಕೇಂದ್ರ ಚುನಾವಣಾ ಆಯೋಗದ ಪ್ರಕಾರ, ಉತ್ತರಾಖಂಡದ 70 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಗಳಿಸುವಲ್ಲಿ ಯಶಸ್ವಿಯಾಗಿದೆ. ಯಾವುದೇ ಪಕ್ಷ ಸರ್ಕಾರ ರಚಿಸುವುದಕ್ಕೆ ಮ್ಯಾಜಿಕ್ ನಂಬರ್ 36 ಆಗಿದೆ. ಆದರೆ ಬಿಜೆಪಿಯು 47 ಕ್ಷೇತ್ರಗಳಲ್ಲಿ ಗೆಲುವಿನ ಪತಾಕೆ ಹಾರಿಸುವ ಮೂಲಕ ಅಧಿಕಾರವನ್ನು ಪಕ್ಕಾ ಮಾಡಿಕೊಂಡಿದೆ. 19 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅತಿಹೆಚ್ಚು ಸ್ಥಾನ ಗಳಿಸಿದ ಎರಡನೇ ಪಕ್ಷವಾಗಿ ಹೊರ ಹೊಮ್ಮಿದೆ. ಉಳಿದಂತೆ ಬಹುಜನ ಸಮಾಜವಾದಿ ಪಕ್ಷ 2, ಸ್ವತಂತ್ರ್ಯ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದಾರೆ.
-
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
Prem controversy: ಅಸಹ್ಯ ಆಗ್ತಿದೆ ಪ್ರೇಮ್, ಎಲ್ಲಿ ಹೋದ್ರು ವಕೀಲರು: ಕೆಡಿ ಹಾಡಿನ ವಿರುದ್ಧ ತಣಿಯದ ಆಕ್ರೋಶ -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications