ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

Pushkar Singh Dhami Swearing-in Live: ಪುಷ್ಕರ್ ಸಿಂಗ್ ಧಾಮಿ ಪ್ರಮಾಣ ವಚನ ಸ್ವೀಕಾರ

|
Google Oneindia Kannada News

ಡೆಹ್ರಾಡೂನ್, ಮಾರ್ಚ್ 23: ಉತ್ತರಾಖಂಡದ 11ನೇ ಮುಖ್ಯಮಂತ್ರಿ ಆಗಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎರಡನೇ ಬಾರಿ ರಾಜ್ಯದ ಸಿಎಂ ಆಗುತ್ತಿರುವ ಧಾಮಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಡೆಹ್ರಾಡೂನ್ ಪರೇಡ್ ಮೈದಾನದಲ್ಲಿ ಮಾರ್ಚ್ 23ರ ಬುಧವಾರ ಮಧ್ಯಾಹ್ನ 2.30ರಿಂದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಆರಂಭವಾಗಲಿದೆ. ನೂತನ ಮುಖ್ಯಮಂತ್ರಿ ಜೊತೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಉತ್ತರಾಖಂಡದ ನೂತನ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಧ್ಯಪ್ರದೇಶ ಮತ್ತು ಹರಿಯಾಣದ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಉತ್ತರಾಖಂಡ ನೂತನ ಸಿಎಂ ಪದಗ್ರಹಣದ ಕುರಿತು ಕ್ಷಣಕ್ಷಣದ ಮಾಹಿತಿಗಾಗಿ ಮುಂದೆ ಓದಿ.

 Uttarakhand CM Pushkar Singh Dhami Swearing in Live Updates and Highlights in Kannada

Newest FirstOldest First
4:01 PM, 23 Mar

ಎರಡನೇ ಬಾರಿಗೆ ಸಿಎಂ ಆಗಿದ್ದಕ್ಕೆ ಪುಷ್ಕರ್ ಸಿಂಗ್ ಧಾಮಿ ಅವರನ್ನು ಅಭಿನಂದಿಸುತ್ತೇನೆ, ರಾಜ್ಯದ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಕೆಲಸ ಮಾಡುತ್ತದೆ ಎಂಬ ಭರವಸೆ ನನಗಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್
4:00 PM, 23 Mar

ನಾಳೆ, ಮಾರ್ಚ್ 24 ರಂದು ನಾವು ನಮ್ಮ ಮೊದಲ ಕ್ಯಾಬಿನೆಟ್ ಸಭೆಯನ್ನು ನಡೆಸುತ್ತೇವೆ. ಮುಂಬರುವ ದಶಕವು ಉತ್ತರಾಖಂಡದ್ದು ಆಗಿರುತ್ತದೆ. ನಮ್ಮ ರಾಜ್ಯದ ಅಭಿವೃದ್ಧಿಗಾಗಿ ಇಂದಿನಿಂದ ಕೆಲಸ ಮಾಡಲಿದ್ದೇವೆ: ಎರಡನೇ ಅವಧಿಗೆ ಉತ್ತರಾಖಂಡ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪುಷ್ಕರ್ ಸಿಂಗ್ ಧಾಮಿ
3:34 PM, 23 Mar

ಮಾಜಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ರೇಖಾ ಆರ್ಯ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರೇಖಾ ಆರ್ಯ ಸೋಮೇಶ್ವರ ಕ್ಷೇತ್ರದ ಶಾಸಕಿ. ರೇಖಾ ಆರ್ಯ 2003ರಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಪಂಚಾಯತ್ ಸದಸ್ಯೆಯಾದರು. 2017ರಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ರೇಖಾ ಆರ್ಯ ಬಿಜೆಪಿ ಸೇರಿ ಬಿಜೆಪಿ ಟಿಕೆಟ್‌ ಪಡೆದು ವಿಧಾನಸಭೆ ಚುನವಣೆ ಸ್ಪರ್ಧಿಸಿದ್ದರು.
3:26 PM, 23 Mar

ಸೀತಾರಂಗಜ್ ಶಾಸಕ ಸೌರಭ್ ಬಹುಗುಣ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸೌರಭ್ ಬಹುಗುಣ ಅವರು ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರ ಪುತ್ರ. ಸೌರಭ್ ಮೊದಲ ಬಾರಿಗೆ ಸಚಿವರಾಗಿದ್ದಾರೆ. 2017ರ ಚುನಾವಣೆಯಲ್ಲಿ ಸೀತಾರಂಗಜ್‌ನಿಂದಲೂ ಗೆದ್ದಿದ್ದರು.
3:02 PM, 23 Mar

ಪುಷ್ಕರ್‌ ಸಿಂಗ್‌ ಧಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸೇರಿದಂತೆ ವಿವಿಧ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು, ಪಕ್ಷದ ನಾಯಕರು ಉಪಸ್ಥಿತರಿದ್ದರು ಶಿವರಾಜ್ ಸಿಂಗ್ ಚೌಹಾಣ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಮತ್ತು ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್ ಕೂಡಾ ಉಪಸ್ಥಿತರಿದ್ದರು.
2:56 PM, 23 Mar

ಬಿಜೆಪಿ ಜಯಭೇರಿ ಬಾರಿಸಿದ ನಾಲ್ಕು ರಾಜ್ಯಗಳಲ್ಲಿ ಉತ್ತರಾಖಂಡವೂ ಒಂದಾಗಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗಿ ಪುಷ್ಕರ್‌ ಸಿಂಗ್ ಧಾಮಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇವರೊಂದಿಗೆ ಸಂಪುಟದ ಸಚಿವರೂ ಪ್ರಮಾಣ ವಚನ ಸ್ವೀಕಾರ ಮಾಡಿದರು.
2:40 PM, 23 Mar

ಎರಡನೇ ಬಾರಿಗೆ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಪುಷ್ಕರ್‌ ಸಿಂಗ್‌ ಧಾಮಿ
Advertisement
2:38 PM, 23 Mar

ಪುಷ್ಕರ್‌ ಸಿಂಗ್‌ ಧಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿ
2:31 PM, 23 Mar

ಉತ್ತರಾಖಂಡದಲ್ಲಿ ಪುಷ್ಕರ್‌ ಸಿಂಗ್‌ ಧಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭಾಗಿ
2:18 PM, 23 Mar

ಪುಷ್ಕರ್‌ ಸಿಂಗ್‌ ಧಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಇದರಲ್ಲಿ ಕೆಲವು ಹೊಸ ಮುಖಗಳು ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ. ಧಾಮಿ ಅವರು ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
10:07 AM, 23 Mar

ವಿಧಾನಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರು ಧಾಮಿ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ್ದಾರೆ.
10:07 AM, 23 Mar

ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಕ್ಷವೊಂದು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದ್ದು, ಹಂಗಾಮಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Advertisement
11:52 PM, 22 Mar

ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆಗಳಿವೆ.
11:38 PM, 22 Mar
ಉತ್ತರಾಖಂಡ

ರಾಜ್ಯದಲ್ಲಿ ಬಿಜೆಪಿಯ ಹೊರತಾಗಿ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಅತಿಹೆಚ್ಚು ಸ್ಥಾನ ಗಳಿಸಿದ ಎರಡನೇ ಪಕ್ಷವಾಗಿ ಹೊರ ಹೊಮ್ಮಿದೆ. ಉಳಿದಂತೆ ಬಹುಜನ ಸಮಾಜವಾದಿ ಪಕ್ಷ 2, ಸ್ವತಂತ್ರ್ಯ ಅಭ್ಯರ್ಥಿಗಳು 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
11:38 PM, 22 Mar
ಉತ್ತರಾಖಂಡ

ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು 47 ಕ್ಷೇತ್ರಗಳಲ್ಲಿ ಗೆಲುವಿನ ಪತಾಕೆ ಹಾರಿಸುವ ಮೂಲಕ ಅಧಿಕಾರವನ್ನು ಪಕ್ಕಾ ಮಾಡಿಕೊಂಡಿದೆ.
11:38 PM, 22 Mar
ಉತ್ತರಾಖಂಡ

ಉತ್ತರಾಖಂಡದ 70 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಗಳಿಸುವಲ್ಲಿ ಯಶಸ್ವಿಯಾಗುವ ಮೂಲಕ ಎರಡನೇ ಬಾರಿ ಅಧಿಕಾರದ ಗದ್ದುಗೆ ಹಿಡಿದಿದೆ.
11:37 PM, 22 Mar
ಉತ್ತರಾಖಂಡ

ಬುಧವಾರ ನಡೆಯಲಿರುವ ನಿಯೋಜಿತ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಕಾರ್ಯಕ್ರಮದಲ್ಲಿ 40 ರಿಂದ 50 ಸಾವಿರ ಜನರು ಭಾಗವಹಿಸುವ ಸಾಧ್ಯತೆಗಳಿವೆ.

English summary
Pushkar Singh Dhami Swearing in Live Updates in Kannada: BJP's Pushkar Singh Dhami to take oath as Uttarakhand chief minister on March 23. Check Live updates, news and Highlights
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X